ಬಿಎಸ್-6 ಥಾರ್ ಎಸ್‍ಯುವಿ ಟ್ರಯಲ್ ಉತ್ಪಾದನೆ ಆರಂಭಿಸಿದ ಮಹೀಂದ್ರಾ

ಬಹುನಿರೀಕ್ಷಿತ ಐಕಾನಿಕ್ ಆಫ್-ರೋಡರ್ 2020ರ ಥಾರ್ ಅನ್ನು ಬಿಡುಗಡೆಗೊಳಿಸುವುದಕ್ಕೆ ಮಹೀಂದ್ರಾ ಸಂಸ್ಥೆಯು ಸಜ್ಜಾಗಿದೆ. ಈ ಹೊಸ ಮಹೀಂದ್ರಾ ಥಾರ್ ಎಸ್‍ಯುವಿಯ ಟ್ರಯಲ್ ಉತ್ಪಾದನೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ.

ಬಿಎಸ್-6 ಥಾರ್ ಎಸ್‍ಯುವಿಯ ಟ್ರಯಲ್ ಉತ್ಪಾದನೆ ಆರಂಭಿಸಿದ ಮಹೀಂದ್ರಾ

ಮಹೀಂದ್ರಾ ಸಂಸ್ಥೆಯು ಈ ಥಾರ್ ಎಸ್‍ಯುವಿಯನ್ನು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ ಎಂದು ನಿರೀಕ್ಷಿಸುತ್ತೇವೆ. ಕಾರೋನ ಸೋಂಕಿನಿಂದಾಗಿ ಈ ಹೊಸ ಥಾರ್ ಎಸ್‍ಯುವಿಯ ಬಿಡುಗಡೆಯು ವಿಳಂಬವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಎಸ್‍ಯುವಿಗಳಲ್ಲಿ ಹೊಸ ಥಾರ್ ಕೂಡ ಒಂದಾಗಿದೆ. ಮಹೀಂದ್ರಾ ಕಂಪನಿಯು ಭಾರತದಲ್ಲಿ ಹೊಸ ಮಹೀಂದ್ರಾ ಥಾರ್ ಎಸ್‍ಯುವಿನ್ನು ಹಲವು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡೆಸಲಾಗಿದೆ.

ಬಿಎಸ್-6 ಥಾರ್ ಎಸ್‍ಯುವಿಯ ಟ್ರಯಲ್ ಉತ್ಪಾದನೆ ಆರಂಭಿಸಿದ ಮಹೀಂದ್ರಾ

ಈ ಹೊಸ ಮಹೀಂದ್ರಾ ಥಾರ್ ಎಸ್‍ಯುವಿಗಾಗಿ ಬುಕ್ಕಿಂಗ್ ಅನ್ನು ಸ್ವೀಕರಿಸಲು ಪ್ರಾರಂಭಿಸಿದ್ದಾರೆ. ಹೊಸ ಥಾರ್ ನಲ್ಲಿ ಹಲವಾರು ಹೊಸ ಫೀಚರ್ಸ್‍‍ಗಳನ್ನು ಅಳವಡಿಸಲಾಗುತ್ತಿದೆ. ಹೊಸ ಥಾರ್‍‍ನಲ್ಲಿ ಫ್ಲೋಟಿಂಗ್ ಟಚ್‍‍ಸ್ಕ್ರೀನ್ ಇನ್ಫೋಟೇನ್‍‍ಮೆಂಟ್ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಇದು ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ವನ್ನು ಒಳಗೊಂಡಿದೆ ಎಂದು ನಿರೀಕ್ಷಿಸಲಾಗಿದೆ.

MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಬಿಎಸ್-6 ಥಾರ್ ಎಸ್‍ಯುವಿಯ ಟ್ರಯಲ್ ಉತ್ಪಾದನೆ ಆರಂಭಿಸಿದ ಮಹೀಂದ್ರಾ

2020ರ ಥಾರ್‍‍‍ನಲ್ಲಿರುವ ಹೊಸ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ತನ್ನ ಬ್ರ್ಯಾಂಡ್‍ನ ಸರಣಿಯಲ್ಲಿರುವ ಟಿ‍ಯುವಿ 300 ಎಸ್‍‍ಯುವಿಯಲ್ಲಿರುವ ಕ್ಲಸ್ಟರ್‍ ಅನ್ನು ಹೋಲುವಂತಿದೆ. ಹೊಸ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಡಿಜಿಟಲ್ ಡಿಸ್‍‍ಪ್ಲೇ ಯುನಿ‍‍ಟ್‍ನೊಂದಿಗೆ ಎರಡು ಅನಲಾಗ್ ಡಯಲ್‍ಗಳನ್ನು ಒಳಗೊಂಡಿದೆ.

ಬಿಎಸ್-6 ಥಾರ್ ಎಸ್‍ಯುವಿಯ ಟ್ರಯಲ್ ಉತ್ಪಾದನೆ ಆರಂಭಿಸಿದ ಮಹೀಂದ್ರಾ

ಹೊಸ ಮಹೀಂದ್ರಾ ಥಾರ್‍‍ನ 4×4 ಲಿವರ್ ವಿಭಿನ್ನವಾಗಿದೆ. ಇದರಲ್ಲಿ 2ಡಬ್ಲ್ಯುಡಿ(ಆರ್‍‍ಡಬ್ಲ್ಯುಡಿ) ಹೈ, 4ಡಬ್ಲ್ಯುಡಿ ಹೈ ಮತ್ತು 4 ಡಬ್ಲ್ಯು ಡಿ ಲೋ ಎಂಬ ಮೂರು ಮೋಡ್‍‍ಗಳಿವೆ. 2020ರ ಮಹೀಂದ್ರಾ ಥಾರ್ ಎಸ್‍‍ಯುವಿಯನ್ನು ಸಾಫ್ಟ್ ಟಾಪ್ ಹಾಗೂ ಹಾರ್ಡ್ ಟಾಪ್ - ಎಂಬ ಎರಡು ಡೋರ್ ಬಾಡಿ ಸ್ಟೈಲ್‌ಗಳಲ್ಲಿ ನೀಡಲಾಗುವುದು.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಿಎಸ್-6 ಥಾರ್ ಎಸ್‍ಯುವಿಯ ಟ್ರಯಲ್ ಉತ್ಪಾದನೆ ಆರಂಭಿಸಿದ ಮಹೀಂದ್ರಾ

ಎಸ್‍‍ಯುವಿಯ ಹೊರಭಾಗವು ಜೀಪ್ ಶೈಲಿಯ ವಿನ್ಯಾಸವನ್ನು ಹೊಂದಿದ್ದರೆ, ಇಂಟಿರಿಯರ್ ಅನ್ನು ಹೆಚ್ಚು ಅಪ್‍‍ಡೇಟ್ ಮಾಡಲಾಗಿದೆ. ಮಾರುಕಟ್ಟೆಯಲ್ಲಿರುವ ಥಾರ್ 2.5 ಲೀಟರ್ ಡೀಸೆಲ್ ಬಿಎಸ್ 4 ಎಂಜಿನ್‌ ಹೊಂದಿದೆ. ಈ ಎಂಜಿನ್ 105 ಬಿ‍‍ಹೆಚ್‌ಪಿ ಪವರ್ ಹಾಗೂ 247 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍‍ನಲ್ಲಿ 5 ಸ್ಪೀಡ್ ಗೇರ್‌ಬಾಕ್ಸ್‌ ಅಳವಡಿಸಲಾಗಿದೆ.

ಬಿಎಸ್-6 ಥಾರ್ ಎಸ್‍ಯುವಿಯ ಟ್ರಯಲ್ ಉತ್ಪಾದನೆ ಆರಂಭಿಸಿದ ಮಹೀಂದ್ರಾ

ಹೊಸ ಥಾರ್ 120 ಬಿ‍‍ಹೆಚ್‌ಪಿ ಪವರ್ ಉತ್ಪಾದಿಸುವ 2.0 ಲೀಟರ್ ಡೀಸೆಲ್ ಬಿಎಸ್ 6 ಎಂಜಿನ್ ಹೊಂದಿರಲಿದೆ. ಹೊಸ ಫೀಚರ್, ದೊಡ್ಡ ಗಾತ್ರದ ಬಾಡಿ, ಬಲಶಾಲಿಯಾದ ಬಿಎಸ್ 6 ಡೀಸೆಲ್ ಎಂಜಿನ್ ಹೊಂದಲಿರುವ ಹೊಸ ಥಾರ್‌ನ ಬೆಲೆಯು ಮಾರುಕಟ್ಟೆಯಲ್ಲಿರುವ ಥಾರ್‌ಗಿಂತ ಹೆಚ್ಚಾಗುವ ಸಾಧ್ಯತೆಗಳಿವೆ.

MOST READ: ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ನಿಸ್ಸಾನ್ ಮ್ಯಾಗ್ನೆಟ್ ಎಸ್‍ಯುವಿ

ಬಿಎಸ್-6 ಥಾರ್ ಎಸ್‍ಯುವಿಯ ಟ್ರಯಲ್ ಉತ್ಪಾದನೆ ಆರಂಭಿಸಿದ ಮಹೀಂದ್ರಾ

ಹೊಸ ಥಾರ್‍‍ನಲ್ಲಿ 5 ಸ್ಪೋಕ್ ವಿನ್ಯಾಸದ ದೊಡ್ಡ ಅಲಾಯ್ ವ್ಹೀಲ್‍‍ಗಳನ್ನು ಅಳವಡಿಸಲಾಗಿದೆ. ಅಲಾಯ್ ವ್ಹೀಲ್‍‍ಗಳಲ್ಲಿ 235 ಅಥವಾ 245 ಸೆಕ್ಷನ್ ಟಯರ್‍‍ಗಳನ್ನು ನೀಡಲಾಗುವುದು.

ಬಿಎಸ್-6 ಥಾರ್ ಎಸ್‍ಯುವಿಯ ಟ್ರಯಲ್ ಉತ್ಪಾದನೆ ಆರಂಭಿಸಿದ ಮಹೀಂದ್ರಾ

ಹೊಸ ಥಾರ್ ಮಾರುಕಟ್ಟೆಯಲ್ಲಿರುವ ಥಾರ್‍‍ಗಿಂತ ಹೆಚ್ಚು ಬೆಲೆಯನ್ನು ಹೊಂದಿರಲಿದೆ. ಹೊ‍‍ಸ ಮಹೀಂದ್ರಾ ಎಸ್‍‍ಯುವಿಯು ಶೀಘ್ರದಲ್ಲೇ ಹೊಸ ಫೀಚರ್ಸ್‍‍ಗಳೊಂದಿಗೆ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ.

Most Read Articles

Kannada
English summary
All-New Mahindra Thar Trial Production Begins. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more