ಬಿಎಸ್-6 ಎಂಜಿನ್ ಸೇರಿ ಭಾರೀ ಬದಲಾವಣೆ ಪಡೆದುಕೊಂಡ ನ್ಯೂ ಜನರೇಷನ್ ಥಾರ್
ಬಿಎಸ್-6 ವಾಹನಗಳ ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಿರುವ ಮಹೀಂದ್ರಾ ಕಂಪನಿಯು ವಿವಿಧ ಕಾರು ಮಾದರಿಗಳನ್ನು ಹೊಸ ಎಂಜಿನ್‌ನೊಂದಿಗೆ ಬಿಡುಗಡೆ ಮಾಡಿದ್ದು, ಇದೀಗ ನ್ಯೂ ಜನರೇಷನ್ ಥಾರ್ ಮಾದರಿಯ ಬಿಡುಗಡೆಗೆ ಸಿದ್ದವಾಗುತ್ತಿದೆ.

ಹೊಸ ಥಾರ್ ಮಾದರಿಯ ಈ ಬಾರಿ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಂಡಿದ್ದು, 5 ಸೀಟರ್ ಮಾದರಿಯು ಸಾಮಾನ್ಯ ಕಾರುಗಳಲ್ಲಿರುವಂತೆ ಆಸನ ಸೌಲಭ್ಯವನ್ನು ಹೊಂದಿರಲಿದೆ. ಹಾಗೆಯೇ 6 ಸೀಟರ್ ಮಾದರಿಯು ಆಫ್ ರೋಡ್ ಪ್ರಯಾಣಕ್ಕೆ ಸುಲಭವಾಗುವಂತೆ ಎರಡನೇ ಸಾಲಿನ ಆಸನಗಳನ್ನು ಎದುರುಬದುರಾಗಿ ನೀಡಿರುವುದು ಆಕರ್ಷಕವಾಗಿದ್ದು, ಹೊಸ ಕಾರಿನ ಉತ್ಪದನಾ ಆವೃತ್ತಿ ಕೂಡಾ ಅಂತಿಮ ರೂಪ ಪಡೆದುಕೊಂಡಿದೆ.

ಹೊಸ ಥಾರ್ ಕಾರು ಈ ಬಾರಿ 2.2-ಡೀಸೆಲ್ ಎಂಜಿನ್ ಜೊತೆಗೆ ಹೊಸದಾಗಿ 2.0-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಹೊಂದಿರಲಿದೆ ಎನ್ನಲಾಗಿದ್ದು, ಮಾಲಿನ್ಯ ಹೊರಸೂಸುವಿಕೆ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡಿದೆ.

ಭಾರತದಲ್ಲಿ ಸದ್ಯ ಬಿಎಸ್-6 ನಿಯಮವು ಕಡ್ಡಾಯವಾಗಿ ಜಾರಿಗೆ ಬಂದಿದ್ದು, ಕೇಂದ್ರ ಸರ್ಕಾರದ ಹೊಸ ನಿಯಮದಂತೆ ಮಹೀಂದ್ರಾ ಸೇರಿದಂತೆ ಬಹುತೇಕ ಆಟೋ ಕಂಪನಿಗಳು ಬಿಎಸ್-6 ಎಂಜಿನ್ ಪ್ರೇರಿತ ಡೀಸೆಲ್ ವಾಹನಗಳನ್ನು ಬಿಡುಗಡೆಗೊಳಿಸಿವೆ.
MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಇನ್ನು ಬಿಎಸ್-6 ವೈಶಿಷ್ಟ್ಯತೆಗಳಿಂದಾಗಿ ಮಹೀಂದ್ರಾ ಹೊಸ ಕಾರುಗಳಲ್ಲಿ ಹಲವಾರು ಬದಲಾವಣೆಗಳಾಗಿದ್ದು, ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಟಿಯುವಿ300 ಪ್ಲಸ್ ಮತ್ತು ನ್ಯೂ ಜನರೇಷನ್ ಥಾರ್ ಕಾರುಗಳಲ್ಲಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಜೊತೆ ಇಬಿಡಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್ ಸಿಸ್ಟಂ, ಸ್ಪೀಡ್ ಅಲರ್ಟ್, ಸೀಟ್ ಬೆಲ್ಟ್ ರಿಮೆಂಡರ್ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು(ಟಾಪ್ ಎಂಡ್‌ಗಳಲ್ಲಿ), ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್ ಸೌಲಭ್ಯವಿದೆ.
MOST READ: ಎರಡು ಚಕ್ರಗಳಲ್ಲಿ ಚಲಿಸಿದ ಟ್ರಾಕ್ಟರ್, ಆನಂದ್ ಮಹೀಂದ್ರಾ ಹೇಳಿದ್ದೇನು?

ಇದಲ್ಲದೆ ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.

ಇದರೊಂದಿಗೆ ಕಾರು ಕಳ್ಳತನಗಳಿಗೆ ಬ್ರೇಕ್ ಹಾಕಲು ಜಿಯೋ ಫೆನ್ಸ್ ಅಲರ್ಟ್ ಸೇರಿದಂತೆ ಸೆಂಟರ್ ಲಾಕಿಂಗ್ ಸಿಸ್ಟಂ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಒಟ್ಟಿನಲ್ಲಿ ಪ್ರಯಾಣಿಕರ ಸುರಕ್ಷೆತೆಗಾಗಿ ಗರಿಷ್ಠ ಮಟ್ಟದಲ್ಲಿ ಸುರಕ್ಷಾ ಸೌಲಭ್ಯ ಗಳನ್ನು ಅಳವಡಿಸಿರುವುದೇ ಹೊಸ ಕಾರುಗಳ ಪ್ರಮುಖ ಆಕರ್ಷಣೆಯಾಗಲಿದೆ.
MOST READ: ಕರೋನಾ ವೈರಸ್: ಹೊಸ ವಿಧಾನದ ಮೂಲಕ ಜನರ ಬಳಿ ಬರಲಿರುವ ಪೊಲೀಸರು..

ದುಬಾರಿ ಬೆಲೆ
ಬಿಎಸ್-4 ಕಾರುಗಳ ಬೆಲೆಗಳಿಂತಲೂ ಬಿಎಸ್-6 ಕಾರುಗಳ ಬೆಲೆಯು ತಾಂತ್ರಿಕ ಸೌಲಭ್ಯಗಳ ಅಳವಡಿಕೆಯ ಆಧಾರದ ಮೇಲೆ ಪೆಟ್ರೋಲ್ ಕಾರುಗಳು ರೂ.10 ಸಾವಿರದಿಂದ ರೂ.30 ಸಾವಿರ ತನಕ ಮತ್ತು ಡೀಸೆಲ್ ಕಾರುಗಳು ರೂ.40 ಸಾವಿರದಿಂದ ರೂ. 80 ಸಾವಿರ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ.


Click it and Unblock the Notifications








