ಹೊಸ ನವೀಕರಣಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಮಾರುತಿ ಸ್ವಿಫ್ಟ್ ಫೇಸ್‌ಲಿಫ್ಟ್

ಮಾರುತಿ ಸುಜುಕಿ ಕಾರುಗಳ ಸರಣಿಯಲ್ಲಿ ಸ್ವಿಫ್ಟ್ ಜನಪ್ರಿಯ ಮಾದರಿಗಳಲ್ಲಿ ಒಂದಾಗಿದೆ. ಮಾರುತಿ ಸುಜುಕಿ ಕಂಪನಿಯು ತನ್ನ ಜನಪ್ರಿಯ ಮಾದರಿಯಾದ ಸ್ವಿಫ್ಟ್ ಫೇಸ್‌ಲಿಫ್ಟ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರಿನ ಕೆಲವು ಮಾಹಿತಿಗಳು ಬಹಿರಂಗವಾಗಿದೆ.

ಹೊಸ ನವೀಕರಣಗಳೊಂದಿಗೆ ಮಾರುಕಟ್ಟೆಗೆ ಲಗ್ಗ ಇಡಲಿದೆ ಮಾರುತಿ ಸ್ವಿಫ್ಟ್ ಫೇಸ್‌ಲಿಫ್ಟ್

ಮಾರುತಿ ಸ್ವಿಫ್ಟ್ ದೀರ್ಘಕಾಲದವರೆಗೆ ಭಾರತದಲ್ಲಿ ಹೆಚ್ಚು ಮಾರಾಟವಾದ ಕಾರುಗಳಲ್ಲಿ ಒಂದಾಗಿದೆ.. ಹೊಸ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರನ್ನು ದೀಪಾವಳಿ ಮೊದಲೇ ಬಿಡುಗಡೆಗೊಳಿಸುವ ನಿರೀಕ್ಷೆಗಳಿದೆ. ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರಿನ ಕೆಲವು ಜಪಾನ್‌ನಿಂದ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿವೆ. ಜನಪ್ರಿಯ ಹ್ಯಾಚ್‌ಬ್ಯಾಕ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಡ್-ಲೈಫ್ ನವೀಕರಣವನ್ನು ಮಾಡುತ್ತಿದೆ. ಈ ಚಿತ್ರಗಳಲ್ಲಿ ಪ್ರಸ್ತುತ ಸ್ವಿಫ್ಟ್ ಕಾರಿಗಿಂತ ಯಾವುದೇ ಪ್ರಮುಖ ಬದಲಾವಣೆಗಳು ಕಂಡು ಬಂದಿಲ್ಲ.

ಹೊಸ ನವೀಕರಣಗಳೊಂದಿಗೆ ಮಾರುಕಟ್ಟೆಗೆ ಲಗ್ಗ ಇಡಲಿದೆ ಮಾರುತಿ ಸ್ವಿಫ್ಟ್ ಫೇಸ್‌ಲಿಫ್ಟ್

ಹೊಸ ಮಾರುತಿ ಸ್ವಿಫ್ಟ್ ಪ್ರಮುಖ ಕ್ರೋಮ್ ಸ್ಟ್ರಿಪ್ ಜೊತೆಗೆ ರೇಡಿಯೇಟರ್ ಗ್ರಿಲ್‌ಗಾಗಿ ಹೊಸ ಹನಿಕ್ಯೂಬ್ ಅನ್ನು ಹೊಂದಿರಲಿದೆ. ಈ ಹೊಸ ಕಾರಿನ ಮುಂಭಾಗದ ಬಂಪರ್ ನಲ್ಲಿ ಕೂಡ ಕೆಲವು ಬದಲಾವಣೆಗಳನ್ನು ಮಾಡಲಿದೆ. ಇನ್ನು ಉಳಿದಂತೆ ಕಾರಿನ ಮುಂಭಾಗ ಯಾವುದೇ ಪ್ರಮುಖ ಬದಲಾವಣೆಗಳು ಕಂಡು ಬಂದಿಲ್ಲ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಮಾರುತಿ ಸುಜುಕಿ ಕಾರುಗಳು

ಹೊಸ ನವೀಕರಣಗಳೊಂದಿಗೆ ಮಾರುಕಟ್ಟೆಗೆ ಲಗ್ಗ ಇಡಲಿದೆ ಮಾರುತಿ ಸ್ವಿಫ್ಟ್ ಫೇಸ್‌ಲಿಫ್ಟ್

ಹೊಸ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಡ್ಯುಯಲ್-ಟೋನ್ ಅಲಾಯ್-ವ್ಹೀಲ್ ಅನ್ನು ಅಳವಡಿಸಲಿದೆ. ಆದರೆ ಭಾರತದಲ್ಲಿ ಬಿಡುಗಡೆಗೊಳಿಸುವ ಹೊಸ ಸ್ವಿಫ್ಟ್ ಕಾರಿನಲ್ಲಿ ಡ್ಯುಯಲ್-ಟೋನ್ ಅಲಾಯ್-ವ್ಹೀಲ್ ಹೊಂದಿರುತ್ತದೆ ಎಂಬುವುದು ಖಚಿತವಾಗಿಲ್ಲ.

ಹೊಸ ನವೀಕರಣಗಳೊಂದಿಗೆ ಮಾರುಕಟ್ಟೆಗೆ ಲಗ್ಗ ಇಡಲಿದೆ ಮಾರುತಿ ಸ್ವಿಫ್ಟ್ ಫೇಸ್‌ಲಿಫ್ಟ್

ಮಾರುತಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರಿನ ಇಂಟಿರಿಯರ್ ನಲ್ಲಿಯು ಕೂಡ ಹೆಚ್ಚಿನ ಬದಲಾವಣೆಗಳನ್ನು ಹೊಂದಿರುವುದಿಲ್ಲವೆಂದು ನಿರೀಕ್ಷಿಸುತ್ತೇವೆ. ಈ ಹ್ಯಾಚ್‌ಬ್ಯಾಕ್ ನಲ್ಲಿ ಹೊಸ ಫ್ರಾಭ್ಯಿಕ್ ಸೀಟ್ ಮತ್ತು ಎಕ್ಸಟ್ ಗಳನ್ನು ಹೊಂದಲಿದೆ. ಹೊಸ ಸ್ವಿಫ್ ಫೇಸ್‌ಲಿಫ್ಟ್ ಕಾರಿನಲ್ಲಿ ಸ್ಮಾರ್ಟ್‌ಪ್ಲೇ 7.0-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಂ ಅನ್ನು ಹೊಂದಿರಲಿದೆ. ಈ ಜನಪ್ರಿಯ ಹ್ಯಾಚ್‌ಬ್ಯಾಕ್‌ನಲ್ಲಿ ಕೆಲವು ಫೀಚರ್ ಗಳನ್ನು ಬದಲಾಯಿಸದೆ ಹಾಗೆ ಮುಂದುವರೆಸಬಹುದು.

MOST READ: ಇನ್ನು ಪಾಕಿಸ್ತಾನದಲ್ಲಿ ಮಾರಾಟವಾಗುವುದಿಲ್ಲ ಜನಪ್ರಿಯ ಮಾರುತಿ ಸಿಯಾಜ್ ಕಾರು

ಹೊಸ ನವೀಕರಣಗಳೊಂದಿಗೆ ಮಾರುಕಟ್ಟೆಗೆ ಲಗ್ಗ ಇಡಲಿದೆ ಮಾರುತಿ ಸ್ವಿಫ್ಟ್ ಫೇಸ್‌ಲಿಫ್ಟ್

ಹೊಸ ಸ್ವಿಫ್ಟ್ ಕಾರಿನಲ್ಲಿ ಪ್ರಮುಖ ಬದಲಾವಣೆ ಅಂದರೆ ಎಂಜಿನ್ ಅನ್ನು ಬದಲಾಯಿಸಲಾಗಿದೆ. ಈ ಹೊಸ ಸ್ವಿಫ್ಟ್ ಕಾರಿನಲ್ಲಿ ಆರಂಭದಲ್ಲಿ ನವೀಕರಿಸಿದ ಡಿಜೈರ್ ಕಾಂಪ್ಯಾಕ್ಟ್ ಸೆಡಾನ್‌ನಲ್ಲಿ ಪರಿಚಯಿಸಲಾದ 1.2-ಲೀಟರ್ ಕೆ 12 ಎನ್ ಡ್ಯುಯಲ್ ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸುವ ಸಾಧ್ಯತೆಗಳಿದೆ.

ಹೊಸ ನವೀಕರಣಗಳೊಂದಿಗೆ ಮಾರುಕಟ್ಟೆಗೆ ಲಗ್ಗ ಇಡಲಿದೆ ಮಾರುತಿ ಸ್ವಿಫ್ಟ್ ಫೇಸ್‌ಲಿಫ್ಟ್

ಈ ಬಿಎಸ್-6 ಪೆಟ್ರೋಲ್ ಎಂಜಿನ್ 90 ಬಿಹೆಚ್‍ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 5-ಸ್ಪೀಡ್ ಎಎಂಟಿ ಆಯ್ಕೆಯನ್ನು ನೀಡುವ ಸಾಧ್ಯತೆಗಳಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಹೊಸ ನವೀಕರಣಗಳೊಂದಿಗೆ ಮಾರುಕಟ್ಟೆಗೆ ಲಗ್ಗ ಇಡಲಿದೆ ಮಾರುತಿ ಸ್ವಿಫ್ಟ್ ಫೇಸ್‌ಲಿಫ್ಟ್

ಈ ಹೊಸ ಎಂಜಿನ್ ನಲ್ಲಿ ಸ್ಟಾರ್ಟ್/ಸ್ಟಾಪ್ ಸಿಸ್ಟಂ ಅನ್ನು ಹೊಂದಿರಲಿದೆ. ಈ ಹೊಸ ಎಂಜಿನ್ ಹಿಂದಿನ ಮಾದರಿಯ ಎಂಜಿನ್ ಗಿಂತ ಹೆಚ್ಚು ಪವರ್ ಅನ್ನು ಉತ್ಪಾದಿಸುತ್ತದೆ, ಅಲ್ಲದೇ ಅಧಿಕ ಮೈಲೇಜ್ ಅನ್ನು ಕೂಡ ನೀಡುತ್ತದೆ.

ಹೊಸ ನವೀಕರಣಗಳೊಂದಿಗೆ ಮಾರುಕಟ್ಟೆಗೆ ಲಗ್ಗ ಇಡಲಿದೆ ಮಾರುತಿ ಸ್ವಿಫ್ಟ್ ಫೇಸ್‌ಲಿಫ್ಟ್

ಸ್ವಿಪ್ಟ್ ಫೇಸ್‌ಲಿಫ್ಟ್ ಕಾರು ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆಯಾಗಲಿದೆ. ಹೊಸ ಸ್ವಿಫ್ಟ್ ಅನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಸ್ವಿಫ್ಟ್ ಫೇಸ್‌ಲಿಫ್ಟ್ ಕಾರು ಭಾರತದಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್, ಟಾಟಾ ಟಿಯಾಗೊ ಮತ್ತು ಫೋರ್ಡ್ ಫಿಗೊ ಕಾರುಗಳಿಗೆ ಪೈಪೋಟಿಯನ್ನು ನೀಡಲಿದೆ.

More from DriveSpark

Article Published On: Monday, May 11, 2020, 14:59 [IST]
English summary
2020 Maruti Swift facelift spied undisguised. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+