ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ 2021ರ ಮಹೀಂದ್ರಾ ಎಕ್ಸ್‌ಯುವಿ500

ಮಹೀಂದ್ರಾ ಕಂಪನಿಯು ಹೊಸ ತಲೆಮಾರಿನ ಎಕ್ಸ್‌ಯುವಿ500 ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಭರ್ಜರಿ ಸಿದ್ದತೆ ನಡೆಸುತ್ತಿದೆ. ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಒಂದು ದಶಕಕ್ಕೂ ಹೆಚ್ಚು ಕಾಲ ಮಾರಾಟದಲ್ಲಿರುವ ಜನಪ್ರಿಯ ಎಸ್‍ಯುವಿಯಾಗಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ 2021ರ ಮಹೀಂದ್ರಾ ಎಕ್ಸ್‌ಯುವಿ500

ಮಹೀಂದ್ರಾ ಕಂಪನಿಯು ಇತ್ತೀಚೆಗೆ ತನ್ನ ಬಹುನಿರೀಕ್ಷಿತ ಥಾರ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತು. ಇದೀಗ ಹೊಸ ತಲೆಮಾರಿನ ಸ್ಕಾರ್ಪಿಯೋ ಮತ್ತು ಎಕ್ಸ್‌ಯುವಿ500 ಎಸ್‍ಯುವಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದೀಗ ಮಹೀಂದ್ರಾ ಕಂಫನಿಯು ತನ್ನ ಎಕ್ಸ್‌ಯುವಿ500 ಎಸ್‍ಯುವಿಯನ್ನು ಭಾರತೀಯ ರಸ್ತೆಗಳಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಹೊಸ ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿಯು ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿದೆ.ಈ ಹೊಸ ಎಕ್ಸ್‌ಯುವಿ500 ಎಸ್‍ಯುವಿಯು ಫನ್‌ಸ್ಟರ್ ಮಾದರಿಯಿಂದ ಎರವಲು ಪಡೆದ ಫುಲ್ ಎಲ್ಇಡಿ ಹೆಡ್ ಲ್ಯಾಂಪ್ ಅನ್ನು ಹೊಂದಿರಲಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ 2021ರ ಮಹೀಂದ್ರಾ ಎಕ್ಸ್‌ಯುವಿ500

ಇನ್ನು ಹಿಂಭಾಗದಲ್ಲಿ ಎಲ್‌ಇಡಿ ಟೈಲ್ ಲೈಟ್‌ಗಳನ್ನು ಹೊಂದಿರುತ್ತದೆ. ಹೊಸ ಎಸ್‌ಯುವಿಯನ್ನು ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಈ ಹೊಸ ತಲೆಮಾರಿನ ಮಹೀಂದ್ರಾ ಎಕ್ಸ್‌ಯುವಿ500 2020ರ ಆಟೋ ಎಕ್ಸ್‌ಪೋದಲ್ಲಿ ಮಾರಾಟವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಮಹೀಂದ್ರಾ ಕಂಪನಿಯು ಆಟೊ ಎಕ್ಸ್ ಪೋದಲ್ಲಿ ಬಿಡುಗಡೆಗೊಳಿಸಿಲ್ಲ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ 2021ರ ಮಹೀಂದ್ರಾ ಎಕ್ಸ್‌ಯುವಿ500

ಹೊಸ ತಲೆಮಾರಿನ ಎಕ್ಸ್‌ಯುವಿ500 ಎಸ್‍ಯುವಿಯನ್ನು ಮೊನೊಕೊಕ್ ಪ್ಲಾಟ್‌ಫಾರ್ಮ್‌ನ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. 2021ರ ಮಹೀಂದ್ರಾ ಎಕ್ಸ್‌ಯುವಿ500 ಅದರ ವಿನ್ಯಾಸ ಮತ್ತು ಸ್ಟೈಲಿಂಗ್‌ನಲ್ಲಿ ಗಮನಾರ್ಹ ಬದಲಾವಣೆಗಳ ಜೊತೆಗೆ ಹಲವಾರು ನವೀಕರಣಗಳು ಮತ್ತು ಹೆಚ್ಚುವರಿ ಫೀಚರ್ ಗಳನ್ನು ಸಹ ಹೊಂದಿರುತ್ತದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ 2021ರ ಮಹೀಂದ್ರಾ ಎಕ್ಸ್‌ಯುವಿ500

ಹೊಸ ತಲೆಮಾರಿನ ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿಯಲ್ಲಿ ಡೀಸೆಲ್ ಎಂಜಿನ್ ಅನ್ನು ಸಹ ಅಳವಡಿಸುವ ಸಾಧ್ಯತೆಗಳಿದೆ. ಈ ಹೊಸ ಎಸ್‍ಯುವಿಯಲ್ಲಿ 2.0-ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಬಹುದು.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ 2021ರ ಮಹೀಂದ್ರಾ ಎಕ್ಸ್‌ಯುವಿ500

2021ರ ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿನಲ್ಲಿ ಹೊಸ 2.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಬಹುದು ಎಂದು ವರದಿಗಳಾಗಿದೆ. ಎರಡು ಎಂಜಿನ್ ಗಳಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿರುತ್ತದೆ. ಹೊಸ ಎಸ್‍ಯುವಿಯು ಎಡಬ್ಲ್ಯೂಡಿ ಸಿಸ್ಟಂ ಸಹ ಹೊಂದಿರಲಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ 2021ರ ಮಹೀಂದ್ರಾ ಎಕ್ಸ್‌ಯುವಿ500

ಮಹೀಂದ್ರಾ ಕಂಪನಿಯು ತನ್ನ ಪ್ರಸ್ತುತ ತಲೆಮಾರಿನ ಬಿಎಸ್-6 ಎಕ್ಸ್‌ಯುವಿ500 ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿಯ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.13.20 ಲಕ್ಷಗಳಾಗಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ 2021ರ ಮಹೀಂದ್ರಾ ಎಕ್ಸ್‌ಯುವಿ500

ಬಿಎಸ್-6 ಎಕ್ಸ್‌ಯುವಿ500 ಎಸ್‍ಯುವಿಯಲ್ಲಿ 2.2-ಲೀಟರ್ ಎಂಹಾಕ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಿದ್ದಾರೆ. ಈ ಎಂಜಿನ್ 155 ಬಿಹೆಚ್‍ಪಿ ಪವರ್ ಮತ್ತು 360 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಆರು-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಅನ್ನು ಅಳವಡಿಸಲಾಗಿದೆ.

ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದ 2021ರ ಮಹೀಂದ್ರಾ ಎಕ್ಸ್‌ಯುವಿ500

ಹೊಸ ಮಹೀಂದ್ರಾ ಎಕ್ಸ್‌ಯುವಿ500 ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಕಿಯಾ ಸೆಲ್ಟೋಸ್, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್, ಹ್ಯುಂಡೈ ಕ್ರೆಟಾ, ಜೀಪ್ ಕಂಪಾಸ್ ಮತ್ತು ಫೋಕ್ಸ್ ವ್ಯಾಗನ್ ಟಿ-ರಾಕ್ ಎಸ್‍ಯುವಿಯುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
2021 Mahindra XUV500 Spied. Read In Kannada.
Story first published: Thursday, October 1, 2020, 20:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X