ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಜೀಪ್ ಕಂಪನಿಯು ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರ ಭಾಗವಾಗಿ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಅನ್ನು ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಜೀಪ್ ಕಂಪನಿಯು ತನ್ನ 2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಈ ಹೊಸ ಎಸ್‍ಯುವಿಯು ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಆಟೋಕಾರ್ ಬಹಿರಂಗ ಪಡಿಸಿದೆ. 2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‌ಯುವಿಯಲ್ಲಿ ಹೊಸ ಫೀಚರ್ ಗಳನ್ನು ಅಳವಡಿಸಲಾಗಿದೆ. ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುದಾದರೆ ಕೆಲವು ಸೂಕ್ಷ್ಮ ನವೀಕರಣಗಳನ್ನು ಪಡೆದುಕೊಂಡಿದೆ. ಈ ಹೊಸ ಎಸ್‍ಯುವಿಯಲ್ಲಿ ಏಳು-ಸ್ಲ್ಯಾಟ್ ಗ್ರಿಲ್ ಅನ್ನು ಉಳಿಸಿಕೊಂಡು ಮುಂಭಾಗದಲ್ಲಿ ಹೊಸ ಹನಿಕಾಂಬ್ ಮೆಶ್ ಅನ್ನು ಒಳಗೊಂಡಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಅಲ್ಲದೇ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಹೊಸ ಎಸ್‍ಯುವಿಯ ಇತರ ನವೀಕರಣಗಳಲ್ಲಿ ಇಂಟಿಗ್ರೇಟೆಡ್ ಎಲ್ಇಡಿ ಡಿಆರ್‌ಎಲ್‌ ಗಳೊಂದಿಗೆ ಹೆಡ್ ಲ್ಯಾಂಪ್, ಫಾಗ್ ಲ್ಯಾಂಪ್ ಗಳಿಗಾಗಿ ನವೀಕರಿಸಿದ ಫ್ರಂಟ್ ಬಂಪರ್, ಹೊಸ ವಿನ್ಯಾಸದ ಅಲಾಯ್ ವ್ಹೀಲ್ ಮತ್ತು ಹಿಂಭಾಗದಲ್ಲಿ ಟೇಲ್ ಲೈಟ್ ಅನ್ನು ಅಳವಡಿಸಲಾಗಿದೆ.

MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲಿ ಸೂಕ್ಷ್ಮ ನವೀಕರಣಗಳು ಮತ್ತು ಬದಲಾವಣೆಗಳನ್ನು ಒಳಗೊಂಡಿದೆ. 2021 ಜೀಪ್ ಕಂಪಾಸ್‌ನ ಕ್ಯಾಬಿನ್ ಮೊದಲಿಗಿಂತ ಹೆಚ್ಚು ಪ್ರೀಮಿಯಂ ಆಗಿದೆ.ಎಸ್‍ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಫೀಚರ್ ಗಳನ್ನು ಹೊಂದಿವೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಸ್ಪೈ ಚಿತ್ರದಲ್ಲಿ ಈ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದ ಫೀಚರುಗಳ ಮಾಹಿತಿ ಬಹಿರಂಗವಾಗಿದೆ. ಈ ಹೊಸ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 8.4-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಯುಕನೆಕ್ಟ್ 5 ತಂತ್ರಜ್ಞಾನವನ್ನು ಅಳವಡಿಸಿದೆ.

MOST READ: ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ನಿಸ್ಸಾನ್ ಮ್ಯಾಗ್ನೆಟ್ ಎಸ್‍ಯುವಿ

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

2021ರ ಜೀಪ್ ಕಂಪಾಸ್‌ನಲ್ಲಿ ಹೊಸ ಎಂಜಿನ್ ಆಯ್ಕೆಯನ್ನು ನೀಡಲಾಗಿದೆ. ಹೊಸದಾಗಿ 1.3-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಇನ್ನು ಹಳೆಯ 1.4-ಲೀಟರ್ ಅನ್ನು ಬದಲಾಯಿಸಲಾಗುತ್ತದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಈ ಎಸ್‍ಯುವಿಯಲ್ಲಿ ಹೊಸ 1.3-ಲೀಟರ್ ಎಂಜಿನ್ ಎರಡು ಸ್ಟೇಟ್-ಟ್ಯೂನ್‌ಗಳನ್ನು ಹೊಂದಿದೆ. ಇದು 128 ಬಿಹೆಚ್‍ಪಿ ಪವರ್ ಮತ್ತು 148 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಲೋವರ್ ಸ್ಟೇಟ್-ಟ್ಯೂನ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಜೊಡಿಸಲಾಗಿದೆ. ಇನ್ನೊಂದು ಆಯ್ಕೆಯಲ್ಲಿ 7-ಸ್ಪೀಡ್ ಡ್ಯುಯಲ್-ಕ್ಲಚ್ ಗೇರ್ ಬಾಕ್ಸ್ ಆಯ್ಕೆಯನ್ನು ಸಹ ಹೊಂದಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 1.6-ಲೀಟರ್ ಮಲ್ಟಿಜೆಟ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಭಾರತದಲ್ಲಿ 2.0-ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೆವೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಫೋಕ್ಸ್‌ವ್ಯಾಗನ್ ಟಿ-ರೋಕ್, ಸ್ಕೋಡಾ ಕರೋಕ್, ನಿಸ್ಸಾನ್ ಕಿಕ್ಸ್, ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Article Published On: Wednesday, July 22, 2020, 13:50 [IST]
English summary
Jeep Compass Facelift Interior Spied For The First Time. Read In Kannada.
Read more on ಜೀಪ್ jeep
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+