Just In
- 16 min ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 19 min ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
- 1 hr ago Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- 1 hr ago ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
Don't Miss!
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Movies STD ಬೂತ್ನಲ್ಲಿ ಕೆಲಸ ಮಾಡುವಾಗ 500 ರೂ. ಸಂಬಳ; ಶೋ ಆರಂಭಿಸಿದ ಮೇಲೆ ಗಳಿಸಿದ್ದೆಷ್ಟು ಕೋಟಿ?
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಹ್ಯುಂಡೈ ಐ20 ಕಾರು ಬಿಡುಗಡೆ ದಿನಾಂಕ ಬಹಿರಂಗ
ಹ್ಯುಂಡೈ ಕಂಪನಿಯು ತನ್ನ ಬಹುನಿರೀಕ್ಷಿತ ಮೂರನೇ ತಲೆಮಾರಿನ ಐ20 ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೀಗ ಹ್ಯುಂಡೈ ಕಂಪನಿಯು ತನ್ನ ಹೊಸ ಐ20 ಕಾರಿಗಾಗಿ ಅಧಿಕೃತವಾಗಿ ಬುಕ್ಕಿಂಗ್ ಸ್ವೀಕರಿಸಲು ಪ್ರಾರಂಭಿಸಿದ್ದಾರೆ.
ಮೂರನೇ ತಲೆಮಾರಿನ ಐ20 ಕಾರನ್ನು ಖರೀದಿಸುವ ಗ್ರಾಹರು ಟೋಕನ್ ಮೊತ್ತ ರೂ.21,000 ಪಾವತಿಸಿ ಆನ್ಲೈನ್ನಲ್ಲಿ ಅಥವಾ ಹ್ಯುಂಡೈ ಕಂಪನಿಯ ಡೀಲರುಗಳ ಬಳಿ ತೆರಳಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಅಲ್ಲದೇ ಹುಂಡೈ ಕಂಪನಿಯು ಈ ಹೊಸ ಐ20 ಕಾರಿನ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದೆ. ಈ ಹೊಸ ಹ್ಯುಂಡೈ ಐ20 ಕಾರು ಭಾರತೀಯ ಮಾರುಕಟ್ಟೆಯಲ್ಲಿ ಮಂದಿನ ತಿಂಗಳ 05ರಂದು ಬಿಡುಗಡೆಯಾಗಲಿದೆ.
ಹೊಸ ಹ್ಯುಂಡೈ ಐ20 ಕಾರು ಈಗಗಾಲೇ ಡೀಲರುಗಳ ಬಳಿ ತಲುಪಲು ಪ್ರಾರಂಭವಾಗಿದೆ. ಹೊಸ ಹ್ಯುಂಡೈ ಐ20 ಕಾರಿನ ಮುಂಭಾಗದಲ್ಲಿರು ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ. ಹಿಂದಿನ ಐ20 ಮಾದರಿಗೆ ಹೋಲಿಸಿದರೆ ಹೆಡ್ ಲ್ಯಾಂಪ್ ಮತ್ತು ಸೈಡ್ ಫ್ರೋಪೈಲ್ ವಿನ್ಯಾಸವನ್ನು ನವೀಕರಿಸಲಾಗಿದೆ ದೊಡ್ಡ ಕ್ರೀಸ್ ಲೈನ್ ಗಳನ್ನು ಒಳಗೊಂಡಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್
ಹೊಸ ಹುಂಡೈ ಐ20 ಕಾರಿನ ಪಿಲ್ಲರ್ಗಳು ಬ್ಲ್ಯಾಕ್ ಬಣ್ಣವನ್ನು ಹೊಂದಿದೆ. ವಿಡಬ್ಲ್ಯೂ ಟೈಗನ್ನಲ್ಲಿ ಇರುವಂತಹ ಕೆಂಪು ಇಲ್ಇಡಿ ಡಿಆರ್ಎಲ್ ಸ್ಟಾಪ್ ಲೈಟ್ ಹಿಂಭಾಗದಲ್ಲಿ ಇಲ್ಇಡಿ ಟೇಲ್ಲೈಟ್ ಹೊಂದಿದೆ. ಇನ್ನು ಹೊಸ ಹ್ಯುಂಡೈ ಕಾರಿನ ಇಂಟಿರಿಯರ್ನಲ್ಲಿ 4 ಸ್ಫೋಕ್ ಸ್ಟೀಟಿಯರಿಂಗ್ ವ್ಹೀಲ್ ಅನ್ನು ಅಳವಡಿಸಲಾಗಿದೆ.
ಈ ಕಾರಿನ ಇಂಟಿರಿಯರ್ನಲ್ಲಿರುವ ಡಿಜಿಟಲ್ ಕ್ಲಸ್ಟರ್ ನಲ್ಲಿ ಆ್ಯಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಹ್ಯುಂಡೈನ ಕನೆಕ್ಟಿವಿಟಿ ಸೂಟ್ ಮತ್ತು ಇತರ ಹಲವಾರು ಫೀಚರ್ಗಳನ್ನು ಹೊಂದಿದೆ. ಯುಎಸ್ಬಿ ಪೋರ್ಟ್ ಮತ್ತು ವೈರ್ಲೆಸ್ ಚಾರ್ಜಿಂಗ್ ಪ್ಯಾಡ್ ಅನ್ನು ಸಹ ಹೊಂದಿರಲಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ
ಹೊಸ ಹ್ಯುಂಡೈ ಐ20 ಕಾರು ಮೂರು ಎಂಜಿನ್ ಆಯ್ಕೆಗಳನ್ನು ಹೊಂದಿರಲಿದೆ. ಇದರಲ್ಲಿ 1.2ಎಲ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 82 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಹೊಂದಿರುತ್ತದೆ.
ಇದರೊಂದಿಗೆ 1.0ಎಲ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 99 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಸ್ಪೀಡ್ ಡ್ಯುಯಲ್-ಕ್ಲಚ್ ಆಟೋಮ್ಯಾಟಿಕ್ ಮತ್ತು ಐಎಂಟಿ (ಇಂಟೆಲಿಜೆಂಟ್ ಮ್ಯಾನುಯಲ್ ಗೇರ್ ಬಾಕ್ಸ್ ಅನ್ನು ಹೊಂದಿರಲಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ
ಇನ್ನು 1.5ಎಲ್ ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 99 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸಬಹುದು. ಈ ಎಂಜಿನ್ ನೊಂದಿಗೆ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೇವೆ. ಇದರೊಂದಿಗೆ 1.2 ಲೀಟರ್ ಯುನಿಟ್ ಅನ್ನು ಹೊಂದಿರಲಿದೆ.
ಹೊಸ ಹ್ಯುಂಡೈ ಐ20 ಕಾರಿನಲ್ಲಿ ಹೊಸ 16 ಡ್ಯುಯಲ್ ಟೋನ್ ಅಲಾಯ್ ವ್ಹೀಲ್ಗಳು, ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್ಗಳೊಂದಿಗೆ ಸ್ಲಿಕ್ ಒಆರ್ವಿಎಂಗಳು ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಕೂಡ ಆಳವಡಿಸಲಾಗಿದೆ.
ಹೊಸ ಹ್ಯುಂಡೈ ಐ20 ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಾರುತಿ ಸುಜುಕಿ ಬಲೆನೊ, ಟಾಟಾ ಆಲ್ಟ್ರೋಜ್, ಫೋಕ್ಸ್ವ್ಯಾಗನ್ ಪೊಲೊ ಮತ್ತು ಹೋಂಡಾ ಜಾಝ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.