2021ರ ಕೊನಾ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸಿದ ಹ್ಯುಂಡೈ

ಹ್ಯುಂಡೈ ಕಂಪನಿಯು ತನ್ನ ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯಾದ ಕೊನಾ 2021ರ ಆವೃತ್ತಿಯನ್ನು ಅನಾವರಣಗೊಳಿಸಿದ್ದು, ಹೊಸ ಕಾರು ಹೊರಭಾಗದ ವಿನ್ಯಾಸದಲ್ಲಿ ಪ್ರಮುಖ ಬದಲಾವಣೆಗಳನ್ನು ಪಡೆದುಕೊಂಡಿದೆ.

2021ರ ಕೊನಾ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸಿದ ಹ್ಯುಂಡೈ

ಕೊನಾ ಎಲೆಕ್ಟ್ರಿಕ್ ಕಾರು ಮಾದರಿಯು ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಇದೀಗ 2021ರ ಆವೃತ್ತಿಯಲ್ಲಿ ಪ್ರಮುಖ ಬದಲಾವಣೆಗಳನ್ನು ಪರಿಚಯಿಸಲಾಗಿದೆ. ಹೊಸ ಕಾರಿನಲ್ಲಿ ಹೊಸ ವಿನ್ಯಾದ ಎಲ್ಇಡಿ ಡಿಆರ್‌ಎಲ್‌ಗಳು, ಟು ವರ್ಟಿಕಲ್ ಸ್ಲಾಟ್ ಹೊಂದಿರುವ ಬಂಪರ್, ಸಿಲ್ವರ್ ಆಕ್ಸೆಂಟ್ ಸೇರಿದಂತೆ ಪ್ರಮುಖ ಬದಲಾವಣೆಗಳೊಂದಿಗೆ ಎಸ್‌ಯುವಿ ಪ್ರಿಯರ ಆಕರ್ಷಣೆಗೆ ಕಾರಣವಾಗಿದೆ.

2021ರ ಕೊನಾ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸಿದ ಹ್ಯುಂಡೈ

ಜೊತೆಗೆ ಹೊಸ ಕಾರಿನ ಹಿಂಭಾಗದ ವಿನ್ಯಾಸದಲ್ಲೂ ಪ್ರಮುಖ ಬದಲಾವಣೆಗಳಾಗಿದ್ದು, ಸ್ಪಿಟ್ ಟೈಲ್ ಲ್ಯಾಂಪ್ ಪ್ರತ್ಯೇಕಗೊಂಡಿರುವ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟರ್ ಸಿಗ್ನಲ್, ಆಕ್ಸಿಲರಿ ಟೈಲ್‌ಲ್ಯಾಂಪ್ ನೀಡಲಾಗಿದೆ.

2021ರ ಕೊನಾ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸಿದ ಹ್ಯುಂಡೈ

ಇದರೊಂದಿಗೆ ಹೊಸ ಕಾರಿನಲ್ಲಿ ಹೊಸ ವಿನ್ಯಾಸದ ಅಲಾಯ್ ವೀಲ್ಹ್, ಆಕರ್ಷಕ ವಿನ್ಯಾಸದ ರೂಫ್ ರೈಲ್ಸ್ ನೀಡಲಾಗಿದ್ದು, ಹೊಸ ಕಾರಿನ ಒಳಭಾಗದಲ್ಲಿ ಫುಲ್-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ ಸರ್ಪೊಟ್ ಮಾಡುವ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಜೋಡಿಸಲಾಗಿದೆ.

2021ರ ಕೊನಾ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸಿದ ಹ್ಯುಂಡೈ

ಹೊಸ ಕಾರಿನಲ್ಲಿ ಮತ್ತೊಂದು ಪ್ರಮುಖ ಬದಲಾವಣೆ ಎಂದರೆ ಪ್ರಮುಖ ಸೇಫ್ಟಿ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗಿದ್ದು, ಹೊಸ ಕಾರಿನಲ್ಲಿ 6 ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ ಸೇರಿದಂತೆ ಸುಧಾರಿತ ತಂತ್ರಜ್ಞಾನ ಪ್ರೇರಿತ ಫೀಚರ್ಸ್‌ಗಳಾದ ರಿಯರ್ ಟ್ರಾಫಿಕ್ ಕೂಲಿಷನ್ ಅವಾಯ್ಡೆನ್ಸ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಕೂಲಿಷನ್ ಅವಾಯ್ಡೆನ್ಸ್ ಅಸಿಸ್ಟ್‌ನಂತಹ ಸೌಲಭ್ಯ ಹೊಂದಿದೆ.

2021ರ ಕೊನಾ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸಿದ ಹ್ಯುಂಡೈ

ಇನ್ನು ಹೊಸ ಕೊನಾ ಕಾರು ಪ್ರಮುಖ ಫೀಚರ್ಸ್‌ಗಳ ಬದಲಾಣೆ ಹೊರತುಪಡಿಸಿ ಈ ಹಿಂದಿನಂತೆಯೇ ಎರಡು ಪ್ರಮುಖ ಬ್ಯಾಟರಿ ಆಯ್ಕೆಯನ್ನು ಹೊಂದಿದ್ದು, ಎಲೆಕ್ಟ್ರಿಕ್ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ 64kWh ಮತ್ತು 39.2kWh ಬ್ಯಾಟರಿ ಪ್ಯಾಕ್ ಜೋಡಿಸಲಾಗಿದೆ.

2021ರ ಕೊನಾ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸಿದ ಹ್ಯುಂಡೈ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕಂಪನಿಯು 64kWh ಮತ್ತು 39.2kWh ಬ್ಯಾಟರಿ ಪ್ಯಾಕ್ ಮಾದರಿಯ ಕೊನಾ ಇವಿ ಮಾರಾಟ ಮಾಡುತ್ತಿದ್ದು, ಭಾರತದಲ್ಲಿ ಮಾತ್ರ ಸದ್ಯಕ್ಕೆ 39.2kWh ಬ್ಯಾಟರಿ ಪ್ಯಾಕ್ ಹೊಂದಿರುವ ಮಾದರಿಯನ್ನು ಮಾತ್ರ ಮಾರಾಟ ಮಾಡುತ್ತಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

2021ರ ಕೊನಾ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸಿದ ಹ್ಯುಂಡೈ

ಹೊಸ ಆವೃತ್ತಿಯು ಮುಂದಿನ ಕೆಲವೇ ದಿನಗಳಲ್ಲಿ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ಬಿಡುಗಡೆಯಾಗಲಿದ್ದು, ಹೊಸ ಆವೃತ್ತಿಯು ಸದ್ಯಕ್ಕೆ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿಲ್ಲ. ಕಾರಣ, ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಪ್ರಕ್ರಿಯೆ ಪ್ರಾಥಮಿಕ ಹಂತದಲ್ಲಿದ್ದು, ಮುಂಬರುವ ದಿನಗಳಲ್ಲಿ ಹೊಸ ಮಾದರಿಗಳು ರಸ್ತೆಗಿಳಿಯಲಿವೆ.

2021ರ ಕೊನಾ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸಿದ ಹ್ಯುಂಡೈ

ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರು ಪರ್ಫಾಮೆನ್ಸ್ ಕಾರುಗಳಂತೆಯೇ ಉತ್ತಮ ಮುನ್ನಡೆ ಕಾಯ್ದುಕೊಂಡಿದ್ದು, 100kW ಫ್ರಂಟ್ ವೀಲ್ಹ್ ಮೋಟಾರ್ ಪವರ್ ಮೂಲಕ 131-ಬಿಎಚ್‌ಪಿ ಮತ್ತು 395-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 9.7-ಸೇಕೆಂಡುಗಳಲ್ಲಿ ಸೊನ್ನೆಯಿಂದ 100ಕಿ.ಮಿ ವೇಗ ತಲುಪಬಲ್ಲದು.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

2021ರ ಕೊನಾ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸಿದ ಹ್ಯುಂಡೈ

ಜೊತೆಗೆ ಸಾಮಾನ್ಯ ಕಾರುಗಳಿಂತ ಶೇ.80ರಷ್ಟು ಕಡಿಮೆ ರನ್ನಿಂಗ್ ಕಾಸ್ಟ್ ಹೊಂದಿರುವ ಕೊನಾ ಕಾರು ಪ್ರತಿ ಕಿ.ಮೀ ಗೆ ರೂ.1 ಕ್ಕಿಂತಲೂ ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, 39.2kWh ಬ್ಯಾಟರಿ ಸಾಮರ್ಥ್ಯದೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 452 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲದು. ಕೊನಾ ಕಾರು 155ಕಿ.ಮಿ ಟಾಪ್ ಸ್ಪೀಡ್ ಸೌಲಭ್ಯವನ್ನು ಹೊಂದಿದ್ದು, ಪೂರ್ಣ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜ್‌ ಆಗಲು ಕನಿಷ್ಠ 8 ಗಂಟೆ ತೆಗೆದುಕೊಳ್ಳಲಿದೆ. ಹೀಗಾಗಿ ಕೋನಾ ಕಾರಿನಲ್ಲಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವು ಆಕರ್ಷಕವಾಗಿದೆ.

Article Published On: Thursday, November 12, 2020, 11:36 [IST]
English summary
2021 Hyundai Kona Electric Unveiled Globally. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+