ನ್ಯೂ ಜನರೇಷನ್ ಕಾರ್ನಿವಾಲ್ ಎಂಪಿವಿ ಕಾರಿನ ಇಂಟಿರಿಯರ್ ಬಹಿರಂಗ

ದಕ್ಷಿಣ ಕೊರಿಯಾ ಕಾರು ಉತ್ಪಾದನಾ ಕಂಪನಿ ಕಿಯಾ ಮೋಟಾರ್ಸ್ ತನ್ನ ಜನಪ್ರಿಯ ಎಂಪಿವಿ ಆವೃತ್ತಿಯಾದ ಕಾರ್ನಿವಾಲ್ ಕಾರಿನ ನ್ಯೂ ಜನರೇಷನ್ ಮಾದರಿಯನ್ನು ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು ವಿನೂತನ ವಿನ್ಯಾಸದೊಂದಿಗೆ ಅನಾವರಣಗೊಂಡಿದೆ.

ನ್ಯೂ ಜನರೇಷನ್ ಕಾರ್ನಿವಾಲ್ ಎಂಪಿವಿ ಕಾರಿನ ಇಂಟಿರಿಯರ್ ಬಹಿರಂಗ

ಭಾರತದಲ್ಲಿ ಮಾರಾಟವಾಗುತ್ತಿರುವ ಕಾರ್ನಿವಾಲ್ ಕಾರು ವಿದೇಶಿ ಮಾರುಕಟ್ಟೆಗಳಲ್ಲಿ ಮೊಡೆನಾ ಹೆಸರಿನಲ್ಲಿ ಮಾರಾಟವಾಗುತ್ತಿದ್ದು, ನ್ಯೂ ಜನರೇಷನ್ ಮಾದರಿಯು 2021ರ ಆರಂಭದಲ್ಲಿ ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿದ್ದು, 2021ರ ಕೊನೆಯಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ. ನ್ಯೂ ಜನರೇಷನ್ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಕಾರ್ನಿವಾಲ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ತುಸು ದುಬಾರಿಯಾಗಿರಲಿದೆ.

ನ್ಯೂ ಜನರೇಷನ್ ಕಾರ್ನಿವಾಲ್ ಎಂಪಿವಿ ಕಾರಿನ ಇಂಟಿರಿಯರ್ ಬಹಿರಂಗ

ನ್ಯೂ ಜನರೇಷನ್ ಕಾರ್ನಿವಾಲ್ ಮಾದರಿಯು ಮುಂಭಾಗದ ವಿನ್ಯಾಸದಲ್ಲಿ ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಮಾರ್ಡನ್ ಡಿಸೈನ್‌ನೊಂದಿಗೆ ಸ್ಲಿಕ್ ಎಲ್‌ಇಡಿ ಹೆಡ್‌ಲ್ಯಾಂಪ್, ಇಂಟ್ರಾಗ್ರೆಟೆಡ್ ಎಲ್ಇಡಿ ಡಿಆರ್‌ಎಲ್ಎಸ್‌ಗಳನ್ನು ನೀಡಲಾಗಿದೆ.

ನ್ಯೂ ಜನರೇಷನ್ ಕಾರ್ನಿವಾಲ್ ಎಂಪಿವಿ ಕಾರಿನ ಇಂಟಿರಿಯರ್ ಬಹಿರಂಗ

ಹೊಸ ಕಾರಿನ ಒಳಭಾಗವು ಕೂಡಾ ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ 12.3-ಇಂಚಿನ ಇನ್ಟೋಟೈನ್‌ಮೆಂಟ್ ಸಿಸ್ಟಂ, ಡ್ಯುಯಲ್ ಟೋನ್ ಡ್ಯಾಶ್‌ಬೋರ್ಡ್, ಟಚ್ ಸ್ಕ್ರೀನ್ ಮಲ್ಟಿ ಇನ್ಪೋ ಡಿಸ್ಲೈ, ಮಲ್ಟಿ ಡ್ರೈವಿಂಗ್ ಮೋಡ್, ಆರ್ಮ್ ರೆಸ್ಟ್ ಜೊತೆಗೆ ಕಪ್ ಹೋಲ್ಡರ್, ಮಲ್ಟಿ ಕಂಟ್ರೋಲ್ ಸ್ಟೀರಿಂಗ್ ವೀಲ್ಹ್ ಸೇರಿದಂತೆ ವಿವಿಧ ಮಾದರಿಯ ಗುಣಮಟ್ಟದ ಫೀಚರ್ಸ್‌ಗಳು ಗ್ರಾಹಕರನ್ನು ಸೆಳೆಯಲಿವೆ.

ನ್ಯೂ ಜನರೇಷನ್ ಕಾರ್ನಿವಾಲ್ ಎಂಪಿವಿ ಕಾರಿನ ಇಂಟಿರಿಯರ್ ಬಹಿರಂಗ

ಹಾಗೆಯೇ ನ್ಯೂ ಜನರೇಷನ್ ಮಾದರಿಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ 2.2-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಿ ಹೊಸ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಆಯ್ಕೆಯನ್ನು ಸಹ ನೀಡಬಹುದಾದ ಸಾಧ್ಯತೆಗಳಿವೆ.

ನ್ಯೂ ಜನರೇಷನ್ ಕಾರ್ನಿವಾಲ್ ಎಂಪಿವಿ ಕಾರಿನ ಇಂಟಿರಿಯರ್ ಬಹಿರಂಗ

ಒಟ್ಟಿನಲ್ಲಿ ಹೊಸ ತಲೆಮಾರಿನ ಕಾರ್ನಿವಾಲ್ ಮಾದರಿಯೊಂದಿಗೆ ಎಂಪಿವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ಕಿಯಾ ಮೋಟಾರ್ಸ್ ಕಂಪನಿಯು ಭಾರತದಲ್ಲೂ ಸದ್ಯಕ್ಕೆ ಹೊಸ ಬದಲಾವಣೆಗೆ ಕಾರಣವಾಗಿದೆ.

ನ್ಯೂ ಜನರೇಷನ್ ಕಾರ್ನಿವಾಲ್ ಎಂಪಿವಿ ಕಾರಿನ ಇಂಟಿರಿಯರ್ ಬಹಿರಂಗ

ಪ್ರತಿಸ್ಪರ್ಧಿ ಕಾರು ಮಾದರಿಯಾದ ಟೊಯೊಟಾ ಇನೋವಾ ಕ್ರಿಸ್ಟಾ ಕಾರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಬೆಲೆ ಹೊಂದಿದ್ದರು ಎಂಪಿವಿ ಕಾರುಗಳ ಮಾರಾಟದಲ್ಲಿ ಉತ್ತಮ ಬೇಡಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.24.95 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 33.95 ಲಕ್ಷ ಬೆಲೆ ಹೊಂದಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ನ್ಯೂ ಜನರೇಷನ್ ಕಾರ್ನಿವಾಲ್ ಎಂಪಿವಿ ಕಾರಿನ ಇಂಟಿರಿಯರ್ ಬಹಿರಂಗ

ಕಾರ್ನಿವಾಲ್ ಕಾರಿನಲ್ಲಿ ಸದ್ಯಕ್ಕೆ ಕೇವಲ ಒಂದೇ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, 2.2-ಲೀಟರ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಜೋಡಣೆ ಹೊಂದಿದೆ. ಪ್ರತಿ ವೆರಿಯೆಂಟ್‌ನಲ್ಲೂ 8-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ನೀಡಲಾಗಿದ್ದು, 200-ಬಿಎಚ್‌ಪಿ, 440-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ನ್ಯೂ ಜನರೇಷನ್ ಕಾರ್ನಿವಾಲ್ ಎಂಪಿವಿ ಕಾರಿನ ಇಂಟಿರಿಯರ್ ಬಹಿರಂಗ

ಈ ಮೂಲಕ ಮೈಲೇಜ್‌ನಲ್ಲೂ ಗಮನಸೆಳೆಯುವ ಕಾರ್ನಿವಾಲ್ ಕಾರು 2,200 ಕೆಜಿ ತೂಕ ಹೊಂದಿದ್ದು, ಎಆರ್‌ಎಐ ಸಂಸ್ಥೆಯು ಪ್ರಮಾಣಿಕರಿಸಿದಂತೆ ಪ್ರತಿ ಲೀಟರ್ ಡೀಸೆಲ್‌ಗೆ ಗರಿಷ್ಠ 13.9 ಕಿ.ಮೀ ಮೈಲೇಜ್ ನೀಡಲಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ನ್ಯೂ ಜನರೇಷನ್ ಕಾರ್ನಿವಾಲ್ ಎಂಪಿವಿ ಕಾರಿನ ಇಂಟಿರಿಯರ್ ಬಹಿರಂಗ

ಹೊಸ ಕಾರಿನಲ್ಲಿರುವ ಪ್ರೀಮಿಯಂ ತಾಂತ್ರಿಕ ಸೌಲಭ್ಯಗಳು ಮತ್ತು ಐಷಾರಾಮಿ ವಿನ್ಯಾಸದಿಂದಾಗಿ ಕಾರ್ನಿವಾಲ್ ಕಾರು ಆವೃತ್ತಿಯನ್ನು 'ಲಗ್ಷುರಿ ಎಂಪಿವಿ' ವಿಭಾಗದಲ್ಲಿ ಗುರುತಿಸಲಾಗಿದ್ದು, ಸಿಗ್ನೆಚರ್ ಟೈಗರ್ ನೋಸ್ ಗ್ರಿಲ್ ಮತ್ತು ಸ್ವೆಪ್ಟ್ ಆಫ್ ಕ್ರೋಮ್ , ಸ್ವೆಪ್ಟ್‌ಬ್ಯಾಕ್ ಎಲ್‌ಇಡಿ ಪ್ರೋಜೆಕ್ಟರ್, ಬಂಪರ್ ರಕ್ಷಣೆಗಾಗಿ ಸಿಲ್ವರ್ ಸ್ಕಫ್ ಪ್ಲೇಟ್ ಜೋಡಣೆ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿದೆ.

Article Published On: Tuesday, July 14, 2020, 8:45 [IST]
English summary
2021 Kia Carnival MPV Interior Image And Key Details Out. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+