ಭಾರತದಲ್ಲಿ ಬಿಡುಗಡೆಯಾಗುವುದಿಲ್ಲ ಹೊಂಡಾ ಸಿಟಿ ಆರ್‍ಎಸ್ ಪರ್ಫಾಮೆನ್ಸ್ ಮಾದರಿ

ಹೋಂಡಾ ಕಂಪನಿಯು ತನ್ನ 2020ರ ಸಿಟಿ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಆದರೆ ಭಾರತೀಯ ಮಾರುಕಟ್ಟೆಯಲ್ಲಿ ಪರ್ಫಾಮೆನ್ಸ್ ಮಾದರಿಯಾದ ಹೋಂಡಾ ಸಿಟಿ ಆರ್‍ಎಸ್ ಬಿಡುಗಡೆಯಾಗುವುದಿಲ್ಲ.

ಭಾರತದಲ್ಲಿ ಬಿಡುಗಡೆಯಾಗುವುದಿಲ್ಲ ಹೊಂಡಾ ಸಿಟಿ ಆರ್‍ಎಸ್ ಪರ್ಫಾಮೆನ್ಸ್ ಮಾದರಿ

ಹೋಂಡಾ ಕಂಪನಿಯು ಪರ್ಫಾಮೆನ್ಸ್ ಮಾದರಿಯಾದ ಸಿಟಿ ಆರ್‍ಎಸ್ ಕಾರು ಬಿಡುಗಡೆಗೊಳಿಸುವುದಿಲ್ಲ, ಆದರೆ ಭಾರತೀಯ ಮಾರುಕಟ್ಟೆಯಲ್ಲಿ ಸಾಮಾನ್ಯ ಹೊಸ ಹೋಂಡಾ ಸಿಟಿ ಮಾದರಿಯನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಸಾಮಾನ್ಯ ಹೊಸ ಹೋಂಡಾ ಸಿಟಿ 4,549 ಎಂಎಂ ಉದ್ದ, 1,784 ಎಂಎಂ ಅಗಲ, 1,489 ಎಂಎಂ ಎತ್ತರ ಮತ್ತು 2,600 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. ಹೊಸ ಹೋಂಡಾ ಸಿಟಿ ಪ್ರಸ್ತುತ ಮಾದರಿಗಿಂತ ಹೆಚ್ಚು ಉದ್ದ ಮತ್ತು ಅಗಲವನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗುವುದಿಲ್ಲ ಹೊಂಡಾ ಸಿಟಿ ಆರ್‍ಎಸ್ ಪರ್ಫಾಮೆನ್ಸ್ ಮಾದರಿ

ಹೋಂಡಾ ಸಿಟಿ ಮಾದರಿಯು ಹೋಂಡಾ ಕಂಪನಿಯ ಸರಣಿಯ ಕಾರುಗಳಲ್ಲಿ ಹಲವು ವರ್ಷಗಳಿಂದ ಹೆಚ್ಚು ಮಾರಾಟವಾಗುವ ಕಾರು ಆಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಹೋಂಡಾ ಸಿಟಿ, ವರ್ನಾ ಮತ್ತು ಸಿಯಾಜ್ ಒಂದೇ ರೀತಿಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿವೆ. ಭಾರತೀಯ ಮಾರುಕಟ್ಟೆಯಲ್ಲಿ ಪರ್ಫಾಮೆನ್ಸ್ ಮಾದರಿಗೆ ಮುಂದಿನ ದಿನಗಳಲ್ಲಿ ಬೇಡಿಕೆ ಹೆಚ್ಚಾದರೆ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ.

MOST READ: ಬಹಿರಂಗವಾಯ್ತು ದಟ್ಸನ್ ರೆಡಿ ಗೋ ಫೇಸ್‍‍ಲಿಫ್ಟ್ ಕಾರಿನ ಮಾಹಿತಿ

ಭಾರತದಲ್ಲಿ ಬಿಡುಗಡೆಯಾಗುವುದಿಲ್ಲ ಹೊಂಡಾ ಸಿಟಿ ಆರ್‍ಎಸ್ ಪರ್ಫಾಮೆನ್ಸ್ ಮಾದರಿ

ಇನ್ನು ಸಿಟಿ ಝಡ್ಎಕ್ಸ್ ನಲ್ಲಿ ಹೋಂಡಾ ಲೇನ್ ವಾಚ್ ಕ್ಯಾಮೆರಾ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಇದನ್ನು ಎಡ ಭಾಗದ ರೇರ್ ವ್ಯೂ ಮಿರರ್‍ ನಲ್ಲಿ ಈ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಹೊಸ ಹೋಂಡಾ ಸಿಟಿ ಕಾರು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಹೋಂಡಾ ಸಿವಿಕ್ ಮಾದರಿಯ ವಿನ್ಯಾಸವನ್ನು ಹೊಂದಿರಲಿದೆ.

ಭಾರತದಲ್ಲಿ ಬಿಡುಗಡೆಯಾಗುವುದಿಲ್ಲ ಹೊಂಡಾ ಸಿಟಿ ಆರ್‍ಎಸ್ ಪರ್ಫಾಮೆನ್ಸ್ ಮಾದರಿ

2020ರ ಹೋಂಡಾ ಸಿಟಿ ಕಾರಿನ ಮುಂಭಾಗ ಮತ್ತು ಹಿಂಭಾಗದಲ್ಲಿ ಎಲ್‍ಇಡಿ ಯು‍‍ನಿ‍ಟ್‍‍ಗಳು, ಹೋಂಡಾ ಸಿಗ್ನೇಚರ್ ಕ್ರೋಮ್ ಬಾರ್, ಕೂಪ್ ಸ್ಟೈಲ್ ಸ್ಲೋಪಿಂಗ್ ರೂಫ್‍‍ಲೈನ್ ಮತ್ತು ದೊಡ್ಡ ಒ‍ಆರ್‍‍ವಿಎಂ‍ಗಳಿವೆ. ಇನ್ನು ಹೊಸ ಹೋಂಡಾ ಕಾರಿನಲ್ಲಿ ಶಾರ್ಕ್ ಫಿನ್ ಆಂಟೆನಾ, ಟೇಲ್ ಸೆಗ್‍ಮೆಂಟ್ ಮತ್ತು ಉತ್ತಮವಾದ ಬೂಟ್ ಲಿ‍ಡ್‍‍‍ಗಳಿವೆ.

MOST READ: ಹೊಸ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಕಿಕ್ಸ್

ಭಾರತದಲ್ಲಿ ಬಿಡುಗಡೆಯಾಗುವುದಿಲ್ಲ ಹೊಂಡಾ ಸಿಟಿ ಆರ್‍ಎಸ್ ಪರ್ಫಾಮೆನ್ಸ್ ಮಾದರಿ

ಹೊಸ ಹೋಂಡಾ ಸಿಟಿ ಕಾರಿನ ಇಂಟಿರಿಯರ್‍‍ನಲ್ಲಿ ಡ್ಯುಯಲ್ ಟೋನ್ ಸಿಸ್ಟಂ, ಹೊಂದಾಣಿಕೆ ಮಾಡಬಹುದಾದ ಹಿಂಭಾಗದ ಹೆಡ್‍‍‍ರೆಸ್ಟ್, ಡಿಜಿ‍ಟಲ್ ಇನ್ಸ್ ಟ್ರೂ‍‍ಮೆಂಟ್ ಕನ್ಸೋಲ್, ಹೊಸ ಟಚ್‍‍ಸ್ಕ್ರೀನ್ ಇನ್ಪೋಟೇನ್‍‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗುವುದಿಲ್ಲ ಹೊಂಡಾ ಸಿಟಿ ಆರ್‍ಎಸ್ ಪರ್ಫಾಮೆನ್ಸ್ ಮಾದರಿ

ಟಾಪ್ ವೆರಿಯೆಂಟ್ ಆಗಿರುವ ಹೋಂಡಾ ಸಿಟಿ ಝಡ್ಎಕ್ಸ್ ನಲ್ಲಿ ಹೂಸ ಫೀಚರ್ಸ್‍ಗಳನ್ನು ಅಳವಡಿಸಿದೆ. ಸಿಟಿ ಝಡ್ಎಕ್ಸ್ ವೆರಿಯೆಂಟ್‍ನಲ್ಲಿ ಎಲ್ಇಡಿ ಹೆಡ್‍ ಲೈಟ್, ಎಲ್ಇಡಿ ಟೇಲ್ ಲ್ಯಾಂಪ್, ಆರು ಏರ್‌ಬ್ಯಾಗ್‌ಗಳು, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್ ನಂತಹ ಹಲವಾರು ಉನ್ನತ ಫೀಚರ್ ಗಳನ್ನು ಹೊಂದಿದೆ.

MOST READ: ಬಹಿರಂಗವಾಯ್ತು ಹೊಸ ಸ್ಕೋಡಾ ರ‍್ಯಾಪಿಡ್ ಕಾರಿನ ಮಾಹಿತಿ

ಭಾರತದಲ್ಲಿ ಬಿಡುಗಡೆಯಾಗುವುದಿಲ್ಲ ಹೊಂಡಾ ಸಿಟಿ ಆರ್‍ಎಸ್ ಪರ್ಫಾಮೆನ್ಸ್ ಮಾದರಿ

ಎಂಜಿ ಹೆಕ್ಟರ್ ಮತ್ತು ಕಿಯಾ ಸೆಲ್ಟೋಸ್‍‍ನಲ್ಲಿ ಕಂಡುಬರುವ ಕನೆಕ್ಟಿವಿಟಿ ತಂತ್ರಜ್ಞಾನಗಳನ್ನು ಅಳವಡಿಸುವ ಸಾಧ್ಯತೆಗಳಿವೆ. ಹೊಸ ಸಿಟಿ ಕಾರು 1.5 ಲೀಟರ್ ಐ-ವಿಟಿಇಸಿ ಬಿಎಸ್ 6 ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 119 ಬಿ‍‍ಹೆಚ್‍‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಮ್ಯಾನುವಲ್ ಮತ್ತು ಸಿವಿ‍ಟಿ ಆಟೋಮ್ಯಾಟಿಕ್ ಗೇರ್‍‍‍ಬಾಕ್ಸ್ ಹೊಂದಿರುತ್ತದೆ.

ಭಾರತದಲ್ಲಿ ಬಿಡುಗಡೆಯಾಗುವುದಿಲ್ಲ ಹೊಂಡಾ ಸಿಟಿ ಆರ್‍ಎಸ್ ಪರ್ಫಾಮೆನ್ಸ್ ಮಾದರಿ

2020ರ ಹೋಂಡಾ ಸಿಟಿ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಾರುತಿ ಸಿಯಾಜ್, ಟೊಯೊಟಾ ಯಾರಿಸ್ ಮತ್ತು ಹ್ಯುಂಡೈ ವರ್ನಾ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
Read more on ಹೋಂಡಾ honda
English summary
Sportier New Honda City RS Variant is Not Coming to India. Read in Kannada.
Story first published: Saturday, May 2, 2020, 15:52 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X