ಬಿಡುಗಡೆಗೆ ಸಜ್ಜಾದ ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ

ದೇಶದ ಅತಿ ದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿರುವ ಮಾರುತಿ ಸುಜುಕಿ ತನ್ನ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ಪ್ರೀಮಿಯಂ ನೆಕ್ಸಾ ಡೀಲರ್‍‍ಗಳ ಮೂಲಕ ಮಾರಾಟ ಮಾಡಲಾಗುತ್ತದೆ.

ಬಿಡುಗಡೆಗೆ ಸಜ್ಜಾದ ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ

ಇದಕ್ಕಾಗಿ ಮಾರುತಿ ಸುಜುಕಿ ಕಂಪನಿಯು ನೆಕ್ಸಾ ಡೀಲರ್‍‍ಗಳಿಗೆಮಾರಾಟದ ಬಗ್ಗೆ ತರಬೇತಿಯನ್ನು ನೀಡುತ್ತಿದೆ. ಇದರಿಂದ ಶೀಘ್ರದಲ್ಲೇ ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯು ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ. ಈ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಭಾರತೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಕಾರುಗಳಿಗೆ ಹೋಲಿಸಿದರೆ ಡೀಸೆಲ್ ಕಾರುಗಳಿಗೆ ಬೇಡಿಕೆಯು ಕಡಿಮೆಯಾಗಿದೆ.

ಬಿಡುಗಡೆಗೆ ಸಜ್ಜಾದ ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ

ಅಲ್ಲದೇ ಡೀಸೆಲ್ ಎಸ್-ಕ್ರಾಸ್ ಕಾರಿನ ಮಾರಾಟದಲ್ಲಿ ಕುಸಿತ ಕಂಡ ಹಿನ್ನೆಲೆಯಲ್ಲಿ ಫೆಬ್ರವರಿ ತಿಂಗಳ ಕೊನೆಯಲ್ಲಿ ಈ ಮಾದರಿಯನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಮಾರುತಿ ಸುಜುಕಿ ಕಂಪನಿಯು ಎಸ್-ಕ್ರಾಸ್ ಕಾರನ್ನು ಪೆಟ್ರೋಲ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ.

MOST READ: ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ನಿಸ್ಸಾನ್ ಮ್ಯಾಗ್ನೆಟ್ ಎಸ್‍ಯುವಿ

ಬಿಡುಗಡೆಗೆ ಸಜ್ಜಾದ ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ

ಮಾರುತಿ ಇತ್ತೀಚೆಗೆ ಮುಂಬರುವ ಎಸ್-ಕ್ರಾಸ್‌ನ ಟೀಸರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ್ದರು. 2020ರ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.9.90 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

ಬಿಡುಗಡೆಗೆ ಸಜ್ಜಾದ ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ

2020ರ ಎಸ್-ಕ್ರಾಸ್‌ ಪೆಟ್ರೋಲ್ ಮಾದರಿಯ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ. ಗ್ರಾಹಕರು ಎಸ್-ಕ್ರಾಸ್‌ ಪೆಟ್ರೋಲ್ ಮಾದರಿಗಾಗಿ ಟೋಕನ್ ಮೊತ್ತ ರೂ.11,000 ಪಾವತಿಸಿ ಬುಕ್ಕಿಂಗ್ ಅನ್ನು ಮಾಡಿಕೊಳ್ಳಬಹುದಾಗಿದೆ. ಈ ಹೊಸ ಕಾರನ್ನು ಬಿಡುಗಡೆಗೊಳಿಸಿದ ಬಳಿಕ ವಿತರಣೆಯು ಪ್ರಾರಂಭಿಸಲಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಿಡುಗಡೆಗೆ ಸಜ್ಜಾದ ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ

ಹೊಸ ಎಸ್-ಕ್ರಾಸ್ ನಲ್ಲಿ 1.5 ಪೆಟ್ರೋಲ್ ಬಿಎಸ್- ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 103.5 ಬಿ‍ಹೆಚ್‍‍ಪಿ ಪವರ್ ಮತ್ತು 138 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದೇ ಎಂಜಿನ್ ಅನ್ನು ಮಾರುತಿ ಸುಜುಕಿ ಕಂಪನಿಯ ಇತರ ಮಾದರಿಗಳಾದ ಸಿಯಾಜ್, ಎರ್ಟಿಗಾ ಮತ್ತು ಎಕ್ಸ್‌ಎಲ್ 6 ನಲ್ಲಿ ಅಳವಡಿಸಲಾಗಿದೆ.

ಬಿಡುಗಡೆಗೆ ಸಜ್ಜಾದ ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ

ಈ ಹೊಸ ಕಾರಿನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟಚ್ ಸ್ಕ್ರೀನ್ ಇನ್ಪೋಟೇನ್‍‍ಮೆಂಟ್ ಸಿಸ್ಟಂ, ಸ್ಮಾರ್ಟ್‌ಪ್ಲೇ ಸ್ಟುಡಿಯೋ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋವನ್ನು ಹೊಂದಿರಲಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಬಿಡುಗಡೆಗೆ ಸಜ್ಜಾದ ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ

ಇನ್ನೂ ಎಸಿ ವೆಂಟ್ಸ್, ಸ್ಟಿಯರಿಂಗ್ ಮೌಟೆಂಡ್ ಕಂಟ್ರೋಲ್ ಅನ್ನು ಅಳವಡಿಸಲಿದೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ಇದರಲ್ಲಿ ಏರ್‍‍ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಎಸ್ಒ‍ಫಿಕ್ಸ್ ಚೈಲ್ಡ್ ಸೀಟ್, ಸ್ಪೀಡ್ ವಾರ್ನಿಂಗ್ ಸಿಸ್ಟಂ ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಹೊಂದಿರಲಿದೆ. ಕೇಂದ್ರ ಸರ್ಕಾರದ ಕ್ರ್ಯಾಶ್ ಟೆಸ್ಟ್ ನಿಯಮಗಳಿಗೆ ಅನುಗುಣವಾಗಿ ಹಲವಾರು ಸುರಕ್ಷಾ ಫೀಚರ್‍‍ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಬಿಡುಗಡೆಗೆ ಸಜ್ಜಾದ ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ

ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯು ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಹೊಸ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯು ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪೈಪೋಟಿ ನೀಡಲಿದೆ.

Most Read Articles

Kannada
English summary
Maruti S-Cross Petrol To Rival Kia Seltos; Sales Training Starts. Read In Kannada.
Story first published: Monday, July 13, 2020, 19:04 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more