ಡೀಲರ್ ಬಳಿ ಕಾಣಿಸಿಕೊಂಡ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು

ಹೋಂಡಾ ಇಂಡಿಯಾ ಕಂಪನಿಯು ಹೊಸ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಹೊಸ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು ಡೀಲರ್ ಬಳಿ ಕಾಣಿಸಿಕೊಂಡಿದೆ.

ಡೀಲರ್ ಬಳಿ ಕಾಣಿಸಿಕೊಂಡ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು

ಹೋಂಡಾ ಕಂಪನಿಯು ತನ್ನ ಹೊಸ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಆವೃತ್ತಿಯ ಬುಕ್ಕಿಂಗ್ ಅನ್ನು ಇತ್ತೀಚೆಗೆ ಅಧಿಕೃತವಾಗಿ ಸ್ವೀಕರಿಸಲು ಪ್ರಾರಂಭಿಸಿತು. ಶೀಘ್ರದಲ್ಲೇ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರಿನ ಬೆಲೆಯನ್ನು ಘೋಷಿಸಬಹುದು. ಹೋಂಡಾ ಕಂಪನಿಯ ಹಿಂದಿನ ಡಬ್ಲ್ಯುಆರ್‍-ವಿ ಮಾದರಿಗೆ ಹೊಸ ಫೇಸ್‍‍ಲಿಫ್ಟ್ ಕಾರನ್ನು ಹೋಲಿಸಿದರೆ ಹಲವಾರು ಬದಲಾವಣೆಗಳಾಗಿರುವುದನ್ನು ಕಾಣಬಹುದು. ಬಿಡುಗಡೆಯ ಮುನ್ನ ಡೀಲರ್ ಬಳಿ ತಲುಪಿರುವ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರಿನ ಸ್ಪೈ ಚಿತ್ರವನ್ನು ಗಾಡಿವಾಡಿ ಬಹಿರಂಗಪಡಿಸಿದೆ.

ಡೀಲರ್ ಬಳಿ ಕಾಣಿಸಿಕೊಂಡ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು

ಫೇಸ್‍‍ಲಿಫ್ಟ್ ಆವೃತ್ತಿಯಲ್ಲಿ ಹೊಸ ಬಿ‍ಎಸ್-6 ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಅಳವಡಿಸಲಾಗಿದೆ. ಇದರ ಜೊತೆಗೆ ವಿನ್ಯಾಸ ಹಾಗೂ ಫೀಚರ್‍‍ಗಳನ್ನು ಸಹ ನವೀಕರಿಸಲಾಗಿದೆ.

MOST READ: ಡೀಲರ್ ಬಳಿ ಕಾಣಿಸಿಕೊಂಡ ಹೊಸ ಸ್ಕೋಡಾ ಸೂಪರ್ಬ್ ಕಾರು

ಡೀಲರ್ ಬಳಿ ಕಾಣಿಸಿಕೊಂಡ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು

2020ರ ಹೋಂಡಾ ಡಬ್ಲ್ಯುಆರ್-ವಿ ಫೇಸ್‌ಲಿಫ್ಟ್‌ನಲ್ಲಿ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಹೊಂದಿದ್ದು, ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್ಸ್ ಮತ್ತು ಪೊಸಿಷನ್ ಲ್ಯಾಂಪ್‌ಗಳಿವೆ. ಹಿಂಭಾಗದಲ್ಲಿ, ಡಬ್ಲ್ಯುಆರ್-ವಿ ಫೇಸ್ ಲಿಫ್ಟ್ ಸುಧಾರಿತ ಸಿ-ಆಕಾರದ ಎಲ್ಇಡಿ ರೇರ್ ಫಾಗ್‍ ಲ್ಯಾಂಪ್‍‍ಗಳನ್ನು ಅಳವಡಿಸಲಾಗಿದೆ.

ಡೀಲರ್ ಬಳಿ ಕಾಣಿಸಿಕೊಂಡ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು

ಇದರೊಂದಿಗೆ ಕ್ರಾಸ್ಒವರ್ ಕ್ರೂಸ್ ಕಂಟ್ರೋಲ್ ಮತ್ತು ಒನ್-ಟಚ್ ಎಲೆಕ್ಟ್ರಿಕ್ ಸನ್ರೂಫ್ ಅನ್ನು ಸಹ ಹೊಂದಿದೆ. ಹೊಸ ಕಾರಿನ ಗ್ರಿಲ್ ಹಾಗೂ ಬಂಪರ್‍‍ಗಳು ಹೊಸ ಲುಕ್ ಅನ್ನು ಹೊಂದಿದೆ. ಹೊಸ ಕಾರಿನ ಫಾಗ್ ಲ್ಯಾಂಪ್ ಹೌಸಿಂಗ್‍‍ಗಳು ಕಪ್ಪು ಬಣ್ಣವನ್ನು ಹೊಂದಿವೆ. ಇಂಟಿರಿಯರ್ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗದೇ ಇದ್ದರೂ ಫೇಸ್‍‍ಲಿಫ್ಟ್ ಆವೃತ್ತಿಯಲ್ಲಿ ಹೊಸ ಫ್ಯಾಬ್ರಿಕ್ ಸೀಟುಗಳನ್ನು ಅಳವಡಿಸಲಾಗುವುದು.

MOST READ: ಖಚಿತವಾಗದ ಬಹುನಿರೀಕ್ಷಿತ ಜಿಮ್ನಿ ಎಸ್‍ಯುವಿಯ ಬಿಡುಗಡೆ

ಡೀಲರ್ ಬಳಿ ಕಾಣಿಸಿಕೊಂಡ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು

ಇವುಗಳ ಜೊತೆಗೆ ಟಚ್‍‍ಸ್ಕ್ರೀನ್ ಇನ್ಫೋಟೆನ್‍‍ಮೆಂಟ್ ಸಿಸ್ಟಂ ಹಾಗೂ ಡಿಜಿಟಲ್ ಇನ್ಸ್ ಟ್ರೂಮೆಂಟ್‍‍‍ಗಳನ್ನು ನೀಡಲಾಗುವುದು. ಮಾರುಕಟ್ಟೆಯಲ್ಲಿರುವ ಹಳೆಯ ತಲೆಮಾರಿನ ಹೋಂಡಾ ಡಬ್ಲ್ಯು‍ಆರ್-ವಿಯಲ್ಲಿರುವ ಎಲೆಕ್ಟ್ರಾನಿಕ್ ಸನ್‍‍ರೂಫ್ ಹಾಗೂ ಕ್ರೂಸ್ ಕಂಟ್ರೋಲ್‍‍ಗಳನ್ನು ಫೇಸ್‍‍ಲಿಫ್ಟ್ ಆವೃತ್ತಿಯಲ್ಲಿಯೂ ಸಹ ನೀಡಲಾಗುವುದು.

ಡೀಲರ್ ಬಳಿ ಕಾಣಿಸಿಕೊಂಡ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು

ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಆವೃತ್ತಿಯನ್ನು 1.2 ಲೀಟರಿನ ಪೆಟ್ರೋಲ್ ಹಾಗೂ 1.5 ಲೀಟರಿನ ಡೀಸೆಲ್ ಬಿ‍ಎಸ್ 6 ಎಂಜಿನ್‍‍ನಲ್ಲಿ ಬಿಡುಗಡೆಗೊಳಿಸಲಾಗುವುದು. ಹಳೆಯ ತಲೆಮಾರಿನ ಕಾರಿನಂತೆ ಫೇಸ್‍‍ಲಿಫ್ಟ್ ಕಾರಿನಲ್ಲಿಯೂ ಸಹ 5-ಸ್ಪೀಡ್ ಹಾಗೂ 6-ಸ್ಪೀಡಿನ ಗೇರ್‍‍ಬಾಕ್ಸ್ ಆಯ್ಕೆಗಳನ್ನು ನೀಡಲಾಗುವುದು.

MOST READ: ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಡೀಲರ್ ಬಳಿ ಕಾಣಿಸಿಕೊಂಡ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು

ಹೋಂಡಾ ಕಂಪನಿಯು ತನ್ನ ಹೊಸ ಹೋಂಡಾ ಜಾಝ್ ಕಾರನ್ನು ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆಗೊಳಿಸಲಿದೆ. ಇನ್ನು ಅಮೇಜ್ ಮತ್ತು ಡಬ್ಲ್ಯೂಆರ್-ವಿ ಮಾದರಿಗಳು ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿರಲಿದೆ.

ಡೀಲರ್ ಬಳಿ ಕಾಣಿಸಿಕೊಂಡ ಹೊಸ ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು

ಹೊಸ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೊಸ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ 300, ಫೋರ್ಡ್ ಇಕೋಸ್ಪೋರ್ಟ್ ಮತ್ತು ಹ್ಯುಂಡೈ ವೆನ್ಯೂ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
Read more on ಹೋಂಡಾ honda
English summary
BS6 Honda WR-V Facelift Spotted At Dealership Ahead Of Launch. Read in Kannada.
Story first published: Thursday, May 21, 2020, 10:48 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X