ಅನಾವರಣವಾಯ್ತು ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರು
2020ರ ಸುಜುಕಿ ಸ್ವಿಫ್ಟ್ ಕಾರನ್ನು ಅಧಿಕೃತವಾಗಿ ಜಪಾನ್‌ನಲ್ಲಿ ಅನಾವರಣಗೊಳಿಸಿದೆ. ಸುಜುಕಿ ಕಾರುಗಳ ಸರಣಿಯಲ್ಲಿ ಸ್ವಿಫ್ಟ್ ಜನಪ್ರಿಯ ಮಾದರಿಗಳಲ್ಲಿ ಒಂದಾಗಿದೆ. ಮಾರುತಿ ಬ್ರಾಂಡ್ ಅಡಿಯಲ್ಲಿ ಇದು ಭಾರತದಲ್ಲಿ ಹೆಚ್ಚು ಮಾರಾಟವಾಗುವ ಸುಜುಕಿ ಕಾರುಗಳಲ್ಲಿ ಒಂದಾಗಿದೆ.

ಮೂರನೇ ತಲೆಮಾರಿನ ಸ್ವಿಫ್ಟ್ ಅನ್ನು 2016ರಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಅನಾವರಣಗೊಳಿಸಲಾಯಿತು ಮತ್ತು ಇದನ್ನು 2017 ರಲ್ಲಿ ಭಾರತದಲ್ಲಿ ಬಿಡುಗಡೆ ಮಾಡಲಾಯಿತು. ಮಾರುತಿ ಸ್ವಿಫ್ಟ್ ದೀರ್ಘಕಾಲದವರೆಗೆ ಭಾರತದಲ್ಲಿ ಹೆಚ್ಚು ಮಾರಾಟವಾದ ಕಾರುಗಳಲ್ಲಿ ಒಂದಾಗಿದೆ. ಹೊಸ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರನ್ನು ದೀಪಾವಳಿ ಹಬ್ಬದ ಸಮಯದಲ್ಲಿ ಬಿಡುಗಡೆಗೊಳಿಸುವ ನಿರೀಕ್ಷೆಗಳಿದೆ. ಜನಪ್ರಿಯ ಹ್ಯಾಚ್‌ಬ್ಯಾಕ್ ಸ್ವಿಫ್ ಕಾರನ್ನು ಜಪಾನ್ ದೇಶದಲ್ಲಿ ಮಿಡ್-ಲೈಫ್ ನವೀಕರಣವನ್ನು ಮಾಡಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸ್ವಿಫ್ಟ್ ಕಾರಿಗಿಂತ ಯಾವುದೇ ಪ್ರಮುಖ ಬದಲಾವಣೆಗಳು ಕಂಡು ಬಂದಿಲ್ಲ.

ಹೊಸ ಸುಜುಕಿ ಸ್ವಿಫ್ಟ್ ಪ್ರಮುಖ ಕ್ರೋಮ್ ಸ್ಟ್ರಿಪ್ ಜೊತೆಗೆ ರೇಡಿಯೇಟರ್ ಗ್ರಿಲ್‌ಗಾಗಿ ಹೊಸ ಹನಿಕ್ಯೂಬ್ ಅನ್ನು ಹೊಂದಿದೆ. ಈ ಹೊಸ ಕಾರಿನ ಮುಂಭಾಗದ ಬಂಪರ್ ನಲ್ಲಿ ಕೂಡ ಕೆಲವು ಬದಲಾವಣೆಗಳನ್ನು ಮಾಡಿದೆ. ಇನ್ನು ಉಳಿದಂತೆ ಕಾರಿನ ಮುಂಭಾಗ ಯಾವುದೇ ಪ್ರಮುಖ ಬದಲಾವಣೆಗಳು ಕಂಡು ಬಂದಿಲ್ಲ.
MOST READ: ಇನ್ನಷ್ಟು ತಡವಾಗಲಿದೆ ಹೊಸ ಮಹೀಂದ್ರಾ ಎಕ್ಸ್‌ಯುವಿ 500 ಆಟೋಮ್ಯಾಟಿಕ್ ಆವೃತ್ತಿಯ ಬಿಡುಗಡೆ

ಹೊಸ ಸುಜುಕಿ ಸ್ವಿಫ್ಟ್ ಕಾರಿನಲ್ಲಿ ಡ್ಯುಯಲ್-ಟೋನ್ ಅಲಾಯ್-ವ್ಹೀಲ್ ಅನ್ನು ಅಳವಡಿಸಲಿದೆ. ಆದರೆ ಭಾರತದಲ್ಲಿ ಬಿಡುಗಡೆಗೊಳಿಸುವ ಹೊಸ ಸ್ವಿಫ್ಟ್ ಕಾರಿನಲ್ಲಿ ಡ್ಯುಯಲ್-ಟೋನ್ ಅಲಾಯ್-ವ್ಹೀಲ್ ಹೊಂದಿರುತ್ತದೆ ಎಂಬುವುದು ಖಚಿತವಾಗಿಲ್ಲ.

ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರಿನ ಇಂಟಿರಿಯರ್ ನಲ್ಲಿಯು ಕೂಡ ಹೆಚ್ಚಿನ ಬದಲಾವಣೆಗಳನ್ನು ಹೊಂದಿರುವುದಿಲ್ಲ. ಈ ಹ್ಯಾಚ್‌ಬ್ಯಾಕ್ ನಲ್ಲಿ ಹೊಸ ಫ್ರಾಭ್ಯಿಕ್ ಸೀಟ್ ಮತ್ತು ಎಕ್ಸಟ್ ಗಳನ್ನು ಹೊಂದಲಿದೆ. ಹೊಸ ಸ್ವಿಫ್ ಫೇಸ್‌ಲಿಫ್ಟ್ ಕಾರಿನಲ್ಲಿ ಸ್ಮಾರ್ಟ್‌ಪ್ಲೇ 7.0-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಂ ಅನ್ನು ಹೊಂದಿರಲಿದೆ. ಈ ಜನಪ್ರಿಯ ಹ್ಯಾಚ್‌ಬ್ಯಾಕ್‌ನಲ್ಲಿ ಕೆಲವು ಫೀಚರ್ ಗಳನ್ನು ಬದಲಾಯಿಸದೆ ಹಾಗೆ ಮುಂದುವರೆಸಬಹುದು.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಹೊಸ ಸ್ವಿಫ್ಟ್ ಕಾರಿನಲ್ಲಿ ಪ್ರಮುಖ ಬದಲಾವಣೆ ಅಂದರೆ ಎಂಜಿನ್ ಅನ್ನು ಬದಲಾಯಿಸಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೈಬ್ರಿಡ್ ಎಂಜಿನ್ ಹೊಂದಿದೆ. ಇನ್ನು ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಸ್ವಿಫ್ಟ್ ಕಾರಿನಲ್ಲಿ ಆರಂಭದಲ್ಲಿ ನವೀಕರಿಸಿದ ಡಿಜೈರ್ ಕಾಂಪ್ಯಾಕ್ಟ್ ಸೆಡಾನ್‌ನಲ್ಲಿ ಪರಿಚಯಿಸಲಾದ 1.2-ಲೀಟರ್ ಕೆ 12 ಎನ್ ಡ್ಯುಯಲ್ ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸುವ ಸಾಧ್ಯತೆಗಳಿದೆ.

ಈ ಬಿಎಸ್-6 ಪೆಟ್ರೋಲ್ ಎಂಜಿನ್ 90 ಬಿಹೆಚ್‍ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 5-ಸ್ಪೀಡ್ ಎಎಂಟಿ ಆಯ್ಕೆಯನ್ನು ನೀಡುವ ಸಾಧ್ಯತೆಗಳಿದೆ.
MOST READ: ಇತಿಹಾಸದ ಪುಟ ಸೇರಿದ ಫೋಕ್ಸ್‌ವ್ಯಾಗನ್ ಎಮಿಯೊ ಕಾರು

ಈ ಹೊಸ ಎಂಜಿನ್ ನಲ್ಲಿ ಸ್ಟಾರ್ಟ್/ಸ್ಟಾಪ್ ಸಿಸ್ಟಂ ಅನ್ನು ಹೊಂದಿರಲಿದೆ. ಈ ಹೊಸ ಎಂಜಿನ್ ಹಿಂದಿನ ಮಾದರಿಯ ಎಂಜಿನ್ ಗಿಂತ ಹೆಚ್ಚು ಪವರ್ ಅನ್ನು ಉತ್ಪಾದಿಸುತ್ತದೆ, ಅಲ್ಲದೇ ಅಧಿಕ ಮೈಲೇಜ್ ಅನ್ನು ಕೂಡ ನೀಡುತ್ತದೆ.

ಸ್ವಿಪ್ಟ್ ಫೇಸ್‌ಲಿಫ್ಟ್ ಕಾರು ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆಯಾಗಲಿದೆ. ಹೊಸ ಸ್ವಿಫ್ಟ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಸ್ವಿಫ್ಟ್ ಫೇಸ್‌ಲಿಫ್ಟ್ ಕಾರು ಭಾರತದಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್, ಟಾಟಾ ಟಿಯಾಗೊ ಮತ್ತು ಫೋರ್ಡ್ ಫಿಗೊ ಕಾರುಗಳಿಗೆ ಪೈಪೋಟಿಯನ್ನು ನೀಡಲಿದೆ.


Click it and Unblock the Notifications








