Just In
- 1 hr ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 1 hr ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 2 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 3 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಪ್ರಕರಣ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- Movies ''ಹೆಣ್ಮಕ್ಕಳು ಎಲ್ಲೆಲ್ಲೋ ಹೋದರು'' ಎಂದ ಶ್ರುತಿಗೆ ಮಹಿಳಾ ಆಯೋಗ ನೋಟಿಸ್ ; 07 ದಿನದ ಗಡುವು..!
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಮುಗಿದ ಬಳಿಕ ಬಿಡುಗಡೆಯಾಗಲಿದೆ 2020ರ ಮಹೀಂದ್ರಾ ಥಾರ್
ಬಹುನಿರೀಕ್ಷಿತ ಐಕಾನಿಕ್ ಆಫ್-ರೋಡರ್ 2020ರ ಥಾರ್ ಅನ್ನು ಬಿಡುಗಡೆಗೊಳಿಸುವುದಕ್ಕೆ ಮಹೀಂದ್ರಾ ಕಂಪನಿಯು ಸಜ್ಜಾಗಿದೆ. ಮಹೀಂದ್ರಾ ಕಂಪನಿಯು ಈ ಥಾರ್ ಎಸ್ಯುವಿಯನ್ನು ಭಾರತೀಯ ಆಟೋಮೊಬೈಲ್ ಕೇತ್ರದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಸ್ಪಾಟ್ ಟೆಸ್ಟ್ ನಡೆಸಿದ ಎಸ್ಯುವಿ ಎಂದು ಹೇಳಬಹುದು.
ನಿಮಗೆ ಅಚ್ಚರಿಯಾಗಬಹುದು ಈ ಹೊಸ ಮಹೀಂದ್ರಾ ಥಾರ್ ಎಸ್ಯುವಿಯ ಸ್ಪಾಟ್ ಟೆಸ್ಟ್ ಸುಮಾರು ಮೂರು ವರ್ಷಗಳಿಂದ ಪ್ರಾರಂಭಿಸಿದೆ. ಕರೋನಾ ಭೀತಿಯಿಂದ ಕೇಂದ್ರ ಸರ್ಕಾರವು ದೇಶಾದ್ಯಂತ ಲಾಕ್ಡೌನ್ ಮಾಡಲಾಗಿದೆ. ಮೂರನೇ ಹಂತದ ಲಾಕ್ಡೌನ್ ನಲ್ಲಿ ಕೆಲವು ನಿಯಮಗಳನ್ನು ಸಡಿಲಿಕೆ ಮಾಡಲಾಗಿದೆ. ಕೆಲವು ಷರತ್ತುಗಳೊಂದಿಗೆ ಕರ್ಖಾನೆಗಳನ್ನು ಪುನರ್ ಆರಂಭಿಸಲು ಸರ್ಕಾರ ಅನುಮತಿ ನೀಡಿದೆ.
ಮಹೀಂದ್ರಾ ಕಂಪನಿಯು ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಬ್ರಾಂಡ್ನ ಉತ್ಪಾದನಾ ಕೇಂದ್ರದ ಬಳಿ ಥಾರ್ ಎಸ್ಯುವಿಯ ಸ್ಪಾಟ್ ಟೆಸ್ಟ್ ಅನ್ನು ಇತ್ತೀಚೆಗೆ ನಡೆಸಿದೆ. ಲಾಕ್ಡೌನ್ ಮುಗಿದ ನಂತರ ಮಹೀಂದ್ರಾ ಕಂಪನಿಯು ಬಿಡುಗಡೆಗೊಳಿಸುವ ಮೊದಲ ವಾಹನ ಈ 2020ರ ಥಾರ್ ಆಗಲಿದೆ ಎಂದು ಕಾರ್ ಆಂಡ್ ಬೈಕ್ ವರದಿ ಮಾಡಿದೆ. ಶೀಘ್ರದಲ್ಲೇ ಈ ಎಸ್ಯುವಿಗಾಗಿ ಬುಕ್ಕಿಂಗ್ ಅನ್ನು ಕೂಡ ಪ್ರಾರಂಭಿಸಬಹುದು ಎಂದು ನಿರೀಕ್ಷಿಸುತ್ತೇವೆ.
MOST READ: ಹೊಸ ಮಹೀಂದ್ರಾ ಕಾರುಗಳ ಮೇಲೆ ಭರ್ಜರಿ ರಿಯಾಯಿತಿ
ಹೊಸ ಥಾರ್ ನಲ್ಲಿ ಹಲವಾರು ಹೊಸ ಫೀಚರ್ಸ್ಗಳನ್ನು ಅಳವಡಿಸಲಾಗುತ್ತಿದೆ. ಹೊಸ ಥಾರ್ನಲ್ಲಿ ಫ್ಲೋಟಿಂಗ್ ಟಚ್ಸ್ಕ್ರೀನ್ ಇನ್ಫೋಟೇನ್ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಇದು ಆ್ಯಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ವನ್ನು ಒಳಗೊಂಡಿದೆ ಎಂದು ನಿರೀಕ್ಷಿಸಲಾಗಿದೆ.
2020ರ ಥಾರ್ನಲ್ಲಿರುವ ಹೊಸ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ತನ್ನ ಬ್ರ್ಯಾಂಡ್ನ ಸರಣಿಯಲ್ಲಿರುವ ಟಿಯುವಿ 300 ಎಸ್ಯುವಿಯಲ್ಲಿರುವ ಕ್ಲಸ್ಟರ್ ಅನ್ನು ಹೋಲುವಂತಿದೆ. ಹೊಸ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಡಿಜಿಟಲ್ ಡಿಸ್ಪ್ಲೇ ಯುನಿಟ್ನೊಂದಿಗೆ ಎರಡು ಅನಲಾಗ್ ಡಯಲ್ಗಳನ್ನು ಒಳಗೊಂಡಿದೆ.
MOST READ: ಬಿಡುಗಡೆಯಾಯ್ತು ಫೋಕ್ಸ್ವ್ಯಾಗನ್ ಪೊಲೊ, ವೆಂಟೊ ಟಿಎಸ್ಐ ಲಿಮಿಟೆಡ್ ಎಡಿಷನ್ ಮಾದರಿಗಳು
ಹೊಸ ಮಹೀಂದ್ರಾ ಥಾರ್ನ 4×4 ಲಿವರ್ ವಿಭಿನ್ನವಾಗಿದೆ. ಇದರಲ್ಲಿ 2ಡಬ್ಲ್ಯುಡಿ(ಆರ್ಡಬ್ಲ್ಯುಡಿ) ಹೈ, 4ಡಬ್ಲ್ಯುಡಿ ಹೈ ಮತ್ತು 4 ಡಬ್ಲ್ಯು ಡಿ ಲೋ ಎಂಬ ಮೂರು ಮೋಡ್ಗಳಿವೆ. 2020ರ ಮಹೀಂದ್ರಾ ಥಾರ್ ಎಸ್ಯುವಿಯನ್ನು ಸಾಫ್ಟ್ ಟಾಪ್ ಹಾಗೂ ಹಾರ್ಡ್ ಟಾಪ್ - ಎಂಬ ಎರಡು ಡೋರ್ ಬಾಡಿ ಸ್ಟೈಲ್ಗಳಲ್ಲಿ ನೀಡಲಾಗುವುದು.
ಎಸ್ಯುವಿಯ ಹೊರಭಾಗವು ಜೀಪ್ ಶೈಲಿಯ ವಿನ್ಯಾಸವನ್ನು ಹೊಂದಿದ್ದರೆ, ಇಂಟಿರಿಯರ್ ಅನ್ನು ಹೆಚ್ಚು ಅಪ್ಡೇಟ್ ಮಾಡಲಾಗಿದೆ. ಮಾರುಕಟ್ಟೆಯಲ್ಲಿರುವ ಥಾರ್ 2.5 ಲೀಟರ್ ಡೀಸೆಲ್ ಬಿಎಸ್ 4 ಎಂಜಿನ್ ಹೊಂದಿದೆ. ಈ ಎಂಜಿನ್ 105 ಬಿಹೆಚ್ಪಿ ಪವರ್ ಹಾಗೂ 247 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ನಲ್ಲಿ 5 ಸ್ಪೀಡ್ ಗೇರ್ಬಾಕ್ಸ್ ಅಳವಡಿಸಲಾಗಿದೆ.
MOST READ: ಇತಿಹಾಸದ ಪುಟ ಸೇರಿದ ಫೋಕ್ಸ್ವ್ಯಾಗನ್ ಎಮಿಯೊ ಕಾರು
ಹೊಸ ಥಾರ್ 120 ಬಿಹೆಚ್ಪಿ ಪವರ್ ಉತ್ಪಾದಿಸುವ 2.0 ಲೀಟರ್ ಡೀಸೆಲ್ ಬಿಎಸ್ 6 ಎಂಜಿನ್ ಹೊಂದಿರಲಿದೆ. ಹೊಸ ಫೀಚರ್, ದೊಡ್ಡ ಗಾತ್ರದ ಬಾಡಿ, ಬಲಶಾಲಿಯಾದ ಬಿಎಸ್ 6 ಡೀಸೆಲ್ ಎಂಜಿನ್ ಹೊಂದಲಿರುವ ಹೊಸ ಥಾರ್ನ ಬೆಲೆಯು ಮಾರುಕಟ್ಟೆಯಲ್ಲಿರುವ ಥಾರ್ಗಿಂತ ಹೆಚ್ಚಾಗುವ ಸಾಧ್ಯತೆಗಳಿವೆ.
ಹೊಸ ಥಾರ್ನಲ್ಲಿ 5 ಸ್ಪೋಕ್ ವಿನ್ಯಾಸದ ದೊಡ್ಡ ಅಲಾಯ್ ವ್ಹೀಲ್ಗಳನ್ನು ಅಳವಡಿಸಲಾಗಿದೆ. ಅಲಾಯ್ ವ್ಹೀಲ್ಗಳಲ್ಲಿ 235 ಅಥವಾ 245 ಸೆಕ್ಷನ್ ಟಯರ್ಗಳನ್ನು ನೀಡಲಾಗುವುದು. ಹೊಸ ಥಾರ್ ಮಾರುಕಟ್ಟೆಯಲ್ಲಿರುವ ಥಾರ್ಗಿಂತ ಹೆಚ್ಚು ಬೆಲೆಯನ್ನು ಹೊಂದಿರಲಿದೆ. ಹೊಸ ಮಹೀಂದ್ರಾ ಎಸ್ಯುವಿಯು ಶೀಘ್ರದಲ್ಲೇ ಹೊಸ ಫೀಚರ್ಸ್ಗಳೊಂದಿಗೆ ಬಿಡುಗಡೆಯಾಗಲಿದೆ.