Just In
Don't Miss!
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- Finance
ಪ್ರತಿ ಲೀಟರ್ ಪೆಟ್ರೋಲ್- ಡೀಸೆಲ್ ಗೆ ನೀವು ನೀಡುವ ಬೆಲೆಯಲ್ಲಿ 48% ಕೇಂದ್ರದ ಸುಂಕ
- News
ಕರ್ನಾಟಕ ಆಕ್ರಮಿತ ಪ್ರದೇಶ ಶೀಘ್ರ ಮಹಾರಾಷ್ಟ್ರಕ್ಕೆ ಸೇರ್ಪಡೆ: ಉದ್ಧವ್ ಠಾಕ್ರೆ
- Movies
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಿಎಸ್-6 ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ
ದೇಶದ ಅತಿ ದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿರುವ ಮಾರುತಿ ಸುಜುಕಿಯು ಉತ್ಪಾದನೆ ಮತ್ತು ಮಾರಾಟವನ್ನು ಇತ್ತೀಚೆಗೆ ಪುನಾರಂಭಿಸಿದೆ. ಇದೀಗ ಮಾರುತಿ ಸುಜುಕಿ ಕಂಪನಿಯು ತನ್ನ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ.

ಈ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಕಳೆದ ಫೆಬ್ರವರಿ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯ ಜನಪ್ರಿಯ ಎಸ್-ಕ್ರಾಸ್ ಕಾರಿನ ಒಂದು ಯುನಿಟ್ ಕೂಡ ಮಾರಾಟವಾಗಿಲ್ಲ. ಜನಪ್ರಿಯ ಮಾರುತಿ ಸುಜುಕಿ ಕಂಪನಿಗೆ ಎಸ್-ಕ್ರಾಸ್ ಕಾರಿನ ಒಂದು ಯುನಿಟ್ ಅನ್ನು ಕೂಡ ಮಾರಾಟ ಮಾಡಲು ಸಾಧ್ಯವಾಗಿಲ್ಲ. ಭಾರತೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಕಾರುಗಳಿಗೆ ಹೋಲಿಸಿದರೆ ಡೀಸೆಲ್ ಕಾರುಗಳಿಗೆ ಬೇಡಿಕೆಯು ಕಡಿಮೆಯಾಗಿದೆ.

ಅಲ್ಲದೇ ಡೀಸೆಲ್ ಎಸ್-ಕ್ರಾಸ್ ಕಾರಿನ ಮಾರಾಟದಲ್ಲಿ ಕುಸಿತ ಕಂಡ ಹಿನ್ನೆಲೆಯಲ್ಲಿ ಫೆಬ್ರವರಿ ತಿಂಗಳ ಕೊನೆಯಲ್ಲಿ ಈ ಮಾದರಿಯನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಮಾರುತಿ ಸುಜುಕಿ ಕಂಪನಿಯು ಎಸ್-ಕ್ರಾಸ್ ಕಾರನ್ನು ಪೆಟ್ರೋಲ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ.
MOST READ: ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಮಾರುತಿ ಇತ್ತೀಚೆಗೆ ಮುಂಬರುವ ಎಸ್-ಕ್ರಾಸ್‌ನ ಟೀಸರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ್ದರು. ಈ ಹೊಸ ಮಾರುತಿ ಎಸ್-ಕ್ರಾಸ್ ಕಾರನ್ನು ಪ್ರೀಮಿಯಂ ನೆಕ್ಸಾ ಡೀಲರ್ ಗಳ ಮೂಲಕ ಮಾರಾಟವನ್ನು ಮಾಡಲಾಗುತ್ತದೆ. 2020ರ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.9.90 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

2020ರ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ಮುಂದಿನ ಜೂನ್ ತಿಂಗಳ ಆರಂಭದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತದೆ. 2020ರ ಎಸ್-ಕ್ರಾಸ್‌ಗೆ ಕೆಲವು ಡೀಲರ್ ಗಳು ಟೋಕನ್ ಮೊತ್ತ ರೂ.11,000ಕ್ಕೆ ಅನಧಿಕೃತವಾಗಿ ಬುಕ್ಕಿಂಗ್ ಅನ್ನು ಸ್ವೀಕರಿಸಲು ಪ್ರಾರಂಭವಾಗಿದೆ. ಈ ಹೊಸ ಕಾರನ್ನು ಬಿಡುಗಡೆಗೊಳಿಸಿದ ಬಳಿಕ ವಿತರಣೆಯು ಪ್ರಾರಂಭಿಸಲಿದೆ.
MOST READ: ಖಚಿತವಾಗದ ಬಹುನಿರೀಕ್ಷಿತ ಜಿಮ್ನಿ ಎಸ್‍ಯುವಿಯ ಬಿಡುಗಡೆ

ಹೊಸ ಎಸ್-ಕ್ರಾಸ್ ನಲ್ಲಿ 1.5 ಪೆಟ್ರೋಲ್ ಬಿಎಸ್- ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 103.5 ಬಿಹೆಚ್‍ಪಿ ಪವರ್ ಮತ್ತು 138 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದೇ ಎಂಜಿನ್ ಅನ್ನು ಮಾರುತಿ ಸುಜುಕಿ ಕಂಪನಿಯ ಇತರ ಮಾದರಿಗಳಾದ ಯಾಜ್, ಎರ್ಟಿಗಾ ಮತ್ತು ಎಕ್ಸ್‌ಎಲ್ 6 ನಲ್ಲಿ ಅಳವಡಿಸಲಾಗಿದೆ.

ಈ ಹೊಸ ಕಾರಿನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟಚ್ ಸ್ಕ್ರೀನ್ ಇನ್ಪೋಟೇನ್‍ಮೆಂಟ್ ಸಿಸ್ಟಂ, ಸ್ಮಾರ್ಟ್‌ಪ್ಲೇ ಸ್ಟುಡಿಯೋ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋವನ್ನು ಹೊಂದಿರಲಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಇನ್ನೂ ಎಸಿ ವೆಂಟ್ಸ್, ಸ್ಟಿಯರಿಂಗ್ ಮೌಟೆಂಡ್ ಕಂಟ್ರೋಲ್ ಅನ್ನು ಅಳವಡಿಸಲಿದೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ಇದರಲ್ಲಿ ಏರ್‍ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಎಸ್ಒಫಿಕ್ಸ್ ಚೈಲ್ಡ್ ಸೀಟ್, ಸ್ಪೀಡ್ ವಾರ್ನಿಂಗ್ ಸಿಸ್ಟಂ ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಹೊಂದಿರಲಿದೆ. ಕೇಂದ್ರ ಸರ್ಕಾರದ ಕ್ರ್ಯಾಶ್ ಟೆಸ್ಟ್ ನಿಯಮಗಳಿಗೆ ಅನುಗುಣವಾಗಿ ಹಲವಾರು ಸುರಕ್ಷಾ ಫೀಚರ್‍ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯುಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಹೊಸ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯು ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪೈಪೋಟಿ ನೀಡಲಿದೆ.