Just In
- 5 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 6 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 6 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 6 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಗೆ ಸಜ್ಜಾದ ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿ
ದೇಶದ ಅತಿ ದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿರುವ ಮಾರುತಿ ಸುಜುಕಿ ತನ್ನ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ಪ್ರೀಮಿಯಂ ನೆಕ್ಸಾ ಡೀಲರ್ಗಳ ಮೂಲಕ ಮಾರಾಟ ಮಾಡಲಾಗುತ್ತದೆ.
ಇದಕ್ಕಾಗಿ ಮಾರುತಿ ಸುಜುಕಿ ಕಂಪನಿಯು ನೆಕ್ಸಾ ಡೀಲರ್ಗಳಿಗೆಮಾರಾಟದ ಬಗ್ಗೆ ತರಬೇತಿಯನ್ನು ನೀಡುತ್ತಿದೆ. ಇದರಿಂದ ಶೀಘ್ರದಲ್ಲೇ ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯು ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ. ಈ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಭಾರತೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಕಾರುಗಳಿಗೆ ಹೋಲಿಸಿದರೆ ಡೀಸೆಲ್ ಕಾರುಗಳಿಗೆ ಬೇಡಿಕೆಯು ಕಡಿಮೆಯಾಗಿದೆ.
ಅಲ್ಲದೇ ಡೀಸೆಲ್ ಎಸ್-ಕ್ರಾಸ್ ಕಾರಿನ ಮಾರಾಟದಲ್ಲಿ ಕುಸಿತ ಕಂಡ ಹಿನ್ನೆಲೆಯಲ್ಲಿ ಫೆಬ್ರವರಿ ತಿಂಗಳ ಕೊನೆಯಲ್ಲಿ ಈ ಮಾದರಿಯನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಮಾರುತಿ ಸುಜುಕಿ ಕಂಪನಿಯು ಎಸ್-ಕ್ರಾಸ್ ಕಾರನ್ನು ಪೆಟ್ರೋಲ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ.
MOST READ: ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ನಿಸ್ಸಾನ್ ಮ್ಯಾಗ್ನೆಟ್ ಎಸ್ಯುವಿ
ಮಾರುತಿ ಇತ್ತೀಚೆಗೆ ಮುಂಬರುವ ಎಸ್-ಕ್ರಾಸ್ನ ಟೀಸರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ್ದರು. 2020ರ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.9.90 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.
2020ರ ಎಸ್-ಕ್ರಾಸ್ ಪೆಟ್ರೋಲ್ ಮಾದರಿಯ ಬುಕ್ಕಿಂಗ್ ಅನ್ನು ಪ್ರಾರಂಭಿಸಿದೆ. ಗ್ರಾಹಕರು ಎಸ್-ಕ್ರಾಸ್ ಪೆಟ್ರೋಲ್ ಮಾದರಿಗಾಗಿ ಟೋಕನ್ ಮೊತ್ತ ರೂ.11,000 ಪಾವತಿಸಿ ಬುಕ್ಕಿಂಗ್ ಅನ್ನು ಮಾಡಿಕೊಳ್ಳಬಹುದಾಗಿದೆ. ಈ ಹೊಸ ಕಾರನ್ನು ಬಿಡುಗಡೆಗೊಳಿಸಿದ ಬಳಿಕ ವಿತರಣೆಯು ಪ್ರಾರಂಭಿಸಲಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ
ಹೊಸ ಎಸ್-ಕ್ರಾಸ್ ನಲ್ಲಿ 1.5 ಪೆಟ್ರೋಲ್ ಬಿಎಸ್- ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 103.5 ಬಿಹೆಚ್ಪಿ ಪವರ್ ಮತ್ತು 138 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದೇ ಎಂಜಿನ್ ಅನ್ನು ಮಾರುತಿ ಸುಜುಕಿ ಕಂಪನಿಯ ಇತರ ಮಾದರಿಗಳಾದ ಸಿಯಾಜ್, ಎರ್ಟಿಗಾ ಮತ್ತು ಎಕ್ಸ್ಎಲ್ 6 ನಲ್ಲಿ ಅಳವಡಿಸಲಾಗಿದೆ.
ಈ ಹೊಸ ಕಾರಿನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟಚ್ ಸ್ಕ್ರೀನ್ ಇನ್ಪೋಟೇನ್ಮೆಂಟ್ ಸಿಸ್ಟಂ, ಸ್ಮಾರ್ಟ್ಪ್ಲೇ ಸ್ಟುಡಿಯೋ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋವನ್ನು ಹೊಂದಿರಲಿದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್ವ್ಯಾಗನ್ ಟಿ-ರಾಕ್ ಎಸ್ಯುವಿ
ಇನ್ನೂ ಎಸಿ ವೆಂಟ್ಸ್, ಸ್ಟಿಯರಿಂಗ್ ಮೌಟೆಂಡ್ ಕಂಟ್ರೋಲ್ ಅನ್ನು ಅಳವಡಿಸಲಿದೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ಇದರಲ್ಲಿ ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಎಸ್ಒಫಿಕ್ಸ್ ಚೈಲ್ಡ್ ಸೀಟ್, ಸ್ಪೀಡ್ ವಾರ್ನಿಂಗ್ ಸಿಸ್ಟಂ ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಹೊಂದಿರಲಿದೆ. ಕೇಂದ್ರ ಸರ್ಕಾರದ ಕ್ರ್ಯಾಶ್ ಟೆಸ್ಟ್ ನಿಯಮಗಳಿಗೆ ಅನುಗುಣವಾಗಿ ಹಲವಾರು ಸುರಕ್ಷಾ ಫೀಚರ್ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.
ಹೊಸ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯು ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಹೊಸ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯು ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪೈಪೋಟಿ ನೀಡಲಿದೆ.