ಭಾರತದಲ್ಲಿ ಬಿಡುಗಡೆಯಾಯ್ತು ಬಹುನಿರೀಕ್ಷಿತ ಸ್ಕೋಡಾ ಕರೋಕ್ ಎಸ್‍ಯುವಿ
ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಬಹುನಿರೀಕ್ಷಿತ ಹೊಸ ಕರೋಕ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.24.99 ಲಕ್ಷಗಳಾಗಿದೆ.

ಇತ್ತೀಚೆಗೆ ಈ ಹೊಸ ಸ್ಕೊಡಾ ಕರೋಕ್ ಎಸ್‍ಯುವಿಯ ಖರೀದಿಗಾಗಿ ಬುಕ್ಕಿಂಗ್ ಅನ್ನು ಕೂಡ ಪ್ರಾರಂಭಿಸಿದ್ದರು. ಹೊಸ ಸ್ಕೋಡಾ ಕರೋಕ್ ಎಸ್‍ಯುವಿಗಾಗಿ ರೂ.50,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಹೊಸ ಸ್ಕೋಡಾ ಕರೋಕ್ ಆರಂಭದಲ್ಲಿ (ಸಿಬಿಯು) ಕಂಪ್ಲೀಟ್ ಬಿಲ್ಟ್ ಯುನಿಟ್ ಆಗಿ ಲಭ್ಯವಿರುತ್ತದೆ. ಕರೋನಾ ಭೀತಿಯು ಕಡಿಮೆಯಾಗಿ ಸಹಜ ಸ್ಥಿತಿಗೆ ಬಂದಾಗ ಈ ಸ್ಕೋಡಾ ಕರೋಕ್ ಎಸ್‍ಯುವಿಯನ್ನು ಗ್ರಾಹಕರಿಗೆ ವಿತರಿಸಲಾಗುತ್ತದೆ.

ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯು ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಈ ಸ್ಕೋಡಾ ಕರೋಕ್ ಎಸ್‍ಯುವಿ ಕಂಪನಿಯ ಎಂಕ್ಯೂಬಿ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿದೆ.
MOST READ: ಹೋಂಡಾ ಡಬ್ಲ್ಯುಆರ್-ವಿ ಫೇಸ್‍ಲಿಫ್ಟ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಈ ಎಸ್‍ಯುವಿಯ ಇಂಟಿರಿಯರ್‍ನಲ್ಲಿ ಆ್ಯಪಲ್ ಕಾರ್‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಜೊತೆಯಲ್ಲಿ ದೊಡ್ಡ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂಗಳಿವೆ. ಇದರೊಂದಿಗೆ ಡ್ಯುಯಲ್ ಜೋನ್ ಕ್ಲೈಮೇಟ್ ಕಂಟ್ರೋಲ್, ಸನ್‍ರೂಫ್ ಮತ್ತು ಲೆದರ್ ಅಪ್‍ಹೋಲೆಸ್ಟರಿ ಸೀಟುಗಳನ್ನು ಹೊಂದಿವೆ.

ಹೊಸ ಸ್ಕೋಡಾ ಕರೋಕ್ ಎಸ್‍ಯುವಿ ಹಲವಾರು ಆಧುನಿಕ ಫೀಚರ್ಸ್‍ಗಳನ್ನು ಹೊಂದಿರಲಿದೆ. ಈ ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯಲ್ಲಿ ಎಎಫ್ಎಸ್ (ಅಡಾಪ್ಟಿವ್ ಫ್ರಂಟ್ ಲೈಟಿಂಗ್), ಸಿಗ್ನೇಚರ್ ಬಟರ್ಫ್ಲೈ ಗ್ರಿಲ್, ಸ್ಕ್ವೇರ್ ವೀಲ್ ಆರ್ಚ್, ಆರ್ 17 ಅರೋನಿಯಾ ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ಮತ್ತು ಸಿ-ಆಕಾರದ ಎಲ್ಇಡಿ ಟೈಲ್ ಲ್ಯಾಂಪ್‌ಗಳೊಂದಿಗೆ ಸ್ಲಿಕ್ ಎಲ್ಇಡಿ ಹೆಡ್‌ಲ್ಯಾಂಪ್ ಅನ್ನು ಹೊಂದಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್

ಈ ಎಸ್‍ಯುವಿಯು 1.5 ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 7 ಸ್ಪೀಡ್ ಡಿಎಸ್‍ಜಿ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಈ ಹೊಸ ಕರೋಕ್ ಎಸ್‍ಯುವಿಯನ್ನು ಡೀಸೆಲ್ ಎಂಜಿನ್ ಅಯ್ಕೆಯನ್ನು ಹೊಂದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಡೀಸೆಲ್ ಆವೃತ್ತಿಗಳಿಗೆ ಬೇಡಿಕೆ ಹೆಚ್ಚಾದರೆ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಗೊಳಿಸಬಹುದು.
MOST READ: ಇತಿಹಾಸದ ಪುಟ ಸೇರಿದ ಫೋಕ್ಸ್‌ವ್ಯಾಗನ್ ಎಮಿಯೊ ಕಾರು

ಇನ್ನು ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ 9 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಇಎಸ್‌ಸಿ, ಹಿಲ್-ಸ್ಟಾರ್ಟ್ ಅಸಿಸ್ಟ್ ಫ್ರಂಟ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಂಜಿ ಹೆಕ್ಟರ್, ಜೀಪ್ ಕಂಪಾಸ್ ಮತ್ತು ಹ್ಯುಂಡೈ ಟಕ್ಸನ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.


Click it and Unblock the Notifications








