Just In
- 12 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 13 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 14 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 14 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- News Gold Price: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ವಿವರ
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Finance BMRCL: ಇಂದು ನಮ್ಮ ಮೆಟ್ರೋ ಕಾರ್ಯಾಚರಣೆ ಅವಧಿ ವಿಸ್ತರಣೆ, ಸಮಯ ವಿವರ
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ 2020ರ ಹ್ಯುಂಡೈ ಐ20 ಕಾರು
ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ಮೂರನೇ ತಲೆಮಾರಿನ ಐ20 ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಇದೇ ತಿಂಗಳ ಅಂತ್ಯದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಈ ಹೊಸ ಹ್ಯುಂಡೈ ಐ20 ಕಾರು ಹೊಸ ಬಣ್ಣಗಳ ಆಯ್ಕೆಯೊಂದಿಗೆ ಬಿಡುಗಡೆಯಾಗಲಿದೆ.
ಆಯ್ದ ಹ್ಯುಂಡೈ ಡೀಲರುಗಳೂ ಈಗಗಾಲೇ ಹೊಸ ಐ20 ಕಾರಿಗಾಗಿ ಬುಕ್ಕಿಂಗ್ ಸ್ವೀಕರಿಸಲು ಪ್ರಾರಂಭವಾಗಿದೆ. ವರದಿಗಳ ಪ್ರಕಾರ, ಹೊಸ ಹ್ಯುಂಡೈ ಐ20 ಕಾರು ಮ್ಯಾಗ್ನಾ, ಸ್ಪೋರ್ಟ್ಜ್, ಅಸ್ಟಾ ಮತ್ತು ಅಸ್ಟಾ (ಒ) ಎಂಬ ನಾಲ್ಕು ವೆರಿಯೆಂಟ್ ಗಳಲ್ಲಿ ಲಭ್ಯವಿರಲಿದೆ. ಹೊಸ ಹ್ಯುಂಡೈ ಐ20 ಕಾರು ಈಗಗಾಲೇ ಡೀಲರುಗಳ ಬಳಿ ತಲುಪಲು ಪ್ರಾರಂಭವಾಗಿದೆ. ಈ ಹೊಸ ಐ20 ಕಾರು ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಿದೆ.
ವರದಿ ಪ್ರಕಾರ, ಹೊಸ ತಲೆಮಾರಿನ ಐ20 ಕಾರು ಟೈಫೂನ್ ಸಿಲ್ವರ್, ಸ್ಟಾರಿ ನೈಟ್, ಟೈಟಾನ್ ಗ್ರೇ, ಫೆರಿ ರೆಡ್, ಪೋಲಾರ್ ವೈಟ್ ಮತ್ತು ಸನ್ ಬರ್ನ್ ಸ್ವೇ ಎಂಬ ಬಣ್ಣಗಳಲ್ಲಿ ಲಭ್ಯವಿರಲಿದೆ. ಇದರೊಂದಿಗೆ ಫೆರಿ ರೆಡ್ ಜೊತೆ ಬ್ಲ್ಯಾಕ್ ಮತ್ತು ಟೋನ್ ಬ್ಲ್ಯಾಕ್ ಜೊತೆ ವೈಟ್ ಎಂಬ ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರಲಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು
ಹೊಸ ಹ್ಯುಂಡೈ ಐ20 ಕಾರಿನ ಮುಂಭಾಗದಲ್ಲಿರು ಕ್ಯಾಸ್ಕೇಡಿಂಗ್ ಗ್ರಿಲ್ ಅನ್ನು ಹೊಂದಿದೆ. ಹಿಂದಿನ ಐ20 ಮಾದರಿಗೆ ಹೋಲಿಸಿದರೆ ಹೆಡ್ ಲ್ಯಾಂಪ್ ಮತ್ತು ಸೈಡ್ ಫ್ರೋಪೈಲ್ ವಿನ್ಯಾಸವನ್ನು ನವೀಕರಿಸಲಾಗಿದೆ ದೊಡ್ಡ ಕ್ರೀಸ್ ಲೈನ್ ಗಳನ್ನು ಒಳಗೊಂಡಿದೆ.
ಹೊಸ ಹುಂಡೈ ಐ20 ಕಾರಿನ ಪಿಲ್ಲರ್ಗಳು ಬ್ಲ್ಯಾಕ್ ಬಣ್ಣವನ್ನು ಹೊಂದಿದೆ. ವಿಡಬ್ಲ್ಯೂ ಟೈಗನ್ನಲ್ಲಿ ಇರುವಂತಹ ಕೆಂಪು ಇಲ್ಇಡಿ ಡಿಆರ್ಎಲ್ ಸ್ಟಾಪ್ ಲೈಟ್ ಹಿಂಭಾಗದಲ್ಲಿ ಇಲ್ಇಡಿ ಟೇಲ್ಲೈಟ್ ಹೊಂದಿದೆ. ಇನ್ನು ಹೊಸ ಹ್ಯುಂಡೈ ಕಾರಿನ ಇಂಟಿರಿಯರ್ನಲ್ಲಿ 4 ಸ್ಫೋಕ್ ಸ್ಟೀಟಿಯರಿಂಗ್ ವ್ಹೀಲ್ ಅನ್ನು ಅಳವಡಿಸಲಾಗಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್
ಹೊಸ ಹ್ಯುಂಡೈ ಕ್ರೆಟಾ ಕಾರಿನಲ್ಲಿರುವ ಸ್ಟಿಟಿಯರಿಂಗ್ ಮಾದರಿಯಲ್ಲಿದೆ. ಹೊಸ ಹ್ಯುಂಡೈ ಐ20 ಕಾರಿನಲ್ಲಿ ಬೋಸ್ ಸೌಂಡ್ ಸಿಸ್ಟಂ, ಕ್ರೂಸ್ ಕಂಟ್ರೋಲ್ ಮತ್ತು ದೊಡ್ಡ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. ಇದರೊಂದಿಗೆ ಬ್ಲೂ ಲಿಂಕ್ ಟೆಕ್ನಾಲಜಿಯನ್ನು ಕೂಡ ಹೊಂದಿರಲಿದೆ.
ಈ ಹೊಸ ಕಾರಿನಲ್ಲಿ ಸನ್ರೂಫ್ ಮತ್ತು ಡಿಜಿಟಲ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಈ ಕಾರಿನ ಇಂಟಿರಿಯರ್ನಲ್ಲಿ ಆ್ಯಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋ, ಹ್ಯುಂಡೈನ ಕನೆಕ್ಟಿವಿಟಿ ಸೂಟ್ ಮತ್ತು ಇತರ ಹಲವಾರು ಫೀಚರ್ಗಳನ್ನು ಹೊಂದಿದೆ. ಯುಎಸ್ಬಿ ಪೋರ್ಟ್ ಮತ್ತು ವೈರ್ಲೆಸ್ ಚಾರ್ಜಿಂಗ್ ಪ್ಯಾಡ್ ಅನ್ನು ಸಹ ಹೊಂದಿರಲಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ
ಹೊಸ ಹ್ಯುಂಡೈ ಐ20 ಕಾರು ಮೂರು ಎಂಜಿನ್ ಆಯ್ಕೆಗಳನ್ನು ಹೊಂದಿರಲಿದೆ. ಇದರಲ್ಲಿ 1.2ಎಲ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 82 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಹೊಂದಿರುತ್ತದೆ.
ಇದರೊಂದಿಗೆ 1.0ಎಲ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 99 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಸ್ಪೀಡ್ ಡ್ಯುಯಲ್-ಕ್ಲಚ್ ಆಟೋಮ್ಯಾಟಿಕ್ ಮತ್ತು ಐಎಂಟಿ (ಇಂಟೆಲಿಜೆಂಟ್ ಮ್ಯಾನುಯಲ್ ಗೇರ್ ಬಾಕ್ಸ್ ಅನ್ನು ಹೊಂದಿರಲಿದೆ.
ಇನ್ನು 1.5ಎಲ್ ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 99 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸಬಹುದು. ಈ ಎಂಜಿನ್ ನೊಂದಿಗೆ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೇವೆ. ಹೊಸ ಹ್ಯುಂಡೈ ಐ20 ಕಾರಿನಲ್ಲಿ ಹೊಸ 16 ಡ್ಯುಯಲ್ ಟೋನ್ ಅಲಾಯ್ ವ್ಹೀಲ್ಗಳು, ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್ಗಳೊಂದಿಗೆ ಸ್ಲಿಕ್ ಒಆರ್ವಿಎಂಗಳು ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಕೂಡ ಆಳವಡಿಸಲಾಗಿದೆ.