ದಾಖಲೆಯ ಮೊತ್ತಕ್ಕೆ ಹರಾಜುಗೊಳ್ಳಲಿದೆ ಮಹೀಂದ್ರಾ ಹೊಸ ಥಾರ್ ಎಸ್‌ಯುವಿ
ಮಹೀಂದ್ರಾ ಕಂಪನಿಯು ಮುಂದಿನ ತಿಂಗಳು ಅಕ್ಟೋಬರ್ 2ಕ್ಕೆ ತನ್ನ ಹೊಸ ತಲೆಮಾರಿನ ಥಾರ್ ಎಸ್‌ಯುವಿ ಮಾದರಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡುತ್ತಿದ್ದು, ಅದಕ್ಕೂ ಮುನ್ನ ಹೊಸ ಕಾರಿನ ಮೊದಲ ಯುನಿಟ್ ಅನ್ನು ಕರೋನಾ ವಿರುದ್ಧದ ಹೋರಾಟಕ್ಕಾಗಿ ನಿಧಿ ಸಂಗ್ರಹಣೆಗಾಗಿ ದುಬಾರಿ ಬೆಲೆಯೊಂದಿಗೆ ಆನ್‌ಲೈನ್ ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿದೆ.

ಈ ತಿಂಗಳು 27ರಿಂದ 29ರ ತನಕ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಮಹೀಂದ್ರಾ ಕಂಪನಿಯು ಹೊಸ ಥಾರ್ ಕಾರಿನ ಬೆಲೆಯನ್ನು ಆರಂಭಿಕವಾಗಿ ರೂ.25 ಲಕ್ಷಕ್ಕೆ ನಿಗದಿಪಡಿಸಿದೆ. ಹರಾಜು ವೇಳೆ ಈಗಾಗಲೇ ರೂ.87.50 ಲಕ್ಷಕ್ಕೆ ಬಂದು ನಿಂತಿರುವ ಹರಾಜು ಪ್ರಕ್ರಿಯೆಯು ಇನ್ನೇರಡು ದಿನಗಳಲ್ಲಿ ರೂ. 1 ಕೋಟಿಗೆ ತಲುಪುವ ನೀರಿಕ್ಷೆಗಳಿವೆ. ಹರಾಜು ಪ್ರಕ್ರಿಯೆಯಿಂದ ಬಂದ ಹಣವನ್ನು ಕರೋನಾ ವಿರುದ್ಧದ ಹೋರಾಟಕ್ಕಾಗಿ ದೇಣಿಗೆ ನೀಡಲು ನಿರ್ಧರಿಸಲಾಗಿದೆ.

ಹರಾಜಿನಲ್ಲಿ ಮಾರಾಟಗೊಳ್ಳುವ ಕಾರನ್ನು ವಿಶೇಷವಾಗಿ ಕಸ್ಟಮೈಜ್ಡ್ ಮಾಡಲಿರುವ ಮಹೀಂದ್ರಾ ಕಂಪನಿಯು ಗ್ರಾಹಕರ ಬೇಡಿಕೆ ಹಲವಾರು ಬದಲಾಣೆಗಳೊಂದಿಗೆ ಕಾರು ವಿತರಣೆ ಮಾಡಲಿದ್ದು, ವಿಶೇಷ ಬ್ಯಾಡ್ಜ್‌ಗಳನ್ನು ಅಳವಡಿಸಲಿದೆ.

ಕೋವಿಡ್ -19 ರ ವಿರುದ್ಧ ಹೋರಾಟಕ್ಕಾಗಿ ನಂದಿ ಫೌಂಡೇಶನ್, ಸ್ವೇಡ್ಸ್ ಫೌಂಡೇಶನ್ ಮತ್ತು ಪಿಎಂ ಕೇರ್ ಫಂಡ್‌ಗೆ ಹರಾಜಿನ ಮೊತ್ತವನ್ನು ಹಂಚಿಕೆ ಮಾಡಲು ನಿರ್ಧರಿಸಿದ್ದು, ಈ 30ರಂದು ಹೊಸ ಕಾರಿನ ಅಂತಿಮ ಮೊತ್ತವು ಬಹಿರಂಗವಾಗಿದೆ.

ಇನ್ನು ನ್ಯೂ ಜನರೇಷನ್ ಥಾರ್ ಕಾರು ಮಾದರಿಯು ಈ ಬಾರಿ ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದು, ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಲಾಗಿದೆ. ಇದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಲಿದ್ದು, ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಹೊಸ ಥಾರ್‌ನಲ್ಲಿ ಮರುವಿನ್ಯಾಸಗೊಳಿಸಲಾದ ಸೆವೆನ್ ಸ್ಲಾಟ್ ಗ್ರಿಲ್, ವೃತ್ತಾಕಾರದವಾದ ಹೆಡ್‌ಲ್ಯಾಂಪ್, 18-ಇಂಚಿನ ಆಕರ್ಷಕ ಅಲಾಯ್ ವೀಲ್ಹ್, ಡ್ಯುಯಲ್ ಬಂಪರ್, ಸ್ಕಫ್ ಪ್ಲೇಟ್, ಬಾಕ್ಸಿ ಮಾದರಿಯಲ್ಲಿ ಟೈಲ್ ಲೈಟ್‌ನೊಂದಿಗೆ ಮಾರ್ಡನ್ ಶೈಲಿ ಪಡೆದುಕೊಂಡಿದೆ.

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಸಹ ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಥಾರ್ ಹೊಸ ಆವೃತ್ತಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಡೀಸೆಲ್ ಮಾದರಿಯು 132-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಪೆಟ್ರೋಲ್ ಮಾದರಿಯು 152-ಬಿಎಚ್‌ಪಿ, 320-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಇನ್ನುಳಿದಂತೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಮಾಹಿತಿಗಳ ಪ್ರಕಾರ, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ದರದಂತೆ ಆರಂಭಿಕವಾಗಿ ರೂ. 9.75 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.12.25 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿದ್ದು, ಆಫ್-ರೋಡ್ ಕೌಶಲ್ಯಕ್ಕೆ ಪೂರಕವಾದ ಹಲವಾರು ತಾಂತ್ರಿಕ ಅಂಶಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಳ್ಳಲಿದೆ.


Click it and Unblock the Notifications