ಹೊಸ ಫೀಚರ್‌ಗಳೊಂದಿಗೆ ಡೀಲರ್ ಬಳಿ ತಲುಪಿದ 2020ರ ಹ್ಯುಂಡೈ ಐ20 ಕಾರು
ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ಮೂರನೇ ತಲೆಮಾರಿನ ಐ20 ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ತಿಂಗಳ ಆರಂಭದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಹೊಸ ಹ್ಯುಂಡೈ ಐ20 ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ.

ಹೊಸ ತಲೆಮಾರಿನ ಐ20 ಕಾರು ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಿದೆ. ಆಯ್ದ ಹ್ಯುಂಡೈ ಡೀಲರುಗಳೂ ಈಗಗಾಲೇ ಹೊಸ ಐ20 ಕಾರಿಗಾಗಿ ಅನಧಿಕೃತ ಬುಕ್ಕಿಂಗ್ ಸ್ವೀಕರಿಸಲು ಪ್ರಾರಂಭಿಸಿದ್ದಾರೆ. ವರದಿಗಳ ಪ್ರಕಾರ, ಹೊಸ ಹ್ಯುಂಡೈ ಐ20 ಕಾರು ಮ್ಯಾಗ್ನಾ, ಸ್ಪೋರ್ಟ್ಜ್, ಅಸ್ಟಾ ಮತ್ತು ಅಸ್ಟಾ (ಒ) ಎಂಬ ನಾಲ್ಕು ವೆರಿಯೆಂಟ್ ಗಳಲ್ಲಿ ಲಭ್ಯವಿರಲಿದೆ. ಹೊಸ ಹ್ಯುಂಡೈ ಐ20 ಕಾರು ಈಗಗಾಲೇ ಡೀಲರುಗಳ ಬಳಿ ತಲುಪಲು ಪ್ರಾರಂಭವಾಗಿದೆ. ಇದರ ಸ್ಪೈ ಚಿತ್ರಗಳು ಬಹಿರಂಗವಾಗಿವೆ.

ಡೀಲರುಗಳ ಬಳಿ ತಲುಪಿದ ಹ್ಯುಂಡೈ ಐ20 ಕಾರು ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಆದರೆ ಅಂತರರಾಷ್ಟ್ರೀಯ ಮಾದರಿಯಲ್ಲಿ ಲಭ್ಯವಿರುವ ಕಾನ್ಫಿಗರ್ ಮಾಡಬಹುದಾದ ಯುನಿಟ್ ಅಲ್ಲ. 2020 ರ ಹ್ಯುಂಡೈ ವೆರ್ನಾದಲ್ಲಿ ನಾವು ಪಡೆಯುವ ಅದೇ ಕ್ಲಸ್ಟರ್ ಇದಾಗಿದೆ. ಹೋಂಡಾ ಜಾಝ್ ಮಾದರಿಯಲ್ಲಿರುವಂತ ಸನ್‌ರೂಫ್ ಅನ್ನು ಪಡೆದುಕೊಂಡಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ಹ್ಯುಂಡೈ ಐ20 ಕಾರಿನ ಮುಂಭಾಗದಲ್ಲಿರು ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ. ಹಿಂದಿನ ಐ20 ಮಾದರಿಗೆ ಹೋಲಿಸಿದರೆ ಹೆಡ್ ಲ್ಯಾಂಪ್ ಮತ್ತು ಸೈಡ್ ಫ್ರೋಪೈಲ್ ವಿನ್ಯಾಸವನ್ನು ನವೀಕರಿಸಲಾಗಿದೆ ದೊಡ್ಡ ಕ್ರೀಸ್ ಲೈನ್ ಗಳನ್ನು ಒಳಗೊಂಡಿದೆ.

ಹೊಸ ಹುಂಡೈ ಐ20 ಕಾರಿನ ಪಿಲ್ಲರ್‍ಗಳು ಬ್ಲ್ಯಾಕ್ ಬಣ್ಣವನ್ನು ಹೊಂದಿದೆ. ವಿಡಬ್ಲ್ಯೂ ಟೈಗನ್‍ನಲ್ಲಿ ಇರುವಂತಹ ಕೆಂಪು ಇಲ್‍ಇಡಿ ಡಿಆರ್‍ಎಲ್ ಸ್ಟಾಪ್ ಲೈಟ್ ಹಿಂಭಾಗದಲ್ಲಿ ಇಲ್‍ಇಡಿ ಟೇಲ್‍ಲೈಟ್ ಹೊಂದಿದೆ. ಇನ್ನು ಹೊಸ ಹ್ಯುಂಡೈ ಕಾರಿನ ಇಂಟಿರಿಯರ್‍ನಲ್ಲಿ 4 ಸ್ಫೋಕ್ ಸ್ಟೀಟಿಯರಿಂಗ್ ವ್ಹೀಲ್ ಅನ್ನು ಅಳವಡಿಸಲಾಗಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಈ ಕಾರಿನ ಇಂಟಿರಿಯರ್‍ನಲ್ಲಿರುವ ಡಿಜಿಟಲ್ ಕ್ಲಸ್ಟರ್ ನಲ್ಲಿ ಆ್ಯಪಲ್ ಕಾರ್‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಹ್ಯುಂಡೈನ ಕನೆಕ್ಟಿವಿಟಿ ಸೂಟ್ ಮತ್ತು ಇತರ ಹಲವಾರು ಫೀಚರ್‍ಗಳನ್ನು ಹೊಂದಿದೆ. ಯುಎಸ್‌ಬಿ ಪೋರ್ಟ್ ಮತ್ತು ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್ ಅನ್ನು ಸಹ ಹೊಂದಿರಲಿದೆ.

ಹೊಸ ಹ್ಯುಂಡೈ ಐ20 ಕಾರು ಮೂರು ಎಂಜಿನ್ ಆಯ್ಕೆಗಳನ್ನು ಹೊಂದಿರಲಿದೆ. ಇದರಲ್ಲಿ 1.2ಎಲ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 82 ಬಿಹೆಚ್‌ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಹೊಂದಿರುತ್ತದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಇದರೊಂದಿಗೆ 1.0ಎಲ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 99 ಬಿಹೆಚ್‌ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಸ್ಪೀಡ್ ಡ್ಯುಯಲ್-ಕ್ಲಚ್ ಆಟೋಮ್ಯಾಟಿಕ್ ಮತ್ತು ಐಎಂಟಿ (ಇಂಟೆಲಿಜೆಂಟ್ ಮ್ಯಾನುಯಲ್ ಗೇರ್ ಬಾಕ್ಸ್ ಅನ್ನು ಹೊಂದಿರಲಿದೆ.

ಇನ್ನು 1.5ಎಲ್ ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 99 ಬಿಹೆಚ್‌ಪಿ ಪವರ್ ಅನ್ನು ಉತ್ಪಾದಿಸಬಹುದು. ಈ ಎಂಜಿನ್ ನೊಂದಿಗೆ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಹೊಸ ಹ್ಯುಂಡೈ ಐ20 ಕಾರಿನಲ್ಲಿ ಹೊಸ 16 ಡ್ಯುಯಲ್ ಟೋನ್ ಅಲಾಯ್ ವ್ಹೀಲ್‍ಗಳು, ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್‍ಗಳೊಂದಿಗೆ ಸ್ಲಿಕ್ ಒಆರ್‍ವಿಎಂಗಳು ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಕೂಡ ಆಳವಡಿಸಲಾಗಿದೆ. ಹೊಸ ಹ್ಯುಂಡೈ ಐ20 ಹಲವಾರು ಹೊಸ ಫೀಚರ್ ಗಳೊಂದಿಗೆ ನಯ ಲುಕ್ ಬಿಡುಗಡೆಯಾಗುವುದರಿದರಿಂದ ಭಾರತೀಯ ಮಾರುಕಟ್ಟೆಯಲ್ಲಿ ಮತ್ತಷ್ಟು ಗ್ರಾಹಕರನ್ನು ಸೆಳೆಯಬಹುದು ಎಂದು ನಿರೀಕ್ಷಿಸುತ್ತೇವೆ


Click it and Unblock the Notifications