ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್

ಇದೀಗ ಜೀಪ್ ಕಂಪನಿಯು ಈ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರ ಭಾಗವಾಗಿ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಅನ್ನು ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ.

ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್

ಜೀಪ್ ಕಂಪನಿಯು ತನ್ನ 2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಈ ಹೊಸ ಎಸ್‍ಯುವಿಯು ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಕಾರ್ ದೇಖು ಬಹಿರಂಗ ಪಡಿಸಿದೆ. 2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‌ಯುವಿಯಲ್ಲಿ ಹೊಸ ಫೀಚರ್ ಗಳನ್ನು ಅಳವಡಿಸಲಾಗಿದೆ. ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುದಾದರೆ ಕೆಲವು ಸೂಕ್ಷ್ಮ ನವೀಕರಣಗಳನ್ನು ಪಡೆದುಕೊಂಡಿದೆ. ಈ ಹೊಸ ಎಸ್‍ಯುವಿಯಲ್ಲಿ ಏಳು-ಸ್ಲ್ಯಾಟ್ ಗ್ರಿಲ್ ಅನ್ನು ಉಳಿಸಿಕೊಂಡು ಮುಂಭಾಗದಲ್ಲಿ ಹೊಸ ಹನಿಕಾಂಬ್ ಮೆಶ್ ಅನ್ನು ಒಳಗೊಂಡಿದೆ.

ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್

ಅಲ್ಲದೇ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಹೊಸ ಎಸ್‍ಯುವಿಯ ಇತರ ನವೀಕರಣಗಳಲ್ಲಿ ಇಂಟಿಗ್ರೇಟೆಡ್ ಎಲ್ಇಡಿ ಡಿಆರ್‌ಎಲ್‌ ಗಳೊಂದಿಗೆ ಹೆಡ್ ಲ್ಯಾಂಪ್, ಫಾಗ್ ಲ್ಯಾಂಪ್ ಗಳಿಗಾಗಿ ನವೀಕರಿಸಿದ ಫ್ರಂಟ್ ಬಂಪರ್, ಹೊಸ ವಿನ್ಯಾಸದ ಅಲಾಯ್ ವ್ಹೀಲ್ ಮತ್ತು ಹಿಂಭಾಗದಲ್ಲಿ ಟೇಲ್ ಲೈಟ್ ಅನ್ನು ಅಳವಡಿಸಲಾಗಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್

ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲಿ ಸೂಕ್ಷ್ಮ ನವೀಕರಣಗಳು ಮತ್ತು ಬದಲಾವಣೆಗಳನ್ನು ಒಳಗೊಂಡಿದೆ. 2021 ಜೀಪ್ ಕಂಪಾಸ್‌ನ ಕ್ಯಾಬಿನ್ ಮೊದಲಿಗಿಂತ ಹೆಚ್ಚು ಪ್ರೀಮಿಯಂ ಆಗಿದೆ.ಎಸ್‍ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಫೀಚರ್ ಗಳನ್ನು ಹೊಂದಿವೆ.

ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್

ಈ ಹೊಸ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 8.4-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಯುಕನೆಕ್ಟ್ 5 ತಂತ್ರಜ್ಞಾನವನ್ನು ಅಳವಡಿಸಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್

2021ರ ಜೀಪ್ ಕಂಪಾಸ್‌ನಲ್ಲಿ ಹೊಸ ಎಂಜಿನ್ ಆಯ್ಕೆಯನ್ನು ನೀಡಲಾಗಿದೆ. ಹೊಸದಾಗಿ 1.3-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಇನ್ನು ಹಳೆಯ 1.4-ಲೀಟರ್ ಅನ್ನು ಬದಲಾಯಿಸಲಾಗುತ್ತದೆ.

ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್

ಈ ಎಸ್‍ಯುವಿಯಲ್ಲಿ ಹೊಸ 1.3-ಲೀಟರ್ ಎಂಜಿನ್ ಎರಡು ಸ್ಟೇಟ್-ಟ್ಯೂನ್‌ಗಳನ್ನು ಹೊಂದಿದೆ. ಇದು 128 ಬಿಹೆಚ್‍ಪಿ ಪವರ್ ಮತ್ತು 148 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಲೋವರ್ ಸ್ಟೇಟ್-ಟ್ಯೂನ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಜೊಡಿಸಲಾಗಿದೆ. ಇನ್ನೊಂದು ಆಯ್ಕೆಯಲ್ಲಿ 7-ಸ್ಪೀಡ್ ಡ್ಯುಯಲ್-ಕ್ಲಚ್ ಗೇರ್ ಬಾಕ್ಸ್ ಆಯ್ಕೆಯನ್ನು ಸಹ ನೀಡಿದೆ.

MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್

ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ 2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 1.6-ಲೀಟರ್ ಮಲ್ಟಿಜೆಟ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಭಾರತದಲ್ಲಿ 2.0-ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಬಹುದು ಎಂದು ನಿರೀಕ್ಷಿಸುತ್ತೆವೆ.

ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್

ಈ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಫೋಕ್ಸ್‌ವ್ಯಾಗನ್ ಟಿ-ರೋಕ್, ಸ್ಕೋಡಾ ಕರೋಕ್, ನಿಸ್ಸಾನ್ ಕಿಕ್ಸ್, ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Article Published On: Saturday, June 27, 2020, 12:27 [IST]
English summary
Jeep Compass Facelift Spied In India For The First Time. Read In kannada.
Read more on ಜೀಪ್ jeep
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+