ಬಿಎಸ್-6 ಹೋಂಡಾ ಜಾಝ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ತನ್ನ ಬಹುನಿರೀಕ್ಷಿತ ಬಿಎಸ್-6 ಜಾಝ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದೀಗ ಹೋಂಡಾ ಕಂಪನಿಯು ಈ ಹೊಸ ಜಾಝ್ ಕಾರಿನ ಪ್ರಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ.

ಬಿಎಸ್-6 ಹೋಂಡಾ ಜಾಝ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಹೋಂಡಾ ಜಾಝ್ ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ಹೋಂಡಾ ಕಂಪನಿಯ ಅಧಿಕೃತ ಡೀಲರ್ ಬಳಿ ತೆರಳಿ ಟೋಕನ್ ಮೊತ್ತ ರೂ.21,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಇನ್ನು ಹೊಸ ಜಾಝ್ ಕಾರಿಗಾಗಿ ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡುವ ಗ್ರಾಹಕರು ಟೋಕನ್ ಮೊತ್ತ ರೂ.5,000 ಪಾವತಿಸಿ ಕಾಯ್ದಿರಿಸಬಹುದಾಗಿದೆ. ಈ ಹೊಸ ಜಾಝ್ ಕಾರು ಇದೇ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಬಿಎಸ್-6 ಹೋಂಡಾ ಜಾಝ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಹೋಂಡಾ ಜಾಝ್ ಕಾರಿನ ಕೆಲವು ಬದಲಾವಣೆಗಳೊಂದಿಗೆ ಹೊಸ ಫೀಚರ್ಸ್‍ಗಳನ್ನು ಅಳವಡಿಸಲಾಗುತ್ತದೆ. ಈ ಕಾರಿನ ಇಂಟಿರಿಯರ್ ನಲ್ಲಿ ಕೆಲವು ಬದಲಾವಣೆಗಳನ್ನು ನಡೆಸಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಬಿಎಸ್-6 ಹೋಂಡಾ ಜಾಝ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಹೋಂಡಾ ಕಂಪನಿಯು ಈಗಗಾಲೇ ಜಾಝ್ ಕಾರಿನ ಟೀಸರ್ ಅನ್ನು ಬಿಡುಗಡೆಗೊಳಿಸಲಾಗಿದೆ. ಈ ಹೊಸ ಹೋಂಡಾ ಜಾಝ್ ಕಾರು ಸ್ಟೈಲಿಶ್ ಮತ್ತು ಸ್ಪೋರ್ಟಿ ಆಗಿರುತ್ತದೆ ಎಂದು ಹೇಳಬಹುದು. ಬಿಎಸ್-6 ಜಾಝ್ ಕಾರು ಹೊಸ ವಿನ್ಯಾಸವನ್ನು ಹೊಂದಿದೆ. ಹೊಸ ಚಿತ್ರದಲ್ಲಿ ಬಿಎಸ್-6 ಜಾಝ್ ಕಾರಿನ ಮುಂಭಾಗ ಎಲ್ಇಡಿ ಡಿಆರ್‍‍ಎಲ್ ಜೊತೆಗೆ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ದೊಡ್ಡ ಗ್ರಿಲ್ ಅನ್ನು ಹೊಂದಿದೆ.

ಬಿಎಸ್-6 ಹೋಂಡಾ ಜಾಝ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಈ ಹೊಸ ಕಾರಿನ ಡ್ಯಾಶ್‌ಬೋರ್ಡ್ ನಲ್ಲಿ ಸಣ್ಣ ಮಟ್ಟದ ಬದಲಾವಣೆಗಳನ್ನು ನಿರೀಕ್ಷಿಸುತ್ತೇವೆ. ಈ ಹೊಸ ಹೋಂಡಾ ಜಾಝ್ ಕಾರಿನಲ್ಲಿ ಆಂಡ್ರಾಯ್ಡ್ ಆಟೋ ಮತ್ತು ಆ್ಯಪಲ್ ಕಾರ್‍‍ಪ್ಲೇಯನ್ನು ಕನೆಕ್ಟ್ ಆಗಿರುವ ಏಳು ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ.

MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಬಿಎಸ್-6 ಹೋಂಡಾ ಜಾಝ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಇದರೊಂದಿಗೆ ಬ್ಲೂಟೂತ್ ಕನೆಕ್ಟಿವಿಟಿ, ಕ್ರೂಸ್ ಕಂಟ್ರೋಲ್, ಸೆಮಿ ಡಿಜೆಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಕ್ಲೈಮೆಂಟ್ ಕಂಟ್ರೋಲ್ ಮತ್ತು ಪುಶ್ ಬಟನ್ ಅನ್ನು ಹೊಂದಿರಲಿದೆ. ಹೊಸ ಹೋಂಡಾ ಜಾಝ್ ಕಾರಿನಲ್ಲಿ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ.

ಬಿಎಸ್-6 ಹೋಂಡಾ ಜಾಝ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಈ ಕಾರಿನಲ್ಲಿ ಸುರಕ್ಷತೆಗಾಗಿ ಡ್ಯುಯಲ್-ಏರ್‌ಬ್ಯಾಗ್‌ಗಳು, ಇಬಿಡಿಯೊಂದಿಗೆ ಎಬಿಎಸ್, ಪಾರ್ಕಿಂಗ್ ಸೆನ್ಸರ್‌ಗಳೊಂದಿಗೆ ರೇರ್ ಕ್ಯಾಮೆರಾ, ಐಎಸ್‌ಒಫಿಕ್ಸ್ ಮೌಂಟ್ಸ್ ಅನ್ನು ಹೊಂದಿರುತ್ತದೆ. ಈ ಕಾರಿನಲ್ಲಿ ಒಟ್ಟು ಆರು ಏರ್‌ಬ್ಯಾಗ್‌‍ಗಳನ್ನು ಅಳವಡಿಸಲಾಗುತ್ತದೆ.

MOST READ: ಸ್ಥಗಿತಗೊಂಡಿಲ್ಲ ಫೋಕ್ಸ್‌ವ್ಯಾಗನ್ ಕಾರಿನ ಈ ಮಾದರಿಗಳು

ಬಿಎಸ್-6 ಹೋಂಡಾ ಜಾಝ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಹೋಂಡಾ ಜಾಝ್ ಕಾರು ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆಯಾಗಲಿದೆ. ಈ ಕಾರನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಅಭಿವೃದ್ದಿಪಡಿಸಲಾಗುತ್ತದೆ. ಈ ಕಾರಿನಲ್ಲಿ 1.2-ಲೀಟರ್ ನಾಲ್ಕು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ.

ಬಿಎಸ್-6 ಹೋಂಡಾ ಜಾಝ್ ಕಾರಿನ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಹೋಂಡಾ ಜಾಝ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಐ20, ಫೋಕ್ಸ್‍ವ್ಯಾಗನ್ ಪೊಲೊ, ಮಾರುತಿ ಬಲೆನೊ, ಟೊಯೊಟಾ ಗ್ಲಾಂಝಾ ಮತ್ತು ಟಾಟಾ ಆಲ್ಟ್ರೋಜ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Article Published On: Monday, August 10, 2020, 18:57 [IST]
English summary
Bookings Open For The 2020 Honda Jazz; Launch In August. Read In Kannada.
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+