Just In
- 9 hrs ago
ಡಕಾರ್ ರ್ಯಾಲಿ 2021: 43ನೇ ಆವೃತ್ತಿಯನ್ನು ಗೆದ್ದ ಹೋಂಡಾ ರೈಡರ್ ಕೆವಿನ್ ಬೆನೆವಿಡೆಸ್
- 10 hrs ago
ಸಿವಿ ವಾಹನ ಮಾದರಿಗಳಿಗಾಗಿ ಹೊಸ ಮಾದರಿಯ ಟೈರ್ ಬಿಡುಗಡೆ ಮಾಡಿದ ಬ್ರಿಡ್ಜ್ಸ್ಟೋನ್
- 11 hrs ago
ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ
- 11 hrs ago
ಎರಡನೇ ಬಾರಿ ರೋಲ್ಸ್ ರಾಯ್ಸ್ ಕುಲಿನನ್ ಕಾರು ಖರೀದಿಸಿದ ಮುಖೇಶ್ ಅಂಬಾನಿ
Don't Miss!
- Movies
ಪ್ರತಿಷ್ಟಿತ ಗೋವಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಕನ್ನಡದ ಸ್ಟಾರ್ ನಟ
- News
ರೈತರ ಪ್ರತಿಭಟನೆ: ಜನವರಿ 19ಕ್ಕೆ ಕೇಂದ್ರ ಮತ್ತು ರೈತ ಸಂಘಟನೆಗಳ ನಡುವೆ ಮತ್ತೊಂದು ಸುತ್ತಿನ ಸಭೆ
- Lifestyle
ಶನಿವಾರದ ಭವಿಷ್ಯ: ಮಕರ ರಾಶಿಯವರೇ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು
- Sports
ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್ ಪಂದ್ಯ, 2ನೇ ದಿನ, Live ಸ್ಕೋರ್
- Education
ECIL Recruitment 2021: ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ರಾಸ್ ಕಾರಿನ ಟೀಸರ್ ಬಿಡುಗಡೆ
ಜರ್ಮನಿಯ ಐಷಾರಾಮಿ ಕಾರು ತಯಾರಕ ಕಂಪನಿ ಮರ್ಸಿಡಿಸ್ ಬೆಂಝ್ ತನ್ನ ಹೊಸ ಎಸ್-ಕ್ರಾಸ್ ಕಾರಿನ ಹೊಸ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಈ ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ರಾಸ್ ಕಾರನ್ನು ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪರಿಚಯಿಸಲಿದೆ.

ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ರಾಸ್ ಮುಂದಿನ ವರ್ಷದಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಹೊಸ ಕಾರು ಅತ್ಯಾಕರ್ಷಕ ಹೈಟಿಕ್ ಫೀಚರ್ ಗಳನ್ನು ಹೊಂದಿರಲಿದೆ. ಮರ್ಸಿಡಿಸ್ ಬೆಂಝ್ ಎಸ್-ಕ್ರಾಸ್ ಉನ್ನತ ಮಟ್ಟದ ಐಷಾರಾಮಿ ಮತ್ತು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ ಕಾರು ಇದಾಗಿದೆ. ಇನ್ನು ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಭಾರತದಲ್ಲಿ ಬ್ರ್ಯಾಂಡ್ ನ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ.

ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ರಾಸ್ ಕಾರಿನ ಮುಂಭಾಗದಲ್ಲಿ ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಈ ಕಾರಿನಲ್ಲಿ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ಎಲ್ಇಡಿ ಡಿಆರ್ಎಲ್ ಗಳನ್ನು ಅಳವಡಿಸಲಾಗಿದೆ.
MOST READ: ಅನಾವರಣವಾಯ್ತು ಮರ್ಸಿಡಿಸ್ ಎಎಂಜಿ ಇ 63 ಎಸ್ ಫೇಸ್ಲಿಫ್ಟ್ ಕಾರು

ಪ್ರಸ್ತುತ ತಲೆಮಾರಿನ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ (ಡಬ್ಲ್ಯು 222) ಭಾರತದಿಂದ 2014ರಿಂದ ಮಾರಾಟವಾಗುತ್ತಿದೆ. ಈ ಸೆಡಾನ್ ಅನ್ನು ಐಷಾರಾಮಿ-ಸೆಡಾನ್ ಆದ ಮುಂದಿನ ತಲೆಮಾರಿನ ಎಸ್-ಕ್ಲಾಸ್ (ಡಬ್ಲ್ಯು 223) ಬಿಡುಗಡೆಗೊಳಿಸುವುದರ ಮೂಲಕ ಬದಲಾಯಿಸಲಾಗುವುದು.

ಹೊಸ ತಲೆಮಾರಿನ ಎಸ್-ಕ್ಲಾಸ್ ಸೆಡಾನ್ ಬಗ್ಗೆ ಕಂಪನಿಯು ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಈ ಹೊಸ ತಲೆಮಾರಿನ ಎಸ್-ಕ್ಲಾಸ್ ಡ್ಯಾಶ್ ಬೋರ್ಡ್ ನಲ್ಲಿ ದೊಡ್ಡ ಇನ್ಫೋಟೇನೆಮೆಂಟ್ ಡಿಸ್ ಪ್ಲೇಯನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಈ ಐಷಾರಾಮಿ ಕಾರಿನ ಹಿಂಭಾಗದ ಪ್ರಯಾಣಿಕರ ಮನುರಂಜನೆಗಾಗಿ ಹಿಂಭಾಗದಲ್ಲಿ ರೇರ್ ಸೆಂಟರ್ ಕನ್ಸೋಲ್, ಅರ್ಮ್ ರೇಸ್ಟ್, ಮಸಾಜ್ ಫಂಕ್ಷನ್ ಮತ್ತು ದೊಡ್ಡ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿರಲಿದೆ. ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಡ್ಯಾಶ್ಬೋರ್ಡ್ ಹೊಸ ವಿನ್ಯಾಸವನ್ನು ಹೊಂದಿರಲಿದೆ. ಈ ಹೊಸ ಎಸ್-ಕ್ಲಾಸ್ ಕಾರಿನಲ್ಲಿ ಮೌಂಟಡ್ ಕಂಟ್ರೋಲ್ ನೊಂದಿಗೆ ಹೊಸ ಸ್ಟೀಯರಿಂಗ್ ವ್ಜೀಲ್ ಅನ್ನು ಅಳವಡಿಸಲಾಗಿದೆ.

ಹೊಸ ತಲೆಮಾರಿನ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ರೇದಾರ್ ಗೈಡೆಡ್ ಕ್ರೂಸ್ ಕಂಟ್ರೋಲ್, ಮಲ್ಟಿಪಲ್ ಏರ್ಬ್ಯಾಗ್, 360 ಡಿಗ್ರಿ ಕ್ಯಾಮೆರಾ, ನೈಟ್ ವಿಷನ್ ಕ್ಯಾಮೆರಾ ಮತ್ತು ಇತರ ಫೀಚರ್ ಗಳನ್ನು ಹೊಂದಿರಲಿದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್ವ್ಯಾಗನ್ ಟಿ-ರಾಕ್ ಎಸ್ಯುವಿ

ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಪೆಟ್ರೋಲ್, ಡೀಸೆಲ್, ಮೈಲ್ಡ್-ಹೈಬ್ರಿಡ್ ಮತ್ತು ಪ್ಲಗ್-ಇನ್ ಹೈಬ್ರಿಡ್ ಎಂಜಿನ್ ಆಯ್ಕೆಗಳನ್ನು ಹೊಂದಿರಲಿದೆ. ಇನ್ನು ಮರ್ಸಿಡಿಸ್ ಬೆಂಝ್ ಎಸ್600 ರ ಕೂಪೆ ಮತ್ತು ಕ್ಯಾಬ್ರಿಯೊಲೆಟ್ ಆವೃತ್ತಿಗಳನ್ನು ಕಂಪನಿಯು ಸ್ಥಗಿತಗೊಳಿಸಲಿದೆ ಎಂಬ ವದಂತಿಗಳಿವೆ.

ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರು ಬಿಡುಗಡೆಯಾದ ಬಳಿಕ ಬಿಎಂಡಬ್ಲ್ಯು 7 ಸೀರಿಸ್, ಜಾಗ್ವಾರ್ ಎಕ್ಸ್ಜೆ, ಆಡಿ ಎ8, ಪೋರ್ಷೆ ಪನಾಮೆರಾ ಮತ್ತು ಮೆಸಾರಟಿ ಕಾರು ಕ್ವಾಟ್ರೊಪೋರ್ಟ್ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.