ಬಿಡುಗಡೆಯಾಯ್ತು ಹೊಸ ಐಷಾರಾಮಿ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿ
ಜರ್ಮನಿಯ ಐಷಾರಾಮಿ ಕಾರು ತಯಾರಕ ಕಂಪನಿ ಮರ್ಸಿಡಿಸ್ ಬೆಂಝ್ ತನ್ನ ಹೊಸ ಜಿಎಲ್ಎಸ್ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.99.90 ಲಕ್ಷಗಳಾಗಿದೆ.

ಹೊಸ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯು ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಇದು ಭಾರತೀಯ ಮಾರುಕಟ್ಟೆಯಲ್ಲಿ ಮೂರನೇ ತಲೆಮಾರಿನ ಮಾದರಿಯಾಗಿದೆ. ಹೊಸ ಮರ್ಸಿಡಿಸ್ ಜಿಎಲ್ಎಸ್ ತನ್ನ ಹಿಂದಿನ ಎಸ್‍ಯುವಿಗಿಂತ 77 ಎಂಎಂ ಮತ್ತು 22 ಎಂಎಂ ಅಗಲವನ್ನು ಹೊಂದಿದೆ. ಹೊಸ ಜಿಎಲ್ಎಸ್ ಎಸ್‍ಯುವಿಯ 60 ಎಂಎಂನಷ್ಟು ವ್ಹೀಲ್ ಬೇಸ್ ಅನ್ನು ಹೊಂದಿದೆ. ಈ ಹೊಸ ಎಸ್‍ಯುವಿ ಐಷಾರಾಮಿ ಆರು ಸೀಟುಗಳ ಕ್ಯಾಬಿನ್ ಅನ್ನು ಹೊಂದಿದೆ.

ಹೊಸ ತೆಲೆಮಾರಿನ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯ 450 4 ಮ್ಯಾಟಿಕ್ ರೂಪಾಂತರ ಪೆಟ್ರೋಲ್ ಎಂಜಿನ್ ಹೊಂದಿದ್ದರೆ, ಜಿಎಲ್ಎಸ್ 400 ಡಿ 4 ಮ್ಯಾಟಿಕ್ ರೂಪಾಂತರ ಡೀಸೆಲ್ ಎಂಜಿನ್ ಅನ್ನು ಹೊಂದಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೊಸ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯ 450 4 ಮ್ಯಾಟಿಕ್ ರೂಪಾಂತರದಲ್ಲಿ 3.0-ಲೀಟರ್ ಇನ್-ಲೈನ್ ಸಿಕ್ಸ್-ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ ಬ್ರ್ಯಾಂಡ್ ನ ಇಕ್ಯೂ ಬೂಸ್ಟ್ ಸಿಸ್ಟಂಗೆ ಹೊಂದಿಕೆಯಾಗುತ್ತದೆ.

ಈ ಎಂಜಿನ್ 362 ಬಿಹೆಚ್‍ಪಿ ಮತ್ತು 500 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇನ್ನು ಜಿಎಲ್ಎಸ್ 400 ಡಿ 4 ಮ್ಯಾಟಿಕ್ ರೂಪಾಂತರವು 2.9-ಲೀಟರ್ ಇನ್-ಲೈನ್ ಆರು ಸಿಲಿಂಡರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 362 ಬಿಹೆಚ್‍ಪಿ ಪವರ್ ಮತ್ತು 700 ಎನ್ಎಂ ಟಾರ್ಕ್ ಅನ್ನುಉ ಉತ್ಪಾದಿಸುತ್ತದೆ.
MOST READ: ಸ್ಥಗಿತವಾಯ್ತು ಜನಪ್ರಿಯ ಬಿಎಂಡಬ್ಲ್ಯು ಐ8 ಹೈಬ್ರಿಡ್ ಸ್ಪೋರ್ಟ್ಸ್ ಕಾರು

ಹೊಸ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯುಯಲ್ಲಿ ಎಲ್‌ಇಡಿ ಡಿಆರ್‌ಎಲ್, ಎಲ್‌ಇಡಿ ಟೈಲ್ ಲೈಟ್, ಕ್ರೋಮ್ ಅಡ್ಡಲಾಗಿರುವ ಸ್ಲ್ಯಾಟ್‌ಗಳೊಂದಿಗೆ ಫ್ರಂಟ್ ಗ್ರಿಲ್ ಮತ್ತು ಮಧ್ಯದಲ್ಲಿ ಮರ್ಸಿಡಿಸ್ ಬೆಂಝ್ ಲೋಗೊವನ್ನು ಅಳವಡಿಸಲಾಗಿದೆ.

ಇನ್ನು ಈ ಎಸ್‍ಯುವಿಯಲ್ಲಿ ಎಲ್ಇಡಿ ಹೆಡ್‌ಲ್ಯಾಂಪ್, 21 ಇಂಚಿನ ಡ್ಯುಯಲ್-ಟೋನ್ ಅಲಾಯ್ ವ್ಹೀಲ್, ಕ್ರೋಮ್ ಬೆಜೆಲ್‌ಗಳೊಂದಿಗೆ ಡ್ಯುಯಲ್ ಎಕ್ಸಾಸ್ಟ್ ಮಫ್ಲರ್‌ಗಳು ಮತ್ತು ಹಲವಾರು ಸೂಕ್ಷ್ಮ ನವೀಕರಣಗಳನ್ನು ನಡೆಸಲಾಗಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಈ ಹೊಸ ಎಸ್‍ಯುವಿಯ ಇಂಟಿರಿಯರ್ ನಲ್ಲಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂನೊಂದಿಗೆ ಬ್ರ್ಯಾಂಡ್‌ನ ಎಂಬಿಎಕ್ಸ್ ತಂತ್ರಜ್ಞಾನ, ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಪನೋರಮಿಕ್ ಸನ್‌ರೂಫ್, 64-ಬಣ್ಣದ ಆಂಬಿಯೆಂಟ್ ಲೈಟಿಂಗ್ ಮತ್ತು 5 ಹಂತದ ಕ್ಲೈಮೆಂಟ್ ಕಂಟ್ರೋಲ್ ಅನ್ನು ಹೊಂದಿದೆ.

ಈ ಹೊಸ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಮೂರನೇ ತಲೆಮಾರಿನ ಮಾದರಿಯಾಗಿದೆ. ಹೊಸ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಭಾರತೀಯ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಎಕ್ಸ್7 ಎಸ್‍ಯುವಿಗೆ ಪೈಪೋಟಿಯನ್ನು ನೀಡುತ್ತದೆ.


Click it and Unblock the Notifications








