Just In
Don't Miss!
- News
ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ?
- Movies
ಜನವರಿ 22ರಂದು ಐದು ಕನ್ನಡ ಸಿನಿಮಾ ಬಿಡುಗಡೆ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್ ವರ್ಷನ್
2019ರಲ್ಲಿ ಮೊದಲ ಬಾರಿಗೆ ಬಿಡುಗಡೆಯಾಗಿದ್ದ ಎಂಜಿ ಹೆಕ್ಟರ್ ಎಸ್‌ಯುವಿ ಮಾದರಿಯು ಈ ವರ್ಷದ ಆರಂಭದಲ್ಲಿ ಬಿಎಸ್-6 ಎಂಜಿನ್‌ನೊಂದಿಗೆ ಉನ್ನತೀಕರಣಗೊಂಡಿತ್ತು. ಬಿಎಸ್-6 ಎಂಜಿನ್ ಹೊರತುಪಡಿಸಿ ಯಾವುದೇ ಬದಲಾವಣೆ ಪಡೆದುಕೊಂಡಿರಲಿಲ್ಲ. ಇದೀಗ ಬಿಡುಗಡೆಯಾಗಲಿರುವ ಫೇಸ್‌ಲಿಫ್ಟ್ ಆವೃತ್ತಿಯು ಬಿಎಸ್-6 ಎಂಜಿನ್‌ನೊಂದಿಗೆ ವಿನ್ಯಾಸದಲ್ಲಿ ಪ್ರಮುಖ ಬದಲಾವಣೆ ಪಡೆದುಕೊಳ್ಳುತ್ತಿದೆ.

ಎಂಜಿ ಮೋಟಾರ್ ಕಂಪನಿಯು ಹೆಕ್ಟರ್ ಫೇಸ್‌ಲಿಫ್ಟ್ ಕಾರು ಮಾದರಿಯನ್ನು ಮುಂದಿನ ತಿಂಗಳು ಮೊದಲ ವಾರದಲ್ಲೇ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದ್ದು, ಕಂಪನಿಯು ಹೊಸ ಕಾರಿನ ಬಿಡುಗಡೆಗೆ ಅಂತಿಮ ಹಂತದ ಸಿದ್ದತೆ ನಡೆಸಿದೆ. ಫೇಸ್‌ಲಿಫ್ಟ್ ಮಾದರಿಯಲ್ಲಿ ಹೆಕ್ಟರ್ ಪ್ಲಸ್ ಮಾದರಿಯಿಂದ ಎರವಲು ಪಡೆದುಕೊಳ್ಳಲಾದ ಕೆಲವು ಹೆಚ್ಚುವರಿ ತಾಂತ್ರಿಕ ಅಂಶಗಳನ್ನು ನೀಡಲಾಗುತ್ತಿದ್ದು, ಯುಎಸ್ಎದಲ್ಲಿ ಮಾರಾಟವಾಗುತ್ತಿರುವ ಷವರ್ಲೆ ಕಾಪ್ಟಿವಿಯಾದಲ್ಲಿರುವಂತೆ ಹೊರ ವಿನ್ಯಾಸ ಹೊಂದಿದೆ.

ಷವರ್ಲೆ ಕಾಪ್ಟಿವಿಯಾ ಎಸ್‌ಯುವಿ ಕಾರು ಎಂಜಿ ಹೆಕ್ಟರ್ ಕಾರಿನ ರೀಬ್ಯಾಡ್ಜ್ ಆವೃತ್ತಿಯಾಗಿ ಮಾರಾಟಗೊಳ್ಳುತ್ತಿದ್ದು, ಹೆಕ್ಟರ್ ಫೇಸ್‌ಲಿಫ್ಟ್‌ನಲ್ಲಿ ಸ್ಟ್ಯಾಂಡರ್ಡ್ ಆಗಿ ಹೊಸ ವಿನ್ಯಾಸದ 18-ಇಂಚಿನ ಅಲಾಯ್ ವೀಲ್ಹ್, ಆಟೋ ಡಿಮ್ಮಿಂಗ್ ರಿಯಲ್ ವ್ಯೂ ಮಿರರ್ ನೀಡಲಾಗಿದೆ.

ಹಾಗೆಯೇ ಫೇಸ್‌ಲಿಫ್ಟ್ ಮಾದರಿಯಲ್ಲಿ ಹೊಸದಾಗಿ ಮರುವಿನ್ಯಾಸಗೊಳಿಸಲಾದ ಗ್ರಿಲ್ ಮತ್ತು ಡ್ಯುಯಲ್ ಕಲರ್ ಇಂಟಿರಿಯರ್ ಸಹ ನೀಡಲಾಗಿದ್ದು, ವಿನ್ಯಾಸದಲ್ಲಿನ ಬದಲಾವಣೆ ಹೊರತುಪಡಿಸಿ ಎಂಜಿನ್ ಆಯ್ಕೆಯಲ್ಲಿ ಬಿಎಸ್-6 ಮಾದರಿಯಲ್ಲಿರುವಂತೆಯೇ ಮುಂದುವರಿಸಲಾಗಿದೆ.

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಸದ್ಯ ತನ್ನದೆ ಆದ ಜನಪ್ರಿಯತೆ ಹೊಂದಿರುವ ಎಂಜಿ ಹೆಕ್ಟರ್ ಕಾರು ಮಾದರಿಯು ಫೇಸ್‌ಲಿಫ್ಟ್ ಮಾದರಿಯೊಂದಿಗೆ ಮತ್ತಷ್ಟು ಗ್ರಾಹಕರನ್ನು ಆಕರ್ಷಣೆ ಮಾಡುವ ತವಕದಲ್ಲಿದೆ. ಇನ್ನು ಹೆಕ್ಟರ್ ಕಾರು ಮಾದರಿಯು 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಅತ್ಯುತ್ತಮ ಬೆಲೆಯೊಂದಿಗೆ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಹೆಕ್ಟರ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.84 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.18.09 ಲಕ್ಷ ಬೆಲೆ ಹೊಂದಿದ್ದು, ಸ್ಪೆಷಲ್ ಎಡಿಷನ್ ಕೂಡಾ ಮಾರಾಟಕ್ಕೆ ಲಭ್ಯವಿದೆ.

ಹೆಕ್ಟರ್ ಎಸ್‌ಯುವಿ ಬಿಡುಗಡೆ ಮಾಡಲಾದ ಮೊದಲ ವರ್ಷದ ಸಂಭ್ರಮಕ್ಕಾಗಿ ಆನಿವರ್ಸರಿ ಎಡಿಷನ್ ಬಿಡುಗಡೆಗೊಳಿಸಿದ್ದ ಎಂಜಿ ಮೋಟಾರ್ ಕಂಪನಿಯು ಈ ತಿಂಗಳಾಂತ್ಯದ ತನಕ ಸ್ಪೆಷಲ್ ಎಡಿಷನ್ ಮಾರಾಟ ಮಾಡಲಿದ್ದು, ಫೇಸ್‌ಲಿಫ್ಟ್ ಬಿಡುಗಡೆಯ ನಂತರ ಸ್ಪೆಷಲ್ ಎಡಿಷನ್ ಸ್ಥಗಿತಗೊಳಿಸಲಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಆನಿವರ್ಸರಿ(ಸ್ಪೆಷಲ್) ಎಡಿಷನ್ ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಪೆಟ್ರೋಲ್ ಮಾದರಿಯ ಬೆಲೆಯನ್ನು ರೂ.13.64 ಲಕ್ಷಕ್ಕೆ ಮತ್ತು ಡೀಸೆಲ್ ಮಾದರಿಯ ಬೆಲೆಯನ್ನು ರೂ. 15 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

ಸ್ಟ್ಯಾಂಡರ್ಡ್ ಸೂಪರ್ ವೆರಿಯೆಂಟ್‌ಗಿಂತಲೂ ಆನಿವರ್ಸರಿ ಎಡಿಷನ್ ಮಾದರಿಯಲ್ಲಿ ಯಾವುದೇ ಹೆಚ್ಚುವರಿ ಬೆಲೆ ಏರಿಕೆಯಿಲ್ಲದೆ ಕೆಲವು ಹೆಚ್ಚುವರಿ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಆನಿವರ್ಸರಿ ಎಡಿಷನ್ ಮಾದರಿಯು ಸೀಮಿತ ಅವಧಿಗೆ ಮಾತ್ರ ಖರೀದಿಗೆ ಲಭ್ಯವಿರಲಿವೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಆನಿವರ್ಸರಿ ಎಡಿಷನ್‌ನಲ್ಲಿ 10.3-ಇಂಚಿನ ಹೆಚ್‌ಡಿ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಡಿಸ್‌ಪ್ಲೇ, ವೈರ್‌ಲೆಸ್ ಚಾರ್ಜರ್, ಏರ್ ಪ್ಲೂರಿಫ್ಲೈರ್, ಮೆಡ್‌ಕಿನ್ ಕಿಟ್ ಅಳವಡಿಸಲಾಗಿದ್ದು, ಫೇಸ್‌ಲಿಫ್ಟ್ ಮಾದರಿಯ ನಂತರ ಸ್ಪೆಷಲ್ ಎಡಿಷನ್ ಮಾರಾಟವು ಸ್ಥಗಿತವಾಗಿ ಸ್ಟ್ಯಾಂಡರ್ಡ್ ಮಾದರಿಯ ಮಾರಾಟ ಮುಂದುವರಿಯಲಿದೆ.