ಬಿಎಸ್-6 ನಿಸ್ಸಾನ್ ಕಿಕ್ಸ್ ಕಾರಿನ ಮಾಹಿತಿ ಬಹಿರಂಗ
ಜನಪ್ರಿಯ ಕಾರು ತಯಾರಕ ಕಂಪನಿಯಾದ ನಿಸ್ಸಾನ್ ತನ್ನ ಬಿಎಸ್-6 ಕಿಕ್ಸ್ ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಬಿಡುಗಡೆಯಾಗಲಿರುವ ಬಹುನಿರೀಕ್ಷಿತ 2020ರ ನಿಸ್ಸಾನ್ ಕಿಕ್ಸ್ ಕಾರಿನ ಮಾಹಿತಿಯು ಅಧಿಕೃತವಾಗಿ ಬಹಿರಂಗವಾಗಿದೆ.

ನಿಸ್ಸಾನ್ ಕಂಪನಿಯು ಹೊಸ ನಿಸ್ಸಾನ್ ಕಿಕ್ಸ್ ಮಾದರಿಗೆ ಎರಡು ವರ್ಷಗಳ ಕಾಲ ಅಥವಾ 50,000 ಕಿಲೋಮೀಟರ್ ವರೆಗೆ ವಾರಂಟಿಯನ್ನು ನೀಡಲಿದೆ. ಈ ವಾರಂಟಿ ಅವಧಿಯನ್ನು ಐದು ವರ್ಷಗಳವರೆಗೆ ಹೆಚ್ಚಿಸುವ ಸಾಧ್ಯತೆಗಳಿದೆ. ಬಿಎಸ್-6 ಕಿಕ್ಸ್ ಮಾದರಿಯಲ್ಲಿ ಸ್ಟ್ಯಾಂಡರ್ಡ್ ಎರಡು ವರ್ಷದ (ಆರ್‌ಎಸ್‌ಎ) ರೋಡ್‌ಸೈಡ್ ಅಸಿಸ್ಟೆನ್ಸ್ ಪ್ಯಾಕೇಜ್ ಅನ್ನು ಸಹ ನೀಡಲಿದೆ. ನಿಸ್ಸಾನ್ ಕಿಕ್ಸ್ ಮಾದರಿಯಲ್ಲಿ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಸ್ಥಗಿತಗೊಳಿಸಲಾಗಿದೆ.

ಹೊಸ ನಿಸ್ಸಾನ್ ಕಿಕ್ಸ್ ಮಾದರಿಯಲ್ಲಿ 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಹಿಂದಿನ ನಿಸ್ಸಾನ್ ಕಿಕ್ಸ್ ಕಾರು ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಪೈಪೋಟಿಯಿಂದಾಗಿ ಭಾರತೀಯ ಮಾರುಕಟ್ಟೆಯಲ್ಲಿ ನಿರೀಕ್ಷಿತ ಯಶ್ವಸಿಗಳಿಸುವಲ್ಲಿ ವಿಫಲವಾಗಿತ್ತು.
MOST READ: ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

2020ರ ನಿಸ್ಸಾನ್ ಕಿಕ್ಸ್ ಕಾರು ಎಕ್ಸ್‌ಎಲ್, ಎಕ್ಸ್‌ವಿ, ಎಕ್ಸ್‌ವಿ ಪ್ರೀಮಿಯಂ ಮತ್ತು ಎಕ್ಸ್‌ವಿ ಪ್ರೀಮಿಯಂ (ಒ)ಎಂಬ ರೂಪಾಂತರಗಳಲ್ಲಿ ಬಿಡುಗಡೆಯಾಗಲಿದೆ. 2020ರ ನಿಸ್ಸಾನ್ ಕಿಕ್ಸ್ ಕಾರಿನಲ್ಲಿ 1.3 ಲೀಟರ್ ನಾಲ್ಕು-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಿದೆ.

ಈ ಎಂಜಿನ್ 154 ಬಿಹೆಚ್‍ಪಿ ಪವರ್ ಮತ್ತು 254 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 8-ಹಂತದ ಸಿವಿಟಿಗೆ ಜೋಡಿಸಲಾಗಿದೆ. ನಿಸ್ಸಾನ್ ಸರಣಿಯಲ್ಲಿ ಅತಿ ಹೆಚ್ಚು ಪವರ್ ಫುಲ್ ಎಂಜಿನ್ ಇದಾಗಿದೆ.
MOST READ: ಲಾಕ್‌ಡೌನ್ ನಡುವೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಮಹೀಂದ್ರಾ ಥಾರ್

ಇನ್ನು ಹಿಂದಿನ 1.5-ಲೀಟರ್ ಹೆಚ್4ಕೆ ಪೆಟ್ರೋಲ್ ಎಂಜಿನ್ ಅನ್ನು ಕೂಡ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ. ಈ ಎಂಜಿನ್ 105 ಬಿಹೆಚ್‍ಪಿ ಪವರ್ ಮತ್ತು 142 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೊಡಿಸಲಾಗಿದೆ.

ಈ ಹೊಸ ನಿಸ್ಸಾನ್ ಕಿಕ್ಸ್ ಕಾರಿನಲ್ಲಿ ಹಲವಾರು ನೂತನ ಫೀಚರ್‍ಗಳನ್ನು ಹೊಂದಿರಲಿದೆ. ನಿಸ್ಸಾನ್ ಕಿಕ್ಸ್ ಟಾಪ್ ಅಂಡ್ ಕಾರುಗಳು ರಿಮೋಟ್ ಎಂಜಿನ್ ಸ್ಟಾರ್ಟ್, ಪುಶ್-ಬಟನ್ ಸ್ಟಾರ್ಟ್ ಮತ್ತು ಐಡಲ್ ಸ್ಟಾರ್ಟ್-ಸ್ಟಾಪ್ ಫೀಚರ್ ಗಳನ್ನು ಹೊಂದಿರಲಿದೆ.
MOST READ: ಹೊಸ ಹ್ಯುಂಡೈ ವೆನ್ಯೂ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ನಿಸ್ಸಾನ್ ಕಿಕ್ಸ್ ಕಾರಿನಲ್ಲಿ ಸ್ಮಾರ್ಟ್ ಕಾರ್ಡ್ ಕೀಲೆಸ್ ಎಂಟ್ರಿ, ಕ್ರೂಸ್ ಕಂಟ್ರೋಲ್, 'ಅರೌಂಡ್ ವ್ಯೂ ಮಾನಿಟರ್' 360 ಡಿಗ್ರಿ ಕ್ಯಾಮೆರಾ, ಹಿಲ್ ಸ್ಟಾರ್ಟ್ ಅಸಿಸ್ಟ್, ಲೆದರ್ ಸೀಟುಗಳು, ಕಾರ್ನರಿಂಗ್ ಫಾಗ್ ಲ್ಯಾಂಪ್‌ಗಳು, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್‌ಗಳು ಮತ್ತು ವೈಪರ್, ಕ್ರೂಸ್ ಕಂಟ್ರೋಲ್ ಮತ್ತು ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಅನ್ನು ಹೊಂದಿದೆ. ಇದರೊಂದಿಗೆ ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, 8.0-ಇಂಚಿನ ಇನ್ಫೋಟೈನ್ಮೆಂಟ್ ಸಿಸ್ಟಂ ಮತ್ತು ಇತರ ಫೀಚರ್ ಗಳನ್ನು ಹೊಂದಿದೆ.

ಹಿಂದಿನ ಮಾದರಿಗೆ ಹೋಲಿಸಿದರೆ ಹೊಸ ನಿಸ್ಸಾನ್ ಕಿಕ್ಸ್ ನಲ್ಲಿ ಹಲವಾರು ನೂತನ ಫೀಚರ್ ಗಳನ್ನು ಹೊಂದಿರಲಿದೆ. ಇದರೊಂದಿಗೆ ನಿಸ್ಸಾನ್ ಕಿಕ್ಸ್ ಕಾರಿನಲ್ಲಿ ಪವರ್ ಫುಲ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಹೊಸ ನಿಸ್ಸಾನ್ ಕಿಕ್ಸ್ ಕಾರು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.


Click it and Unblock the Notifications