ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ವಿದೇಶಗಳಿಗೆ ರಫ್ತಾಗಲಿದೆ ಹೋಂಡಾ ಸಿಟಿ ಕಾರು

ಜಪಾನ್ ಮೂಲದ ಹೋಂಡಾ ಕಂಪನಿಯು ತನ್ನ ಬಹುನಿರೀಕ್ಷಿತ 2020ರ ಸಿಟಿ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಹೋಂಡಾ ಸಿಟಿ ಕಾರಿನ ಪ್ರಾರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.10.90 ಲಕ್ಷಗಳಾಗಿದೆ.

ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ವಿದೇಶಗಳಿಗೆ ರಫ್ತಾಗಲಿದೆ ಹೋಂಡಾ ಸಿಟಿ ಕಾರು

ಹೋಂಡಾ ಇಂಡಿಯಾ ಕಂಪನಿಯು ಭಾರತದಲ್ಲಿ ತಯಾರಿಸಿದ ಹೊಸ ಸಿಟಿ ಕಾರುಗಳನ್ನು ಜಾಗತಿಕ ಮಾರುಕಟ್ಟೆಗಳಿಗೆ ರಫ್ತು ಮಾಡಲು ಯೋಜನೆಯನ್ನು ರೂಪಿಸಿದೆ. ಸರ್ಕಾರದ ‘ಮೇಕ್ ಇನ್ ಇಂಡಿಯಾ' ಯೋಜನೆಯಡಿಯಲ್ಲಿ ಹೋಂಡಾ ಸಿಟಿ ಕಾರುಗಳನ್ನು ಪಶ್ಚಿಮ ಏಷ್ಯಾ ದೇಶಗಳನ್ನು ಸೇರಿದಂತೆ ಇತರ ಹಲವು ಹೊಸ ಮಾರುಕಟ್ಟೆಗಳಿಗೆ ರಫ್ತು ಮಾಡಲಾಗುತ್ತದೆ. ಈ ವರ್ಷದ ಕೊನೆಯಲ್ಲಿ ಹೊಸ ಹೋಂಡಾ ಸಿಟಿ ಕಾರಿನ ರಫ್ತನ್ನು ಪ್ರಾರಂಭಿಸಲಿದೆ ಎಂದು ಹೋಂಡಾ ಕಾರ್ಸ್ ಇಂಡಿಯಾ ಲಿಮಿಟೆಡ್‌ನ ಹಿರಿಯ ಉಪಾಧ್ಯಕ್ಷರಾದ ರಾಜೇಶ್ ಗೋಯೆಲ್ ಹೇಳಿದ್ದಾರೆ.

ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ವಿದೇಶಗಳಿಗೆ ರಫ್ತಾಗಲಿದೆ ಹೋಂಡಾ ಸಿಟಿ ಕಾರು

ಗ್ರೇಟರ್ ನೋಯ್ಡಾ, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ತಪುಕರದಲ್ಲಿರುವ ಹೋಂಡಾ ಇಂಡಿಯಾ ಕಂಪನಿಯ ಘಟಕಗಳಲ್ಲಿ ತಯಾರಿಸುವ ಹೋಂಡಾ ಸಿಟಿಗಳನ್ನು ವಿದೇಶಗಳಿಗೆ ರಫ್ತು ಮಾಡುತ್ತಾರೆ.

MOST READ: ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ನಿಸ್ಸಾನ್ ಮ್ಯಾಗ್ನೆಟ್ ಎಸ್‍ಯುವಿ

ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ವಿದೇಶಗಳಿಗೆ ರಫ್ತಾಗಲಿದೆ ಹೋಂಡಾ ಸಿಟಿ ಕಾರು

ಹೊಸ ತಲೆಮಾರಿನ ಸಿಟಿ ಕಾರು ವಿ, ವಿಎಕ್ಸ್, ಝೆಡ್ಎಕ್ಸ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಈ ಹೊಸ ಕಾರಿನಲ್ಲಿ ಎಲ್ಇಡಿ ಹೆಡ್‍‌ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, ಎಲ್‌ಇಡಿ ಡಿಆರ್‌ಎಲ್, ಎಲ್ ಶೇಪ್ಡ್ ಎಲ್ಇಡಿ ಟರ್ನ್ ಸಿಗ್ನಲ್, ಡೈನಾಮಿಕ್ ಇಂಡಿಕೇಟರ್ ನೀಡಲಾಗಿದೆ,

ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ವಿದೇಶಗಳಿಗೆ ರಫ್ತಾಗಲಿದೆ ಹೋಂಡಾ ಸಿಟಿ ಕಾರು

ಈ ಹೊಸ ಕಾರು 10ನೇ ತಲೆಮಾರಿನ ಸಿವಿಕ್ ಸೆಡಾನ್ ಮಾದರಿಯಿಂದಲೂ ಹಲವಾರು ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದೆ. ಇನ್ನು ಈ ಹೊಸ ಹೋಂಡಾ ಸಿಟಿ ಕಾರು 4,549 ಎಂಎಂ ಉದ್ದ, 1,748 ಎಂಎಂ ಅಗಲ, 1,489 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ.

MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ವಿದೇಶಗಳಿಗೆ ರಫ್ತಾಗಲಿದೆ ಹೋಂಡಾ ಸಿಟಿ ಕಾರು

2020ರ ಸಿಟಿ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಲಭ್ಯವಿದೆ. ಇದರಲ್ಲಿ 1.5-ಲೀಟರ್ ಐ-ವಿಟಿಇಸಿ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಐ-ಡಿಟಿಇಸಿ ಡೀಸೆಲ್ ಎಂಜಿನ್ ಅನ್ನು ಹೊಂದಿದೆ.

ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ವಿದೇಶಗಳಿಗೆ ರಫ್ತಾಗಲಿದೆ ಹೋಂಡಾ ಸಿಟಿ ಕಾರು

1.5-ಲೀಟರ್ ಐ-ವಿಟಿಇಸಿ ಪೆಟ್ರೋಲ್ ಎಂಜಿನ್ 120 ಬಿಹೆಚ್‍ಪಿ ಪವರ್ ಮತ್ತು 145 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.5-ಲೀಟರ್ ಐ-ಡಿಟಿಇಸಿ ಡೀಸೆಲ್ ಎಂಜಿನ್ 100 ಬಿಹೆಚ್‍ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ವಿದೇಶಗಳಿಗೆ ರಫ್ತಾಗಲಿದೆ ಹೋಂಡಾ ಸಿಟಿ ಕಾರು

ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ. ಇನ್ನು ಪೆಟ್ರೋಲ್ ಎಂಜಿನ್ ನೊಂದಿಗೆ 7-ಸ್ಫೀಡ್ ಸಿವಿಟಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ.

ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ವಿದೇಶಗಳಿಗೆ ರಫ್ತಾಗಲಿದೆ ಹೋಂಡಾ ಸಿಟಿ ಕಾರು

ಹೋಂಡಾ ಸಿಟಿ ಕಾರು ಭಾರತದಲ್ಲಿ ಜನಪ್ರಿಯ ಸೆಡಾನ್ ಗಳಲ್ಲಿ ಒಂದಾಗಿದೆ. ಹೋಂಡಾ ಸಿಟಿ ಭಾರತೀಯ ಮಾರುಟ್ಟೆಯಲ್ಲಿ ಹ್ಯುಂಡೈ ವೆರ್ನಾ, ಸ್ಕೋಡಾ ರ‍್ಯಾಪಿಡ್, ಫೋಕ್ಸ್‌ವ್ಯಾಗನ್ ವೆಂಟೊ, ಮತ್ತು ಟೊಯೊಟಾ ಯಾರೀಸ್ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
Read more on ಹೋಂಡಾ honda
English summary
2020 Honda City Exports In Plans As Part Of ‘Make In India’ Policy. Read In Kannada.
Story first published: Saturday, July 18, 2020, 19:39 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X