Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಬಣ್ಣಗಳ ಆಯ್ಕೆಯನ್ನು ಹೊಂದಿದ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್
ಸುಜುಕಿ ಇತ್ತೀಚೆಗೆ ತನ್ನ ತಾಯ್ನಾಡಿನಲ್ಲಿ ನಾಲ್ಕನೇ ತಲೆಮಾರಿನ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರನ್ನು ಬಿಡುಗಡೆಗೊಳಿಸಿತ್ತು. ಸುಜುಕಿ ಕಾರುಗಳ ಸರಣಿಯಲ್ಲಿ ಸ್ವಿಫ್ಟ್ ಜನಪ್ರಿಯ ಮಾದರಿಗಳಲ್ಲಿ ಒಂದಾಗಿದೆ. ಮಾರುತಿ ಬ್ರಾಂಡ್ ಅಡಿಯಲ್ಲಿ ಇದು ಭಾರತದಲ್ಲಿ ಹೆಚ್ಚು ಮಾರಾಟವಾಗುವ ಸುಜುಕಿ ಕಾರುಗಳಲ್ಲಿ ಒಂದಾಗಿದೆ.

ಮೂರನೇ ತಲೆಮಾರಿನ ಸ್ವಿಫ್ಟ್ ಅನ್ನು 2016ರಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಅನಾವರಣಗೊಳಿಸಲಾಯಿತು ಮತ್ತು ಇದನ್ನು 2017 ರಲ್ಲಿ ಭಾರತದಲ್ಲಿ ಬಿಡುಗಡೆ ಮಾಡಲಾಯಿತು. ಮಾರುತಿ ಸ್ವಿಫ್ಟ್ ದೀರ್ಘಕಾಲದವರೆಗೆ ಭಾರತದಲ್ಲಿ ಹೆಚ್ಚು ಮಾರಾಟವಾದ ಕಾರುಗಳಲ್ಲಿ ಒಂದಾಗಿದೆ. ಹೊಸ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರನ್ನು ದೀಪಾವಳಿ ಹಬ್ಬದ ಸಮಯದಲ್ಲಿ ಬಿಡುಗಡೆಗೊಳಿಸುವ ನಿರೀಕ್ಷೆಗಳಿದೆ. ಜನಪ್ರಿಯ ಹ್ಯಾಚ್‌ಬ್ಯಾಕ್ ಸ್ವಿಫ್ ಕಾರನ್ನು ಜಪಾನ್ ದೇಶದಲ್ಲಿ ಮಿಡ್-ಲೈಫ್ ನವೀಕರಣವನ್ನು ಮಾಡಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸ್ವಿಫ್ಟ್ ಕಾರಿಗಿಂತ ಯಾವುದೇ ಪ್ರಮುಖ ಬದಲಾವಣೆಗಳು ಕಂಡು ಬಂದಿಲ್ಲ.

ಜಪಾನ್‌ನಲ್ಲಿ 2020ರ ಸ್ವಿಫ್ಟ್ ಫೇಸ್‌ಲಿಫ್ಟ್ ಫ್ಯೂರ್ ವೈಟ್ ಪರ್ಲ್, ಸೂಪರ್ ಬ್ಲ್ಯಾಕ್ ಪರ್ಲ್, ಸ್ಟಾರ್ ಸಿಲ್ವರ್ ಮೆಟಾಲಿಕ್, ಪ್ರೀಮಿಯಂ ಸಿಲ್ವರ್ ಮೆಟಾಲಿಕ್, ಬರ್ನಿಂಗ್ ರೆಡ್ ಪರ್ಲ್ ಮೆಟಾಲಿಕ್ ಮತ್ತು ಸ್ಪೀಡಿ ಬ್ಲೂ ಮೆಟಾಲಿಕ್ ಸೇರಿದಂತೆ ಆರು ಸಿಂಗಲ್ ಟೋನ್ ಬಣ್ಣಗಳಲ್ಲಿ ಲಭ್ಯವಿದೆ.
MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಇನ್ನು ಫ್ಲೇಮ್ ಆರೆಂಜ್ ಪರ್ಲ್ ಮೆಟಾಲಿಕ್ & ಬ್ಲ್ಯಾಕ್, ರಶ್ ಯೆಲ್ಲೊ ಮೆಟಾಲಿಕ್ ಸಿಲ್ವರ್ ರೂಫ್ ಎಂಬ ಡ್ಯುಯಲ್-ಟೋನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಭಾರತದಲ್ಲಿ ಕೂಡ ಇದೇ ರೀತಿಯ ಬಣ್ಣಗಳ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ.

ಹೊಸ ಸುಜುಕಿ ಸ್ವಿಫ್ಟ್ ಪ್ರಮುಖ ಕ್ರೋಮ್ ಸ್ಟ್ರಿಪ್ ಜೊತೆಗೆ ರೇಡಿಯೇಟರ್ ಗ್ರಿಲ್‌ಗಾಗಿ ಹೊಸ ಹನಿಕ್ಯೂಬ್ ಅನ್ನು ಹೊಂದಿದೆ. ಈ ಹೊಸ ಕಾರಿನ ಮುಂಭಾಗದ ಬಂಪರ್ ನಲ್ಲಿ ಕೂಡ ಕೆಲವು ಬದಲಾವಣೆಗಳನ್ನು ಮಾಡಿದೆ. ಇನ್ನು ಉಳಿದಂತೆ ಕಾರಿನ ಮುಂಭಾಗ ಯಾವುದೇ ಪ್ರಮುಖ ಬದಲಾವಣೆಗಳು ಕಂಡು ಬಂದಿಲ್ಲ.
MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಮಾರುತಿ ಎಸ್-ಪ್ರೆಸ್ಸೊ ಸಿಎನ್‍ಜಿ ಆವೃತ್ತಿ

ಹೊಸ ಸುಜುಕಿ ಸ್ವಿಫ್ಟ್ ಕಾರಿನಲ್ಲಿ ಡ್ಯುಯಲ್-ಟೋನ್ ಅಲಾಯ್-ವ್ಹೀಲ್ ಅನ್ನು ಅಳವಡಿಸಲಿದೆ. ಆದರೆ ಭಾರತದಲ್ಲಿ ಬಿಡುಗಡೆಗೊಳಿಸುವ ಹೊಸ ಸ್ವಿಫ್ಟ್ ಕಾರಿನಲ್ಲಿ ಡ್ಯುಯಲ್-ಟೋನ್ ಅಲಾಯ್-ವ್ಹೀಲ್ ಹೊಂದಿರುತ್ತದೆ ಎಂಬುವುದು ಖಚಿತವಾಗಿಲ್ಲ.

ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರಿನ ಇಂಟಿರಿಯರ್ ನಲ್ಲಿಯು ಕೂಡ ಹೆಚ್ಚಿನ ಬದಲಾವಣೆಗಳನ್ನು ಹೊಂದಿರುವುದಿಲ್ಲ. ಈ ಹ್ಯಾಚ್‌ಬ್ಯಾಕ್ ನಲ್ಲಿ ಹೊಸ ಫ್ರಾಭ್ಯಿಕ್ ಸೀಟ್ ಮತ್ತು ಎಕ್ಸಟ್ ಗಳನ್ನು ಹೊಂದಲಿದೆ. ಹೊಸ ಸ್ವಿಫ್ ಫೇಸ್‌ಲಿಫ್ಟ್ ಕಾರಿನಲ್ಲಿ ಸ್ಮಾರ್ಟ್‌ಪ್ಲೇ 7.0-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಂ ಅನ್ನು ಹೊಂದಿರಲಿದೆ. ಈ ಜನಪ್ರಿಯ ಹ್ಯಾಚ್‌ಬ್ಯಾಕ್‌ನಲ್ಲಿ ಕೆಲವು ಫೀಚರ್ ಗಳನ್ನು ಬದಲಾಯಿಸದೆ ಹಾಗೆ ಮುಂದುವರೆಸಬಹುದು.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಹೊಸ ಸ್ವಿಫ್ಟ್ ಕಾರಿನಲ್ಲಿ ಪ್ರಮುಖ ಬದಲಾವಣೆ ಅಂದರೆ ಎಂಜಿನ್ ಅನ್ನು ಬದಲಾಯಿಸಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೈಬ್ರಿಡ್ ಎಂಜಿನ್ ಹೊಂದಿದೆ. ಇನ್ನು ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಸ್ವಿಫ್ಟ್ ಕಾರಿನಲ್ಲಿ ಆರಂಭದಲ್ಲಿ ನವೀಕರಿಸಿದ ಡಿಜೈರ್ ಕಾಂಪ್ಯಾಕ್ಟ್ ಸೆಡಾನ್‌ನಲ್ಲಿ ಪರಿಚಯಿಸಲಾದ 1.2-ಲೀಟರ್ ಕೆ 12 ಎನ್ ಡ್ಯುಯಲ್ ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸುವ ಸಾಧ್ಯತೆಗಳಿದೆ.

ಹೊಸ ಸ್ವಿಫ್ಟ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಹೊಸ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರು ಭಾರತದಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್, ಟಾಟಾ ಟಿಯಾಗೊ ಮತ್ತು ಫೋರ್ಡ್ ಫಿಗೊ ಕಾರುಗಳಿಗೆ ಪೈಪೋಟಿಯನ್ನು ನೀಡಲಿದೆ.