ಹ್ಯುಂಡೈ ಎಲಾಂಟ್ರಾ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್

ಹ್ಯುಂಡೈ ತನ್ನ ಎಲಾಂಟ್ರಾ ಫೇಸ್‌ಲಿಫ್ಟ್ ಅನ್ನು ಕಳೆದ ವರ್ಷದ ಅಕ್ಟೋಬರ್‌ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಎಲಾಂಟ್ರಾ ಕಾರು ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಲ್ಲಿ ಲಭ್ಯವಿದೆ.

ಹ್ಯುಂಡೈ ಎಲಾಂಟ್ರಾ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್

ಹ್ಯುಂಡೈ ಕಂಪನಿಯು ಕಳೆದ ವರ್ಷದ ಅಕ್ಟೋಬರ್‌ ತಿಂಗಳಲ್ಲಿ ಎಲಾಂಟ್ರಾ ಫೇಸ್‌ಲಿಫ್ಟ್ ಅನ್ನು ಪೆಟ್ರೋಲ್ ಮಾದರಿಯಲ್ಲಿ ಬಿಡುಗಡೆಗೊಳಿಸಿದ್ದರು, ನಂತರ ಈ ವರ್ಷದ ಜೂನ್ ತಿಂಗಳಲ್ಲಿ ಡೀಸೆಲ್ ಮಾದರಿಯಲ್ಲಿಯು ಕೂಡ ಬಿಡುಗಡೆಗೊಳಿಸಿದ್ದರು. ಹ್ಯುಡೈ ಕಂಪನಿಯು ತನ್ನ ಎಲಾಂಟ್ರಾ ಫೇಸ್‌ಲಿಫ್ಟ್ ಕಾರಿನ ಮಾರಾಟವನ್ನು ಹೆಚ್ಚಿಸಲು ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ. ವರದಿ ಪ್ರಕಾರ, ಹ್ಯುಂಡೈ ಎಲಾಂಟ್ರಾ ಪೆಟ್ರೋಲ್ ಮಾದರಿಯ ಮೇಲೆ ರೂ.60,000 ಗಳವರೆಗೆ ರಿಯಾಯಿತಿಯನ್ನು ಘೋಷಿಸಿದೆ.

ಹ್ಯುಂಡೈ ಎಲಾಂಟ್ರಾ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್

ಇನ್ನು ಎಲಾಂಟ್ರಾ ಡೀಸೆಲ್ ಮಾದರಿಯ ಮೇಲೆ ರೂ.30,000 ಗಳವರೆಗೆ ರಿಯಾಯಿತಿಯನ್ನು ನೀಡಿದೆ. ಹ್ಯುಂಡೈ ಎಲಾಂಟ್ರಾ ಕಾರಿನ ರಿಯಾಯಿತಿಯು ಈ ತಿಂಗಳ ಅಂತ್ಯದವರೆಗೂ ಲಭ್ಯವಿರುತ್ತದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹ್ಯುಂಡೈ ಎಲಾಂಟ್ರಾ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್

ಹೊಸ ತಲೆಮಾರಿನ ಹೊಸ ಹ್ಯುಂಡೈ ಎಲಾಂಟ್ರಾ ಕಾರನ್ನು ಹೊಸ ಕೆ 3 ಪ್ಲಾಟ್‌ಫಾರಂನಲ್ಲಿ ತಯಾರಿಸಲಾಗಿದೆ. ಈ ಹೊಸ ಕಾರು ಹಿಂದಿನ ಮಾದರಿಗಿಂತ 56 ಎಂಎಂ ಹೆಚ್ಚು ಅಗಲ ಹಾಗೂ 26 ಎಂಎಂ ಹೆಚ್ಚು ಎತ್ತರವನ್ನು ಹೊಂದಿದೆ. ಎಕ್ಸಿಕ್ಯೂಟಿವ್ ಸೆಡಾನ್ ಕಾರು ಸೆಗ್ ಮೆಂಟಿನಲ್ಲಿ ಹ್ಯುಂಡೈ ಕಂಪನಿಯ ಎಲಾಂಟ್ರಾ ಕಾರು ಪ್ರಪಂಚದಾದ್ಯಂತ ಹೆಚ್ಚು ಜನಪ್ರಿಯತೆಯನ್ನು ಹೊಂದಿದೆ.

ಹ್ಯುಂಡೈ ಎಲಾಂಟ್ರಾ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್

ಬಾನೆಟ್, ಗ್ರಿಲ್ ಸಿಸ್ಟಂ, ಬಂಪರ್ ಸಿಸ್ಟಂ, ಹಿಂಭಾಗದ ವಿನ್ಯಾಸಗಳಿಂದ ಈ ಕಾರು ಸಂಪೂರ್ಣವಾಗಿ ಹೊಸ ಮಾದರಿಯ ವಿನ್ಯಾಸವನ್ನು ಹೊಂದಿದೆ. ಈ ಕಾರಿನಲ್ಲಿ ಎಲ್‌ಇಡಿ ಹೆಡ್‌ಲೈಟ್‌, ದೊಡ್ಡ ಗಾತ್ರದ ಗ್ರಿಲ್ ಸಿಸ್ಟಂ, 17 ಇಂಚಿನ ಡ್ಯುಯಲ್ ಟೋನ್ ಅಲಾಯ್ ವ್ಹೀಲ್ ಹಾಗೂ ಎಲ್‌ಇಡಿ ಲೈಟ್ ಬಾರ್ ಗಳನ್ನು ಅಳವಡಿಸಲಾಗಿದೆ.

MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಹ್ಯುಂಡೈ ಎಲಾಂಟ್ರಾ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್

ಹೊಸ ಹ್ಯುಂಡೈ ಎಲಾಂಟ್ರಾ ಕಾರಿನ ಇಂಟಿರಿಯರ್ ಅನ್ನು ಹೆಚ್ಚಿಸಲಾಗಿದೆ. ಈ ಕಾರು ಡ್ಯಾಶ್‌ಬೋರ್ಡ್‌ನಲ್ಲಿ ಎರಡು 10.25 ಇಂಚಿನ ಸ್ಕ್ರೀನ್ ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ಟಚ್-ಸ್ಕ್ರೀನ್ ಇನ್ಫೋಟೈನ್ಮೆಂಟ್, ಆದರೆ ಮತ್ತೊಂದು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಆಗಿದೆ.

ಹ್ಯುಂಡೈ ಎಲಾಂಟ್ರಾ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್

ಈ ಕಾರಿನ ಪ್ರಮುಖವಾದ ಫೀಚರ್ ಗಳೆಂದರೆ 4-ಸ್ಪೋಕ್ ಸ್ಟೀಯರಿಂಗ್ ವ್ಹೀಲ್, ನಾಲ್ಕು ಎಸಿ ವೆಂಟ್ಸ್, ಡ್ರೈವರ್ ಸೀಟ್ ಹಾಗೂ ಫ್ರಂಟ್ ಸೀಟ್ ಪ್ಯಾಸೆಂಜರ್. ಈ ಕಾರಿನಲ್ಲಿ ಅಳವಡಿಸಿರುವ ಬಿಡಿಭಾಗಗಳು ಅತ್ಯುತ್ತಮ ಗುಣಮಟ್ಟವನ್ನು ಹೊಂದಿವೆ. ಹೊಸ ಹ್ಯುಂಡೈ ಕಾರಿನಲ್ಲಿ ಹಲವಾರು ಫೀಚರ್ ಗಳಿದ್ದು, ಇವುಗಳನ್ನು ಬ್ಲೂಲಿಂಕ್ ಪ್ರೊಸೆಸರ್ ಮೂಲಕ ಆಕ್ಸೆಸ್ ಮಾಡಬಹುದಾಗಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹ್ಯುಂಡೈ ಎಲಾಂಟ್ರಾ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್

ಈ ಸಿಸ್ಟಂ, ವಾಯ್ಸ್ ಕಮಾಂಡ್ ಫೀಚರ್ ಅನ್ನು ಹೊಂದಿದೆ. ಇದರಲ್ಲಿರುವ ಇನ್ಫೋಟೇನ್ ಮೆಂಟ್ ಸಿಸ್ಟಂ ಆಪಲ್ ಕಾರ್ ಪ್ಲೇ ಹಾಗೂ ಆಂಡ್ರಾಯ್ಡ್ ಆಟೋಗಳನ್ನು ಬೆಂಬಲಿಸುತ್ತದೆ. ಹೊಸ ಕಾರಿನಲ್ಲಿ ವೈರ್‌ಲೆಸ್ ಫೋನ್ ಚಾರ್ಜರ್, ಆಂಬಿಯೆಂಟ್ ಲೈಟ್ ಸಿಸ್ಟಂ, ಡಿಜಿಟಲ್ ಕೀ ಸ್ಮಾರ್ಟ್‌ಫೋನ್ ಪ್ರೊಸೆಸರ್, 8 ಸ್ಪೀಕರ್‌ಗಳ ಸೌಂಡ್ ಸಿಸ್ಟಂ, ಎಲೆಕ್ಟ್ರಿಕ್ ಸನ್‌ರೂಫ್ ಗಳಿವೆ.

ಹ್ಯುಂಡೈ ಎಲಾಂಟ್ರಾ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್

ಹ್ಯುಂಡೈ ಎಲಾಂಟ್ರಾ ಕಾರಿನಲ್ಲಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಯು2 ಸಿಆರ್ಡಿ ಡೀಸೆಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಹೊಸ ಹ್ಯುಂಡೈ ಎಲಾಂಟ್ರಾ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡಗಡೆಯಾದ ಬಳಿಕ ಹೊಂಡಾ ಸಿವಿಕ್, ಟೊಯೊಟಾ ಕೊರೊಲಾ ಹಾಗೂ ಅಟ್ಲೆಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Hyundai Elantra Attracts Benefits Of Up To Rs.60,000. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X