ಹೊಸ ಹ್ಯಾರಿಯರ್ ಎಸ್‍ಯುವಿಯ ಆಕರ್ಷಕ ಟಿವಿಸಿ ಬಿಡುಗಡೆಗೊಳಿಸಿದ ಟೊಯೊಟಾ
ಟೊಯೊಟಾ ಕಂಪನಿಯು ಹ್ಯಾರಿಯರ್ ಎಸ್‍ಯುವಿಯನ್ನು ಜಪಾನ್‌ನಲ್ಲಿ ಕಳೆದ ಜೂನ್ ತಿಂಗಳಲ್ಲಿ ಬಿಡುಗಡೆಗೊಳಿಸಿತು. ಇದೀಗ ಟೊಯೊಟಾ ಕಂಪನಿಯು ಹೊಸ ಹ್ಯಾರಿಯರ್ ಎಸ್‍ಯುವಿಯ ಆಕರ್ಷಕ ಟಿವಿಸಿಯನ್ನು ಬಿಡುಗಡೆಗೊಳಿಸಿದೆ.

ಜಪಾನ್‌ನಲ್ಲಿ ಟೊಯೊಟಾ ಹ್ಯಾರಿಯರ್ ಎಸ್‍ಯುವಿಯು 27,000 ಬುಕ್ಕಿಂಗ್ ಅನ್ನು ಪಡೆದುಕೊಂಡಿದೆ. ಇನ್ನು ಈ ಎಸ್‍ಯುವಿಯನ್ನು ಏಪ್ರಿಲ್ ತಿಂಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಲಾಗಿತ್ತು. ಅನಾವರಣಗೊಳಿಸಿದ ಈ ಎಸ್‍ಯುವಿಯು ನಾಲ್ಕನೇ ತಲೆಮಾರಿನ ಮಾದರಿಯಾಗಿದೆ. ಈ ಹೊಸ ಟೊಯೊಟಾ ಎಸ್‍ಯುವಿಯನ್ನು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಕೂಪ್ ಶೈಲಿಯ ಈ ಎಸ್‍ಯುವಿಯು ಈ ವರ್ಷದ ಕೊನೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗಲಿದೆ.

1990ರಲ್ಲಿ ಹ್ಯಾರಿಯರ್ ಎಸ್‍ಯುವಿಯನ್ನು ಮೊದಲ ಬಾರಿಗೆ ಬಿಡುಗಡೆಗೊಳಿಸಲಾಗಿತ್ತು. ಟೊಯೊಟಾ ಹ್ಯಾರಿಯರ್ ಮಾಡ್ಯುಲರ್ ಟಿಎನ್‌ಜಿಎ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಹೊಸ ತಲೆಮಾರಿನ ಎಸ್‍ಯುವಿಯು ಸ್ಲೀಕರ್ ವಿನ್ಯಾಸ ಅಂಶಗಳು ಮತ್ತು ಕೂಪ್ ಸಿಲೂಯೆಟ್ ಅನ್ನು ಹೊಂದಿದೆ.
MOST READ: ಪೋರ್ಷೆ ಇಂಡಿಯಾ ನಿರ್ದೇಶಕ ಸ್ಥಾನಕ್ಕೆ ಪವನ್ ಶೆಟ್ಟಿ ರಾಜೀನಾಮೆ

ಹ್ಯಾರಿಯರ್ ಎಸ್‍ಯುವಿಯಲ್ಲಿ ಉದ್ದವಾದ ಬಾನೆಟ್ ಅನ್ನು ಅಳವಡಿಸಲಾಗಿದೆ. ಜೆ-ಆಕಾರದ ಎಲ್ಇಡಿ ಡಿಆರ್ಎಲ್ ಗಳೊಂದಿಗೆ ಎಲ್ಇಡಿ-ಪ್ರೊಜೆಕ್ಟರ್ ಹೆಡ್ ಲ್ಯಾಂಪ್ ಮತ್ತು ಸ್ಲಿಮ್ ಎಲ್ಇಡಿ ಟೈಲ್ ಲೈಟ್ ಗಳನ್ನು ಹೊಂದಿದೆ.

ಹೊಸ ಟೊಯೊಟಾ ಎಸ್‍ಯುವಿಯ ಇಂಟಿರಿಯರ್‍ನಲ್ಲಿ 12.3-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಅನ್ನು ಹೊಂದಿದೆ. ಇದರ ಕೆಳಗೆ ಟಚ್ ಸೆನ್ಸಿಟಿವ್ ಹೆಚ್‌ವಿಎಸಿ ಕಂಟ್ರೋಲ್ ಅನ್ನು ಹೊಂದಿದೆ.
MOST READ: ದಾಖಲೆ ಪ್ರಮಾಣದ ಬುಕ್ಕಿಂಗ್ ಪಡೆದ ಎಂಜಿ ಹೆಕ್ಟರ್ ಎಸ್‍ಯುವಿ

ಇನ್ನು ಈ ಹ್ಯಾರಿಯರ್ ಎಸ್‍ಯುವಿಯ ಇಂಟಿರಿಯರ್‍ನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ದೊಡ್ಡ ಎಂಐಡಿ ಡಿಸ್‍ಪ್ಲೇ ಎರಡು ಬದಿಯಲ್ಲಿ ಟ್ವಿನ್ ಡಯಲ್‌ಗಳನ್ನು ಹೊಂದಿದೆ. ಇದರೊಂದಿಗೆ ಎಲೆಕ್ಟ್ರೋಕ್ರೊಮಿಕ್ ಪನೋರಮಿಕ್ ಸನ್‌ರೂಫ್, ಜೆಬಿಎಲ್ ಆಡಿಯೊ ಸಿಸ್ಟಂ ಮತ್ತು ಡಿಜೆಟಲ್ ರೇರ್ ವ್ಯೂ ಮಿರರ್ ಮತ್ತು ಇತರ ಫೀಚರ್‍ಗಳನ್ನು ಹೊಂದಿದೆ.

ಟೊಯೊಟಾ ಹ್ಯಾರಿಯರ್ ಪೆಟ್ರೋಲ್ ಮತ್ತು ಹೈಬ್ರಿಡ್ ಎಂಜಿನ್ ಗಳ ಆಯ್ಕೆಯಲ್ಲಿ ಲಭ್ಯವಿದೆ. ಇದರಲ್ಲಿ 2.0-ಲೀಟರ್ ಡೈರೆಕ್ಟ್-ಇಂಜೆಕ್ಷನ್, ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 170 ಬಿಹೆಚ್ಪಿ ಪವರ್ ಮತ್ತು 207 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಡೈರೆಕ್ಟ್-ಶಿಫ್ಟ್ ಸಿವಿಟಿಯನ್ನು ಜೋಡಿಸಲಾಗಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ
ಇನ್ನು ಹೈಬ್ರಿಡ್ ಆವೃತ್ತಿಯಲ್ಲಿ 2.5-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 175 ಬಿಹೆಚ್ಪಿ ಪವರ್ ಮತ್ತು 221 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಮುಂಭಾಗದ ಟಯರ್‍ನೊಂದಿಗೆ 88ಕಿ.ವ್ಯಾಟ್ ಮೋಟರ್‍ಗೆ ಜೋಡಿಸಲಾಗಿದೆ. ಎರಡು ಆವೃತ್ತಿಗಳನ್ನು ಆಲ್-ವೀಲ್ ಡ್ರೈವ್ ಸಿಸ್ಟಂ ಅನ್ನು ಹೊಂದಿದೆ.

ಭಾರತದಲ್ಲಿ ಎಸ್‍ಯುವಿಗಳಿಗೆ ಉತ್ತಮ ಬೇಡಿಕೆ ಇದ್ದರೂ ಸದ್ಯಕ್ಕೆ ಟೊಯೊಟಾ ಹ್ಯಾರಿಯರ್ ಎಸ್‍ಯುವಿಯು ಭಾರತದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿಲ್ಲ. ಆದರೆ ಮುಂದಿನ ವರ್ಷಗಳಲ್ಲಿ ಈ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.


Click it and Unblock the Notifications