Just In
Don't Miss!
- News
Video: ದೆಹಲಿಯಲ್ಲಿ ರೈತನ ಸಾವಿನ ಭಯಾನಕ ದೃಶ್ಯ!
- Sports
ಐಎಸ್ಎಲ್: ನಾರ್ತ್ಈಸ್ಟ್ vs ಮೋಹನ್ ಬಾಗನ್, Live ಸ್ಕೋರ್
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Movies
ರಾಜಮೌಳಿಯ RRR ಚಿತ್ರಕ್ಕೆ ಎದುರಾಗಿ ಅಜಯ್ ದೇವಗನ್ ಸಿನಿಮಾ?
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Education
Republic Day Speech And Essay Ideas: ಗಣರಾಜ್ಯೋತ್ಸವ ಪ್ರಯುಕ್ತ ಭಾಷಣ ಮತ್ತು ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಆಕರ್ಷಕ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ 2021ರ ಹ್ಯುಂಡೈ ಟ್ಯೂಸಾನ್ ಹೈಬ್ರಿಡ್ ಆವೃತ್ತಿ
ಹ್ಯುಂಡೈ ಕಂಪನಿಯು ತನ್ನ ಬಹುನಿರೀಕ್ಷಿತ 2021ರ ಟ್ಯೂಸಾನ್ ಹೈಬ್ರಿಡ್ ಆವೃತ್ತಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿತ್ತು. ಈ ಹೊಸ ಹ್ಯುಂಡೈ ಟ್ಯೂಸಾನ್ ಆವೃತ್ತಿಯ ವಿನ್ಯಾಸದಲ್ಲಿ ಹಲವಾರು ಅಪ್ದೇಟ್ ಗಳನ್ನು ಮಾಡಲಾಗಿದೆ.

ಹ್ಯುಂಡೈ ಕಂಪನಿಯು ಈ ಹೊಸ ಹ್ಯುಂಡೈ ಟ್ಯೂಸಾನ್ ಹೈಬ್ರಿಡ್ ಆವೃತ್ತಿಯ ಬಗ್ಗೆ ವಾಕ್ ರೌಂಡ್ ವೀಡಿಯೋವನ್ನು ಬಿಡುಗಡೆಗೊಳಿಸಿದ್ದಾರೆ. ಈ ವೀಡಿಯೋದಲ್ಲಿ 2021ರ ಟ್ಯೂಸಾನ್ ಎಸ್‍ಯುವಿಯ ಮುಂಭಾಗ ಆಕರ್ಷಕ ಲುಕ್ ಅನ್ನು ಹೊಂದಿದ, ಈ ಹೊಸ ಎಸ್‍ಯುವಿಯು ಸ್ಪೋರ್ಟಿ ಲುಕ್ ನಲ್ಲಿ ಕಾಣುವಂತೆ ಅಗ್ರೇಸಿವ್ ವಿನ್ಯಾಸವನ್ನು ಹೊಂದಿದೆ. ಈ ಹೂಸ ಟ್ಯೂಸಾನ ಹೆಡ್‌ಲ್ಯಾಂಪ್ ಯುನಿಟ್ ಆಕರ್ಷಕವಾಗಿದೆ. ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯಲ್ಲಿ ಕ್ರೋಮ್ ಸ್ಟ್ರಿಪ್ ಹೊಂದಿದೆ. ಈ ಎಸ್‍ಯುವಿಯ ಕೊನೆಯಲ್ಲಿ ವಿಶಿಷ್ಟವಾದ ಸಿ-ಪಿಲ್ಲರ್ ಆಕಾರವನ್ನು ರೂಪಿಸಿದೆ. ಈ ಹೊಸ ಎಸ್‍ಯುವಿಯ ಹಿಂದಿನ ಪ್ರೊಫೈಲ್‌ನಲ್ಲಿ ಉದ್ದವಾದ ಬೆಲ್ಟ್‌ಲೈನ್ಗಳಿವೆ.

ಈ ಎಸ್‍ಯುವಿಯಲ್ಲಿ 19 ಇಂಚಿನ ವ್ಹೀಲ್ಸ್ ಅನ್ನು ಅಳವಡಿಸಿದೆ. ಈ ವ್ಹೀಲ್ ಗಳು ವಿಭಿನ್ನವಾದ ವಿನ್ಯಾಸದಿಂದ ಕೂಡಿದೆ. ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿ ಶಾರ್ಕ್ ಫಿನ್ ಆಂಟೆನಾ, ಬಾಡಿ ಕಲರ್‌ನಲ್ಲಿ ರೂಫ್-ರೈಲ್ ಮತ್ತು ಫ್ಲೋಟಿಂಗ್ ರೂಫ್‌ಲೈನ್ ಹೊಂದಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಹಿಂಭಾಗದಲ್ಲಿ ಅಗಲವಾಗಿ ಉದ್ದಕೂ ರೆಡ್ ಎಲ್ಇಡಿ ಲೈಟ್ ಅನ್ನು ಅಳವಡಿಸಿದೆ. ಇದು ಟೈಲ್-ಲ್ಯಾಂಪ್‌ಗಳನ್ನು ಕನೆಕ್ಟ್ ಆಗಿದೆ. ಇನ್ನು ಟ್ಯೂಸನ್ ಎಸ್‍ಯುವಿಯಲಿರುವ ಟೈಲ್-ಲೈಟ್ ಕ್ರೆಟಾದ ಟೈಲ್-ಲ್ಯಾಂಪ್‌ನ ವಿಕಾಸಗೊಂಡ ಆವೃತ್ತಿಯಂತೆ ಕಾಣುತ್ತದೆ.

ಈ ಎಸ್‍ಯುವಿ ಕೆಳಗಿನ ಬಂಪರ್ ಸಿಲ್ವರ್ ಸ್ಕಿಡ್ ಪ್ಲೇಟ್, ಸ್ಟಾಪ್ ಲ್ಯಾಂಪ್‌ಗಳು ಮತ್ತು ಏರ್ ವೆಂಟ್ಸ್ ಗಳನ್ನು ಹೊಂದಿರುತ್ತದೆ. ಇದು ಇಂಟಿಗ್ರೇಟೆಡ್ ಬ್ರೇಕ್ ಲೈಟ್ ಗಳೊಂದಿಗೆ ರೂಫ್ ಸ್ಪಾಯ್ಲರ್ ಅನ್ನು ಹೊಂದಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಮತ್ತು ದೊಡ್ಡದಾದ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ.

ಇದರೊಂದಿಗೆ ಎಸಿ ಮತ್ತು ಇತರ ಕಂಟ್ರೋಲ್ ಗಳಿಗಾಗಿ ಟಚ್-ಪ್ಯಾನೆಲ್‌ಗಳು, ಅನನ್ಯವಾಗಿ ವಿನ್ಯಾಸಗೊಳಿಸಲಾದ ಮಲ್ಟಿ-ಫಂಕ್ಷನಲ್ ಸ್ಟೀಯರಿಂಗ್ ವ್ಹೀಲ್, ಗೇರ್‌ಬಾಕ್ಸ್, ಪಾರ್ಕಿಂಗ್ ಬ್ರೇಕ್ ಮತ್ತು ಇತರ ಫೀಚರ್ ಗಳನ್ನು ಒಳಗೊಂಡಿದೆ.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಇದರೊಂದಿಗೆ ವೈರ್‌ಲೆಸ್ ಚಾರ್ಜಿಂಗ್ ಮತ್ತು ನೂತನ ಕನೆಕ್ಟಿವಿಟಿ ಫೀಚರ್ ಗಳನ್ನು ಹೊಂದಿರಲಿದೆ. ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯಲ್ಲಿ ಎರಡನೇ ಸಾಲಿನ ಸೀಟುಗಳ ಫ್ಲಾಟ್ ಫೋಲ್ಡಿಂಗ್ ಸಕ್ರಿಯಗೊಳಿಸಿದಾಗ 1,095 ಲೀಟರ್ ಸ್ಪೇಸ್ ಲಭ್ಯವಿರುತ್ತದೆ.

2021ರ ಟ್ಯೂಸಾನ್ ಎಸ್‍ಯುವಿಯಲ್ಲಿ 2.5-ಲೀಟರ್ ನಾಲ್ಕು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 187 ಬಿಹೆಚ್‍ಪಿ ಪವರ್ ಮತ್ತು 417 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 8-ಸ್ಪೀಡ್ ಎಂಜಿನ್ ನೊಂದಿಗೆ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.
ಇದರೊಂದಿಗೆ ಈ ಹೊಸ ಎಸ್‍ಯುವಿಯಲ್ಲಿ 1.6-ಲೀಟರ್ ಟರ್ಬೊ ಹೈಬ್ರಿಡ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 227 ಬಿಹೆಚ್‍ಪಿ ಪವರ್ ಮತ್ತು 350 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ 1.6-ಲೀಟರ್ ನಾಲ್ಕು ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ.

ಇನ್ನು ಟ್ಯೂಸಾನ್ ಪೇಸ್ ಲಿಫ್ಟ್ ಅನ್ನು ಕೆಲವೇ ತಿಂಗಳುಗಳ ಹಿಂದೆ ಬಿಡುಗಡೆಗೊಳಿಸಿರುವುದರಿಂದ ಈ ಹೊಸ ತಲೆಮಾರಿನ ಟ್ಯೂಸಾನ್ ಹಬ್ರಿಡ್ ಎಸ್‍ಯುವಿಯನ್ನು 2022ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.