ಬಹುನೀರಿಕ್ಷಿತ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಅನಾವರಣ

ಆಫ್-ರೋಡ್ ವಾಹನಗಳ ಉತ್ಪಾದನೆಯಲ್ಲಿ ತನ್ನದೆ ಆದ ವೈಶಿಷ್ಟ್ಯತೆ ಹೊಂದಿರುವ ಮಹೀಂದ್ರಾ ಕಂಪನಿಯು ಥಾರ್ ಹೊಸ ತಲೆಮಾರಿನ ಆವೃತ್ತಿಯನ್ನು ಭಾರತದಲ್ಲಿ ಅನಾವರಣಗೊಳಿಸಿದ್ದು, ಹೊಸ ಆಫ್-ರೋಡ್ ಕಾರು ಮಾದರಿಯು ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಬಹುನೀರಿಕ್ಷಿತ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಅನಾವರಣ

ಬರೋಬ್ಬರಿ ಮೂರು ವರ್ಷಗಳ ಕಾಲ ನ್ಯೂ ಜನರೇಷನ್ ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆ ನಂತರ ಹೊಸ ಥಾರ್ ಕಾರಿನ ಉತ್ಪಾದನಾ ಆವೃತ್ತಿಯನ್ನು 74ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ವೇಳೆ ಅನಾವರಣಗೊಳಿಸಲಾಗಿದ್ದು, ಹೊಸ ಕಾರು ಮುಂಬರುವ ಅಕ್ಟೋಬರ್ ಮೊದಲನೇ ವಾರದಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಾಗುವ ಸುಳಿವು ನೀಡಿದೆ. ಹಾಗಾದ್ರೆ ಹೊಸ ಥಾರ್ ಮಾದರಿಯಲ್ಲಿ ಈ ಬಾರಿ ಪರಿಚಯಿಸಲಾಗಿರುವ ಹೊಸ ಬದಲಾವಣೆಗಳೇನು? ಆಫ್-ರೋಡ್ ಚಾಲನೆ ಸಹಕಾರಿಯಾಗುವ ಹೊಸ ಫೀಚರ್ಸ್ ಯಾವವು? ಎನ್ನುವ ವಿವರಗಳನ್ನು ಇಲ್ಲಿ ಚರ್ಚಿಸೋಣ.

ಬಹುನೀರಿಕ್ಷಿತ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಅನಾವರಣ

ನ್ಯೂ ಜನರೇಷನ್ ಕಾರು ಮಾದರಿಯಲ್ಲಿ ಈ ಬಾರಿ ಪ್ರಮುಖ ಬದಲಾವಣೆ ಅಂದರೆ ಅದು ಎಂಜಿನ್ ಆಯ್ಕೆ. ಹೌದು, ಥಾರ್ ಕಾರು ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿರುವುದು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಲಿದೆ ಎನ್ನಬಹುದು.

ಬಹುನೀರಿಕ್ಷಿತ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಅನಾವರಣ

ಇದರ ಹೊರತಾಗಿ ಹೊಸ ಕಾರಿನ ಹೊರಭಾಗದ ವಿನ್ಯಾಸದಲ್ಲೂ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಮರುವಿನ್ಯಾಸಗೊಳಿಸಲಾದ ಸೆವೆನ್ ಸ್ಲಾಟ್ ಗ್ರಿಲ್, ವೃತ್ತಾಕಾರದವಾದ ಹೆಡ್‌ಲ್ಯಾಂಪ್, 18-ಇಂಚಿನ ಆಕರ್ಷಕ ಅಲಾಯ್ ವೀಲ್ಹ್, ಡ್ಯುಯಲ್ ಬಂಪರ್, ಸ್ಕಫ್ ಪ್ಲೇಟ್, ಬಾಕ್ಸಿ ಮಾದರಿಯಲ್ಲಿ ಟೈಲ್ ಲೈಟ್‌ನೊಂದಿಗೆ ಮಾರ್ಡನ್ ಶೈಲಿ ಪಡೆದುಕೊಂಡಿದೆ.

ಬಹುನೀರಿಕ್ಷಿತ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಅನಾವರಣ

ದೂರದಿಂದ ನೋಡಿದಾಗ ಹೊಸ ಥಾರ್ ಕಾರಿನ ವಿನ್ಯಾಸಗಳು ಜೀಪ್ ರ‍್ಲ್ಯಾಂಗ್ಲರ್ ಮಾದರಿಯ ಹೋಲಿಕೆ ಪಡೆದುಕೊಳ್ಳುತ್ತಾದರೂ ಹಲವು ತಾಂತ್ರಿಕ ಸೌಲಭ್ಯಗಳು ಮಹೀಂದ್ರಾ ವೈಶಿಷ್ಟ್ಯತೆಗಳು ಗ್ರಾಹಕರನ್ನು ಸೆಳೆಯಲಿದ್ದು, ಲ್ಯಾಡರ್-ಫ್ರೇಮ್ ಚಾರ್ಸಿ ಜೊತೆಗೆ ಹೊಸ ಸಸ್ಪೆಂಷನ್‌ ಸೌಲಭ್ಯವು ಹೊಸ ಥಾರ್ ಕಾರಿನ ಗುಣಮಟ್ಟ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿವೆ.

ಬಹುನೀರಿಕ್ಷಿತ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಅನಾವರಣ

ಇನ್ನು ಕಾರಿನ ಒಳಭಾಗದ ಸೌಲಭ್ಯಗಳು ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಮಾರ್ಡನ್ ವಿನ್ಯಾಸಗಳನ್ನು ಹೊಂದಿದ್ದು, ಆಕರ್ಷಕ ಡ್ಯಾಶ್‌ಬೋರ್ಡ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋಗೆ ಸರ್ಪೋಟ್ ಮಾಡಬಲ್ಲ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಎಲ್ಲಾ ಮಾದರಿಯ ಹವಾಗುಣವನ್ನು ತಡೆಯಬಲ್ಲ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಫಾಮೆಷನ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಸೌಲಭ್ಯ ನೀಡಲಾಗಿದೆ.

ಬಹುನೀರಿಕ್ಷಿತ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಅನಾವರಣ

ಜೊತೆಗೆ 50:50 ಅನುಪಾತದ ರಿಯರ್ ಸೀಟುಗಳಲ್ಲೂ ಮಡಿಕೆ ಮಾಡಬಹುದಾದ ಸೌಲಭ್ಯ ನೀಡಲಾಗಿದ್ದು, ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹಾರ್ಡ್ ಟಾಪ್ ಮತ್ತು ಸಾಫ್ಟ್ ಟಾಪ್ ಮಾದರಿಗಳನ್ನು ಆಯ್ಕೆ ಮಾಡಿಕೊಳ್ಳಬಹುದು.

MOST READ: ಸ್ವಾತಂತ್ರ್ಯ ಸಂಭ್ರಮ: ಭಾರತದ ಜನಪ್ರಿಯ 'ಮೇಡ್ ಇನ್ ಇಂಡಿಯಾ' ಕಾರುಗಳಿವು..!

ಬಹುನೀರಿಕ್ಷಿತ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಅನಾವರಣ

ಹೊಸ ಥಾರ್ ಕಾರಿನಲ್ಲಿ ಈ ಎಎಕ್ಸ್ ಮತ್ತು ಎಲ್ಎಕ್ಸ್ ಎನ್ನುವ ಎರಡು ವೆರಿಯೆಂಟ್‌ಗಳನ್ನು ಪರಿಚಯಿಸಲಾಗಿದ್ದು, ಎಎಕ್ಸ್ ವೆರಿಯೆಂಟ್‌ನಲ್ಲಿ ಡೀಸೆಲ್ ಮ್ಯಾನುವಲ್ ಮತ್ತು ಪೆಟ್ರೋಲ್ ಮ್ಯಾನುವಲ್ ಮಾದರಿಯನ್ನು ಮತ್ತು ಎಲ್ಎಕ್ಸ್ ಮಾದರಿಯಲ್ಲಿ ಆಟೋಮ್ಯಾಟಿಕ್ ಮಾದರಿಗಳೊಂದಿಗೆ ಕನ್ವರ್ಟಬಲ್ ಮತ್ತು ಹಾರ್ಡ್ ಟಾಪ್ ಆಯ್ಕೆ ನೀಡಲಾಗಿದೆ.

ಬಹುನೀರಿಕ್ಷಿತ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಅನಾವರಣ

ಹೊಸ ಥಾರ್ ಎಂಜಿನ್ ವೈಶಿಷ್ಯತೆ

ಮೇಲೆ ಹೇಳಿದ ಹಾಗೆ ಥಾರ್ ಕಾರಿನ ಪ್ರಮುಖ ಆಕರ್ಷಣೆ ಅಂದರೆ ಅದು ಡೀಸೆಲ್ ಜೊತೆಗೆ ಹೊಸದಾಗಿ ಪೆಟ್ರೋಲ್ ಎಂಜಿನ್ ಆಯ್ಕೆ. ಈ ಬಾರಿ ಬಿಎಸ್-6 ಎಂಜಿನ್ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಮತ್ತು ಹೊಸದಾಗಿ ಅಭಿವೃದ್ದಿಗೊಳಿಸಲಾದ 2.-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ನೀಡಲಾಗಿದೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಬಹುನೀರಿಕ್ಷಿತ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಅನಾವರಣ

ಎರಡು ಎಂಜಿನ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದ್ದು, ಡೀಸೆಲ್ ಮಾದರಿಯು 132-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಪೆಟ್ರೋಲ್ ಮಾದರಿಯು 152-ಬಿಎಚ್‌ಪಿ, 320-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಬಹುನೀರಿಕ್ಷಿತ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಅನಾವರಣ

ಇನ್ನುಳಿದಂತೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸೆಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ, ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್, ರಿಯರ್ ವ್ಯೂ ಕ್ಯಾಮೆರಾ ಜೋಡಿಸಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಬಹುನೀರಿಕ್ಷಿತ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಅನಾವರಣ

ಹಾಗೆಯೇ ಎಲ್ಇಡಿ ಡಿಆರ್‌ಎಲ್ ಫಾಗ್ ಲ್ಯಾಂಪ್ಸ್, ಎಂಟು ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಆಟೋ ಎಸಿ, ಇಎಸ್‌ಪಿ ಮತ್ತು 226-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್‌ನೊಂದಿಗೆ ಆಫ್ ರೋಡ್‌ನಲ್ಲಿ ಮತ್ತಷ್ಟು ಗಮನಸೆಳೆಯಲಿದೆ.

ಬಹುನೀರಿಕ್ಷಿತ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಅನಾವರಣ

ಖರೀದಿಗೆ ಲಭ್ಯವಿರುವ ಬಣ್ಣಗಳು

ಹೊಸ ಥಾರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು ಆರು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ರೆಡ್ ರೆಜ್, ಮೈಸ್ಟಿಕ್ ಕಾಪರ್, ಅಕ್ವಾಮೆರಿನ್, ನಪೊಲಿ ಬ್ಲ್ಯಾಕ್, ರಾಕಿ ಬಿಝ್ ಮತ್ತು ಗ್ಲ್ಯಾಲಾಕ್ಸಿ ಗ್ರೇ ಬಣ್ಣಗಳನ್ನು ಹೊಂದಿದೆ.

ಬಹುನೀರಿಕ್ಷಿತ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಅನಾವರಣ

ಬಿಡುಗಡೆ ಮತ್ತು ಬೆಲೆ(ಅಂದಾಜು)

ಮಹೀಂದ್ರಾ ಕಂಪನಿಯ ಮಾಹಿತಿ ಪ್ರಕಾರ ಹೊಸ ಕಾರು ಅಕ್ಟೋಬರ್ 2ರಂದು ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಕಾರು ಪ್ರಸ್ತುತ ಕಾರು ಮಾದರಿಗಿಂತಲೂ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ.1 ಲಕ್ಷದಿಂದ ರೂ.2 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ ಎನ್ನಲಾಗಿದೆ.

Most Read Articles

Kannada
English summary
New (2020) Mahindra Thar Unveiled. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X