ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಎಕ್ಸ್‌ಯುವಿ500

ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಒಂದು ದಶಕಕ್ಕೂ ಹೆಚ್ಚು ಕಾಲ ಮಾರಾಟದಲ್ಲಿರುವ ಜನಪ್ರಿಯ ಎಸ್‍ಯುವಿಯಾಗಿದೆ. ಇದೀಗ ಮಹೀಂದ್ರಾ ಕಂಪನಿಯು ಹೊಸ ತಲೆಮಾರಿನ ಎಕ್ಸ್‌ಯುವಿ500 ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಭರ್ಜರಿ ಸಿದ್ದತೆಯನ್ನು ನಡೆಸುತ್ತಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಎಕ್ಸ್‌ಯುವಿ500

ಮಹೀಂದ್ರಾ ಕಂಪನಿಯು ಇತ್ತೀಚೆಗೆ ತನ್ನ ಬಹುನಿರೀಕ್ಷಿತ ಥಾರ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತು. ಇದೀಗ ಹೊಸ ತಲೆಮಾರಿನ ಸ್ಕಾರ್ಪಿಯೋ ಮತ್ತು ಎಕ್ಸ್‌ಯುವಿ500 ಎಸ್‍ಯುವಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದೀಗ ಎಕ್ಸ್‌ಯುವಿ500 ಎಸ್‍ಯುವಿಯನ್ನು ಭಾರತೀಯ ರಸ್ತೆಗಳಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಮೂಲಮಾದರಿ ಎಕ್ಸ್‌ಯುವಿ500 ಎಸ್‍ಯುವಿಯನ್ನು ಮರೆಮಾಚಿ ಸ್ಪಾಟ್ ಟೆಸ್ಟ್ ನಡುಸುತ್ತಿರುವ ಚಿತ್ರಗಳು ಬಹಿರಂಗವಾಗಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಎಕ್ಸ್‌ಯುವಿ500

ಆದರೆ ಈ ಹೊಸ ಎಸ್‌ಯುವಿಯನ್ನು ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಈ ಹೊಸ ತಲೆಮಾರಿನ ಮಹೀಂದ್ರಾ ಎಕ್ಸ್‌ಯುವಿ500 2020ರ ಆಟೋ ಎಕ್ಸ್‌ಪೋದಲ್ಲಿ ಮಾರಾಟವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಮಹೀಂದ್ರಾ ಕಂಪನಿಯು ಆಟೊ ಎಕ್ಸ್ ಪೋದಲ್ಲಿ ಬಿಡುಗಡೆಗೊಳಿಸಿಲ್ಲ.

MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಎಕ್ಸ್‌ಯುವಿ500

ಹೊಸ ತಲೆಮಾರಿನ ಎಕ್ಸ್‌ಯುವಿ500 ಎಸ್‍ಯುವಿಯನ್ನು ಮೊನೊಕೊಕ್ ಪ್ಲಾಟ್‌ಫಾರ್ಮ್‌ನ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. 2021ರ ಮಹೀಂದ್ರಾ ಎಕ್ಸ್‌ಯುವಿ500 ಅದರ ವಿನ್ಯಾಸ ಮತ್ತು ಸ್ಟೈಲಿಂಗ್‌ನಲ್ಲಿ ಗಮನಾರ್ಹ ಬದಲಾವಣೆಗಳ ಜೊತೆಗೆ ಹಲವಾರು ನವೀಕರಣಗಳು ಮತ್ತು ಹೆಚ್ಚುವರಿ ಫೀಚರ್ ಗಳನ್ನು ಸಹ ಹೊಂದಿರುತ್ತದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಎಕ್ಸ್‌ಯುವಿ500

ಹೊಸ ತಲೆಮಾರಿನ ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿಯಲ್ಲಿ ಡೀಸೆಲ್ ಎಂಜಿನ್ ಅನ್ನು ಸಹ ಅಳವಡಿಸುವ ಸಾಧ್ಯತೆಗಳಿದೆ. ಈ ಹೊಸ ಎಸ್‍ಯುವಿಯಲ್ಲಿ 2.0-ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಬಹುದು.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಎಕ್ಸ್‌ಯುವಿ500

2021ರ ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿನಲ್ಲಿ ಹೊಸ 2.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಿದೆ ಎಂದು ವರದಿಗಳಾಗಿದೆ. ಎರಡು ಎಂಜಿನ್ ಗಳಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿರುತ್ತದೆ. ಹೊಸ ಎಸ್‍ಯುವಿಯು ಎಡಬ್ಲ್ಯೂಡಿ(ಆಲ್-ವೀಲ್ ಡ್ರೈವ್) ಸಿಸ್ಟಂ ಸಹ ಹೊಂದಿರಲಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಎಕ್ಸ್‌ಯುವಿ500

ಮಹೀಂದ್ರಾ ಕಂಪನಿಯು ತನ್ನ ಪ್ರಸ್ತುತ ತಲೆಮಾರಿನ ಬಿಎಸ್-6 ಎಕ್ಸ್‌ಯುವಿ500 ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿಯ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.13.20 ಲಕ್ಷಗಳಾಗಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಎಕ್ಸ್‌ಯುವಿ500

ಬಿಎಸ್-6 ಎಕ್ಸ್‌ಯುವಿ500 ಎಸ್‍ಯುವಿಯಲ್ಲಿ 2.2-ಲೀಟರ್ ಎಂಹಾಕ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಿದ್ದಾರೆ. ಈ ಎಂಜಿನ್ 155 ಬಿಹೆಚ್‍ಪಿ ಪವರ್ ಮತ್ತು 360 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಆರು-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಅನ್ನು ಅಳವಡಿಸಲಾಗಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್ ನಡೆಸಿದ ಹೊಸ ಮಹೀಂದ್ರಾ ಎಕ್ಸ್‌ಯುವಿ500

ಮಹೀಂದ್ರಾ ಎಕ್ಸ್‌ಯುವಿ500 ಭಾರತದಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಮಹೀಂದ್ರಾ ಎಕ್ಸ್‌ಯುವಿ500 ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್, ಹ್ಯುಂಡೈ ಕ್ರೆಟಾ, ಜೀಪ್ ಕಂಪಾಸ್ ಮತ್ತು ಫೋಕ್ಸ್ ವ್ಯಾಗನ್ ಟಿ-ರಾಕ್ ಎಸ್‍ಯುವಿಯುಗಳಿಗೆ ಪೈಪೋಟಿ ನೀಡುತ್ತದೆ.

Article Published On: Saturday, September 26, 2020, 11:41 [IST]
English summary
2021 Mahindra XUV500 Front Design, Alloys in Production Spec. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+