ಬಿಡುಗಡೆಯಾಯ್ತು ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರು
ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಹೊಸ ಸೂಪರ್ಬ್ ಫೇಸ್‌ಲಿಫ್ಟ್ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ. 2020ರ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನ ಪ್ರಾರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.29.99 ಲಕ್ಷಗಳಾಗಿದೆ.

ಇನ್ನು ಹೊಸ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನ ಟಾಪ್-ಸ್ಪೆಕ್ ರೂಪಾಂತರದ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.32.99 ಲಕ್ಷಗಳಾಗಿದೆ. ಸ್ಕೋಡಾ ಸೂಪರ್ಬ್ ಕಾರಿನ ಎಲ್&ಕೆ ರೂಪಾಂತರಗಳು ಡೀಲರ್ ಬಳಿ ತಲುಪಿರುವುದು ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗವಾಗಿತ್ತು. ಈಗಾಗಲೇ ಈ ಹೊಸ ಸ್ಕೋಡಾ ಸೂಪರ್ಬ್ ಕಾರಿಗಾಗಿ ಬುಕ್ಕಿಂಗ್ ಅನ್ನು ಆರಂಭಿಸಲಾಗಿದೆ. ಹೊಸ ಸ್ಕೋಡಾ ಸೂಪರ್ಬ್ ಕಾರಿಗಾಗಿ ರೂ.50,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಸ್ಕೋಡಾ ನವೀಕರಿಸಿದ ಸೂಪರ್ಬ್ ಫೇಸ್‌ಲಿಫ್ಟ್ ಕಾರನ್ನು ಇತ್ತೀಚೆಗೆ ನಡೆದ 2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾಗಿತ್ತು. ಹೊಸ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರು ಲಾವಾ ಬ್ಲೂ, ಮೂನ್ ವೈಟ್, ಬಿಸಿನೆಸ್ ಗ್ರೇ, ಮ್ಯಾಜಿಕ್ ಬ್ಲ್ಯಾಕ್, ಮ್ಯಾಗ್ನೆಟಿಕ್ ಬ್ರೌನ್, ಸ್ಟೀಲ್ ಗ್ರೇ ಮತ್ತು ರೇಸ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲು ಬಿಡುಗಡೆಗೊಂಡಿದೆ.
MOST READ: ಭಾರತದಲ್ಲಿ ಬಿಡುಗಡೆಯಾಯ್ತು ಬಹುನಿರೀಕ್ಷಿತ ಸ್ಕೋಡಾ ಕರೋಕ್ ಎಸ್‍ಯುವಿ

ಹೊಸ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರನ್ನು ಕಾರಿನಲ್ಲಿ ಫ್ರಂಟ್ ಗ್ರಿಲ್ ಮತ್ತು ಫ್ರಂಟ್ ಬಂಪರ್‍ನೊಂದಿಗೆ ಕ್ರೋಮ್ ಎಕ್ಸಟ್ ಒಳಗೂಂಡಿದೆ. ಈ ಐಷಾರಾಮಿ ಸೆಡಾನ್‍ನಲ್ಲಿ ಮ್ಯಾಟ್ರಿಕ್ಸ್ ತಂತ್ರಜ್ಞಾನ, ಎಲ್ಇಡಿ ಫಾಗ್ ಲ್ಯಾಂಪ್ ಮತ್ತು ಹೊಸ ಅಲಾಯ್ ವೀಲ್ ವಿನ್ಯಾಸದೊಂದಿಗೆ ಫುಲ್-ಎಲ್ಇಡಿ ಹೆಡ್‌ಲ್ಯಾಂಪ್‌ಗಳನ್ನು ಸಹ ಒಳಗೊಂಡಿದೆ.

ಈ ಕಾರಿನ ಹಿಂಭಾಗದ ವಿನ್ಯಾಸದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನ ಇಂಟಿರಿಯರ್ ನಲ್ಲಿ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂ, ವರ್ಚುವಲ್ ಕಾಕ್‌ಪಿಟ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್ ಮತ್ತು ಇನ್ನಿತರ ಫೀಚರ್‍ಗಳನ್ನು ಹೊಂದಿದೆ.
MOST READ: ಹೋಂಡಾ ಡಬ್ಲ್ಯುಆರ್-ವಿ ಫೇಸ್‍ಲಿಫ್ಟ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಇದರೊಂದಿಗೆ ಲೆದರ್ ಸೀಟ್, ಸನ್‌ರೂಫ್, ಸ್ಟೀಯರಿಂಗ್ ಮೌಂಟಡ್ ಕಂಟ್ರೋಲ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಕೂಡ ಅಳವಡಿಸಲಾಗಿದೆ. ಇಂಟಿರಿಯರ್ ನಲ್ಲಿ ಕೆಲವು ಹೊಸ ಫೀಚರ್ಸ್‍ಗಳನ್ನು ಹೊರತುಪಡಿಸಿ ಇನ್ನಿತರ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನಲ್ಲಿ 2.0-ಲೀಟರ್ ಟಿಎಸ್‌ಐ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 190 ಬಿಹೆಚ್‍ಪಿ ಪವರ್ ಮತ್ತು 320 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7 ಸ್ಪೀಡ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್ಲಿಫ್ಟ್

ಹಿಂದಿನ ಸ್ಕೋಡಾ ಸೂಪರ್ಬ್ ಮಾದರಿಯಲ್ಲಿ 1.8-ಲೀಟರ್ ಟಿಎಸ್ಐ ಪೆಟ್ರೋಲ್ ಮತ್ತು 2.0-ಲೀಟರ್ ಟಿಡಿಐ ಡೀಸೆಲ್ ಎಂಜಿನ್ ಅನ್ನು ಹೊಂದಿತ್ತು. ಆದರೆ ಈ ಎರಡು ಎಂಜಿನ್ ಗಳನ್ನು ಕೈಬಿಡಲಾಗಿದೆ.

ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟೊಯೊಟಾ ಕ್ಯಾಮ್ರಿ ಕಾರಿಗೆ ಪೈಪೋಟಿಯನ್ನು ನೀಡುತ್ತದೆ. ಈ ಹೊಸ ಕಾರಿನ ವಿತರಣೆಯನ್ನು ಶೀಘ್ರದಲ್ಲೇ ಪ್ರಾರಂಭಿಸಬಹುದು ಎಂದು ನಿರೀಕ್ಷಿಸುತ್ತೇವೆ.


Click it and Unblock the Notifications








