ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಮಹೀಂದ್ರಾ ಟಿಯುವಿ300 ಪ್ಲಸ್ ಎಸ್‍ಯುವಿ

ಮಹೀಂದ್ರಾ ಕಂಪನಿಯು ತನ್ನ ಟಿಯುವಿ300 ಪ್ಲಸ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಮಹೀಂದ್ರಾ ಟಿಯುವಿ300 ಪ್ಲಸ್ ಎಸ್‍ಯುವಿ ಹೊಸ ನವೀಕರಣಗಳೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಮಹೀಂದ್ರಾ ಟಿಯುವಿ300 ಪ್ಲಸ್ ಎಸ್‍ಯುವಿ

ಹೊಸ ಮಹೀಂದ್ರಾ ಟಿಯುವಿ300 ಪ್ಲಸ್ ಎಸ್‍ಯುವಿಯ ಇತ್ತೀಚೆಗೆ ಮತೊಮ್ಮೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಹೊಸ ಮಹೀಂದ್ರಾ ಟಿಯುವಿ300 ಎಸ್‍ಯುವಿಯು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಚಿತ್ರಗಳನ್ನು ಗಾಡಿವಾಡಿ ಬಹಿರಂಗಪಡಿಸಿದೆ. ಹೊಸ ಮಹೀಂದ್ರಾ ಟಿಯುವಿ 300 ಪ್ಲಸ್ ಎಸ್‍ಯುವಿಯ ಮುಂಭಾಗದ ವಿನ್ಯಾಸದಲ್ಲಿ ಕೆಲವು ಬದಲಾವಣೆಗಳಾಗಿದೆ. ಈ ಎಸ್‍ಯುವಿಯ ಮುಂಭಾಗ ಬೋಲ್ಡ್ ಗ್ರಿಲ್ ಮತ್ತು ಮಹೀಂದ್ರಾ ಲೋಗೋವನ್ನು ಮಧ್ಯದಲ್ಲಿ ಇರಿಸಲಾಗಿದೆ. ಹೊಸ ಮಹೀಂದ್ರಾ ಟಿಯುವಿ 300 ಎಸ್‍ಯುವಿಯಲ್ಲಿ ಲಂಬವಾದ ಸ್ಲ್ಯಾಟ್ ಗ್ರಿಲ್‌ನ ಕೆಳಗೆ ಹನಿಕ್ಯೂಬ್ ಮಾದರಿಯೊಂದಿಗೆ ಹೊಸ ವಿಶಾಲವಾದ ಏರ್-ಇನ್ ಟೆಕ್ ಅನ್ನು ಒಳಗೊಂಡಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಮಹೀಂದ್ರಾ ಟಿಯುವಿ300 ಪ್ಲಸ್ ಎಸ್‍ಯುವಿ

ಇತರ ವಿನ್ಯಾಸ ಬದಲಾವಣೆಗಳಲ್ಲಿ ಹೊಸ ಹೆಡ್‌ಲ್ಯಾಂಪ್‌ಗಳು ಇಂಟಿಗ್ರೇಟೆಡ್ ಡಿಆರ್‌ಎಲ್‌ಗಳನ್ನು ಮೇಲ್ಭಾಗದಲ್ಲಿ ಇರಿಸಲಾಗಿದೆ. ಇನ್ನು ನವೀಕರಿಸಿದ ಬಂಪರ್ ಮತ್ತು ಫಾಗ್ ಲ್ಯಾಂಪ್ ಅನ್ನು ಒಳಗೊಂಡಿದೆ.

MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಮಹೀಂದ್ರಾ ಟಿಯುವಿ300 ಪ್ಲಸ್ ಎಸ್‍ಯುವಿ

ಇನ್ನು ಮಹೀಂದ್ರಾ ಟಿಯುವಿ300 ಪ್ಲಸ್ ಎಸ್‍ಯುವಿಯ ಹಿಂಭಾಗದಲ್ಲಿ ಟೈಲ್-ಲ್ಯಾಂಪ್‌ಗಳು, ಬಂಪರ್‌ಗಳು ಮತ್ತು ಬೂಟ್ ಲಿಡ್ ನಲ್ಲಿ ಸಣ್ಣ ಮಟ್ಟದ ಬದಲಾವಣೆಗಳನ್ನು ನಡೆಸಲಾಗಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಮಹೀಂದ್ರಾ ಟಿಯುವಿ300 ಪ್ಲಸ್ ಎಸ್‍ಯುವಿ

ಬಿಎಸ್-6 ಮಹೀಂದ್ರಾ ಟಿಯುವಿ300 ಎಸ್‍ಯುವಿಯ ಹೊಸ ಡ್ಯುಯಲ್-ಟೋನ್ ಅಲಾಯ್ ವ್ಹೀಲ್‌ಗಳನ್ನು ಅಳವಡಿಸಬಹುದು. ಇನ್ನು ಮಹೀಂದ್ರಾ ಟಿಯುವಿ300 ಎಸ್‍ಯುವಿ ಬಾಕ್ಸಿ ಸಿಲೂಯೆಟ್ ಹೊಸ ಮಾದರಿಯಲ್ಲಿ ಬದಲಾಗದೆ ಉಳಿದಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಮಹೀಂದ್ರಾ ಟಿಯುವಿ300 ಪ್ಲಸ್ ಎಸ್‍ಯುವಿ

ಹೊಸ ಟಿಯುವಿ300 ಎಸ್‍ಯುವಿಗಳ ಇಂಟಿರಿಯರ್ ನಲ್ಲಿ ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಹೊಂದಿರುವ ಇನ್ಪೋಟೇನೆಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ. ಇದರೊಂದಿಗೆ ಈ ಎಸ್‍ಯುವಿಯಲ್ಲಿ ಕೆಲವು ನೂತನ ಪೀಚರ್ ಗಳನ್ನು ಒಳಗೊಂಡಿರುತ್ತದೆ ಎಂದು ನಿರೀಕ್ಷಿಸುತ್ತೇವೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಮಹೀಂದ್ರಾ ಟಿಯುವಿ300 ಪ್ಲಸ್ ಎಸ್‍ಯುವಿ

ಇನ್ನು ಟಿಯುವಿ300 ಪ್ಲಸ್ ಎಸ್‍ಯುವಿಯು ಕೂಡ ಹಿಂದಿನ ಮಾದರಿಯಂತೆ 2.2-ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ. ಈ ಎಂಜಿನ್ 138 ಬಿಹೆಚ್‌ಪಿ ಮತ್ತು 280 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಮಹೀಂದ್ರಾ ಟಿಯುವಿ300 ಪ್ಲಸ್ ಎಸ್‍ಯುವಿ

ಹಿಂದಿನ ಬಿಎಸ್-4 ಟಿಯುವಿ300 ಪ್ಲಸ್‌ ಎಸ್‍ಯುವಿಯ ಬೆಲೆಯು ರೂ.9.93 ಲಕ್ಷದಿಂದ ರೂ.11.42 ಲಕ್ಷಗಳಾಗಿದೆ. ಇನ್ನು ಹೊಸ ಟಿಯುವಿ300 ಪ್ಲಸ್‌ ಎಸ್‍ಯುವಿಯ ಬೆಲೆಯು ತುಸು ದುಬಾರಿಯಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಮಹೀಂದ್ರಾ ಟಿಯುವಿ300 ಪ್ಲಸ್ ಎಸ್‍ಯುವಿ

ಹೊಸ ಮಹೀಂದ್ರಾ ಟಿಯುವಿ300 ಪ್ಲಸ್‌ ಎಸ್‍ಯುವಿಯಯು ಅಭಿವೃದ್ದಿ ಹಂತದಲ್ಲಿ ಇದೆ ಎಂದು ನಿರೀಕ್ಷಿಸುತ್ತೇವೆ. ಬಿಎಸ್-6 ಮಹೀಂದ್ರಾ ಟಿಯುವಿ300 ಎಸ್‍ಯುವಿಯ ಹೊರಭಾಗ ಮತ್ತು ಇಂಟಿರಿಯರ್ ನಲ್ಲಿ ಕೆಲವು ಬದಲಾವಣೆಗಳನ್ನು ಹೊಂದಿರಲಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಮಹೀಂದ್ರಾ ಟಿಯುವಿ300 ಪ್ಲಸ್ ಎಸ್‍ಯುವಿ

ಹೊಸ ತಲೆಮಾರಿನ ಮಹೀಂದ್ರಾ ಟಿಯುವಿ300 ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟಾಟಾ ಹ್ಯಾರಿಯರ್, ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ

Most Read Articles

Kannada
English summary
Updated 2021 Mahindra TUV300 Plus Spotted Testing Again. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X