2020ರ ಥಾರ್ ಕಾರು ವಿತರಣೆ ಆರಂಭ- ಮೊದಲ ಕಾರಿನ ಬೆಲೆ ರೂ. 1.11 ಕೋಟಿ!

ಮಹೀಂದ್ರಾ ಕಂಪನಿಯು ಅಕ್ಟೋಬರ್ 2ರಂದು ಬಿಡುಗಡೆ ಮಾಡಿದ್ದ ಹೊಸ ತಲೆಮಾರಿನ ಥಾರ್ ಎಸ್‌ಯುವಿ ಮಾದರಿಯ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದ್ದು, ಕೋವಿಡ್ ಕೇರ್ ಪರಿಹಾರ ನಿಧಿಗಾಗಿ ಹೊಸ ಕಾರಿನ ಮೊದಲ ಯುನಿಟ್ ಅನ್ನು ಹರಾಜು ಪ್ರಕ್ರಿಯೆ ಮೂಲಕ ಭಾರೀ ಪ್ರಮಾಣದ ದೇಣಿಗೆ ಸಂಗ್ರಹಿಸಿದೆ.

2020ರ ಥಾರ್ ಕಾರು ವಿತರಣೆ ಆರಂಭ- ಮೊದಲ ಕಾರಿನ ಬೆಲೆ ರೂ. 1.11 ಕೋಟಿ!

ಹೊಸ ಥಾರ್ ಕಾರಿನ ಮೊದಲ ಯುನಿಟ್ ಮಾಲೀಕತ್ವಕ್ಕಾಗಿ ಆನ್‌ಲೈನ್ ಹರಾಜು ಪ್ರಕ್ರಿಯೆ ನಡೆಸಿದ್ದ ಮಹೀಂದ್ರಾ ಕಂಪನಿಯು ದಾಖಲೆ ಪ್ರಮಾಣದ ಮೊತ್ತಕ್ಕೆ ಮಾರಾಟ ಮಾಡಿದ್ದು, ದೆಹಲಿ ಮೂಲದ ಆನಂದ್ ಮಿಂದಾ ಎನ್ನುವವರು ರೂ. 1.11 ಕೋಟಿ ಬೆಲೆ ಪಾವತಿಸಿ ಹೊಸ ಥಾರ್ ಎಸ್‌ಯುವಿ ಕಾರಿನ ಮಾಲೀಕತ್ವ ಪಡೆದುಕೊಂಡಿದ್ದಾರೆ. ದೇಣಿಗಾಗಿ ಸಂಗ್ರಹಿಸಲಾಗಿರುವ ಭಾರೀ ಮೊತ್ತವನ್ನು ಮಹೀಂದ್ರಾ ಕಂಪನಿಯು ಸರ್ಕಾರೇತರ ಸಂಘ-ಸಂಸ್ಥೆಗಳ ಅಭಿವೃದ್ದಿ ಕಾರ್ಯಗಳಿಗೆ ಹಸ್ತಾಂತರಿಸಿದೆ.

2020ರ ಥಾರ್ ಕಾರು ವಿತರಣೆ ಆರಂಭ- ಮೊದಲ ಕಾರಿನ ಬೆಲೆ ರೂ. 1.11 ಕೋಟಿ!

ಥಾರ್ ಕಾರಿನ ಮೊದಲ ಯುನಿಟ್‌ಗೆ ರೂ. 25 ಲಕ್ಷ ಆರಂಭಿಕ ದರ ನಿಗದಿ ಮಾಡಿದ್ದ ಮಹೀಂದ್ರಾ ಕಂಪನಿಯು ಅಂತಿಮವಾಗಿ ರೂ. 1,11,00,000 ಬೆಲೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಮೊದಲ ಐದು ಯುನಿಟ್‌ಗಳಿಂದ ಒಟ್ಟಾರೆಯಾಗಿ ರೂ.2.02 ಕೋಟಿ ದೇಣಿಗೆ ಸಂಗ್ರಹಿಸಲಾಗಿದೆ.

2020ರ ಥಾರ್ ಕಾರು ವಿತರಣೆ ಆರಂಭ- ಮೊದಲ ಕಾರಿನ ಬೆಲೆ ರೂ. 1.11 ಕೋಟಿ!

ಹರಾಜು ಪ್ರಕ್ರಿಯೆಯಲ್ಲಿ ಮಾರಾಟಗೊಂಡಿರುವ ಹೊಸ ಥಾರ್ ಎಸ್‌ಯುವಿ ಮಾದರಿಗಳು ಮಾಲೀಕರ ಬೇಡಿಕೆಯೆಂತೆ ಹಲವಾರು ಮಾರ್ಪಾಡುಗಳನ್ನು ಪಡೆದುಕೊಂಡಿರಲಿದ್ದು, ಮಾಲೀಕರ ಬೇಡಿಕೆಗೆ ಅನುಗುಣವಾಗಿ ಫೀಚರ್ಸ್, ಬಣ್ಣಗಳ ಆಯ್ಕೆ ಸೇರಿದಂತೆ ವಿಶೇಷ ಬ್ಯಾಡ್ಜ್‌ಗಳನ್ನು ಅಳವಡಿಸಲಾಗುತ್ತದೆ.

2020ರ ಥಾರ್ ಕಾರು ವಿತರಣೆ ಆರಂಭ- ಮೊದಲ ಕಾರಿನ ಬೆಲೆ ರೂ. 1.11 ಕೋಟಿ!

ಇನ್ನು ಆಕರ್ಷಕ ಬೆಲೆಯೊಂದಿಗೆ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಂಡಿರುವ ಥಾರ್ ಕಾರು ಮಾದರಿಯು ಇದುವರೆಗೆ ಸುಮಾರು 15 ಸಾವಿರಕ್ಕಿಂತಲೂ ಹೆಚ್ಚು ಬುಕ್ಕಿಂಗ್ ಗಿಟ್ಟಿಸಿಕೊಂಡಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದೆ. ಥಾರ್ ಕಾರು ಆರಂಭಿಕ ಆವೃತ್ತಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 9.80 ಲಕ್ಷದಿಂದ ಟಾಪ್ ಮಾದರಿಯು ರೂ. 12.95 ಲಕ್ಷ ಬೆಲೆ ಪಡೆದುಕೊಂಡಿದ್ದು, ಅತ್ಯುತ್ತಮ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ.

2020ರ ಥಾರ್ ಕಾರು ವಿತರಣೆ ಆರಂಭ- ಮೊದಲ ಕಾರಿನ ಬೆಲೆ ರೂ. 1.11 ಕೋಟಿ!

ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದ್ದು, ಹೊಸ ಕಾರಿನ ಹೊರಭಾಗದ ವಿನ್ಯಾಸದಲ್ಲೂ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸಲಾಗಿದೆ.

2020ರ ಥಾರ್ ಕಾರು ವಿತರಣೆ ಆರಂಭ- ಮೊದಲ ಕಾರಿನ ಬೆಲೆ ರೂ. 1.11 ಕೋಟಿ!

ಮರುವಿನ್ಯಾಸಗೊಳಿಸಲಾದ ಸೆವೆನ್ ಸ್ಲಾಟ್ ಗ್ರಿಲ್, ವೃತ್ತಾಕಾರವಾದ ಹೆಡ್‌ಲ್ಯಾಂಪ್, 18-ಇಂಚಿನ ಆಕರ್ಷಕ ಅಲಾಯ್ ವೀಲ್ಹ್, ಡ್ಯುಯಲ್ ಟೋನ್ ಬಂಪರ್, ಸ್ಕಫ್ ಪ್ಲೇಟ್, ಬಾಕ್ಸಿ ಮಾದರಿಯಲ್ಲಿರುವ ಟೈಲ್ ಲೈಟ್‌ನೊಂದಿಗೆ ಮಾರ್ಡನ್ ಶೈಲಿ ಪಡೆದುಕೊಂಡಿದೆ.

2020ರ ಥಾರ್ ಕಾರು ವಿತರಣೆ ಆರಂಭ- ಮೊದಲ ಕಾರಿನ ಬೆಲೆ ರೂ. 1.11 ಕೋಟಿ!

ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್‌ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿದ್ದು, ಗ್ರಾಹಕರು ತಮ್ಮ ಬೇಡಿಕೆ ಅನುಗುಣವಾಗಿ ಎಎಕ್ಸ್ ಮ್ಯಾನುವಲ್ ಮತ್ತು ಎಲ್ಎಕ್ಸ್ ಮಾದರಿಯಲ್ಲಿ ಕನ್ವರ್ಟಿಬಲ್ ಮತ್ತು ಹಾರ್ಡ್ ಟಾಪ್ ಆಯ್ಕೆ ಮಾಡಬಹುದಾಗಿದೆ.

2020ರ ಥಾರ್ ಕಾರು ವಿತರಣೆ ಆರಂಭ- ಮೊದಲ ಕಾರಿನ ಬೆಲೆ ರೂ. 1.11 ಕೋಟಿ!

ಹೊಸ ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

2020ರ ಥಾರ್ ಕಾರು ವಿತರಣೆ ಆರಂಭ- ಮೊದಲ ಕಾರಿನ ಬೆಲೆ ರೂ. 1.11 ಕೋಟಿ!

ಎಂಜಿನ್ ಮತ್ತು ಪರ್ಫಾಮೆನ್ಸ್

ಹೊಸ ಥಾರ್ ಕಾರು ಮಾದರಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

2020ರ ಥಾರ್ ಕಾರು ವಿತರಣೆ ಆರಂಭ- ಮೊದಲ ಕಾರಿನ ಬೆಲೆ ರೂ. 1.11 ಕೋಟಿ!

ಥಾರ್ ಡೀಸೆಲ್ ಮಾದರಿಯು 132-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಪೆಟ್ರೋಲ್ ಮಾದರಿಯು 152-ಬಿಎಚ್‌ಪಿ, 320-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು. ಈ ಮೂಲಕ ಪ್ರಯಾಣಿಕರ ಸುರಕ್ಷತೆಯಲ್ಲೂ ಗಮನಸೆಳೆಯಲಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

2020ರ ಥಾರ್ ಕಾರು ವಿತರಣೆ ಆರಂಭ- ಮೊದಲ ಕಾರಿನ ಬೆಲೆ ರೂ. 1.11 ಕೋಟಿ!

ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.

2020ರ ಥಾರ್ ಕಾರು ವಿತರಣೆ ಆರಂಭ- ಮೊದಲ ಕಾರಿನ ಬೆಲೆ ರೂ. 1.11 ಕೋಟಿ!

ಹಾಗೆಯೇ ಎಲ್ಇಡಿ ಡಿಆರ್‌ಎಲ್ ಫಾಗ್ ಲ್ಯಾಂಪ್ಸ್, ಎಂಟು ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಆಟೋ ಎಸಿ, ಇಎಸ್‌ಪಿ ಮತ್ತು 226-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್‌ನೊಂದಿಗೆ ಆಫ್ ರೋಡ್‌ನಲ್ಲಿ ಮತ್ತಷ್ಟು ಗಮನಸೆಳೆಯಲಿದೆ.

More from DriveSpark

Article Published On: Monday, November 2, 2020, 14:07 [IST]
English summary
The new-generation Mahindra Thar deliveries have begun in the country. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+