Just In
Don't Miss!
- News
ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ?
- Movies
ಜನವರಿ 22ರಂದು ಐದು ಕನ್ನಡ ಸಿನಿಮಾ ಬಿಡುಗಡೆ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸ್ಪಾಟ್ ಟೆಸ್ಟ್ ನಡೆಸಿದ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್ ಎಸ್‍ಯುವಿ
ಎಂಜಿ ಮೋಟಾರ್ ಕಂಪನಿಯು ತನ್ನ ಹೆಕ್ಟರ್ ಎಸ್‍ಯುವಿಯನ್ನು ಕಳೆದ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಎಂಜಿ ಹೆಕ್ಟರ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೂಸ ಸಂಚಲನವನ್ನು ಮೂಡಿಸಿತ್ತು.

ಇತ್ತೀಚೆಗೆ ಹೊಸ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್ ವಡೋದರಾದಲ್ಲಿ ಸ್ಪಾಟ್ ಟೆಸ್ಟ್ ನಡೆಸಿದೆ. ಹೊಸ ಎಂಜಿ ಹೆಕ್ಟರ್ ಫೇಸ್‌ಲಿಫ್ಟ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ.ಕೆಲವು ಸೂಕ್ಷ ಕಾಸ್ಮೆಟಿಕ್ ಬದಲಾವಣೆಗಳನ್ನು ಮಾಡಲಾಗಿದೆ. ಈ ಎಸ್‍ಯುವಿಯ ಮುಂಭಾಗದ ಗ್ರಿಲ್ ಅನ್ನು ನವೀಕರಿಸಲಾಗಿದೆ. ಆದರೆ ಗ್ರಿಲ್‌ನಲ್ಲಿನ ಕ್ರೋಮ್ ವಿಭಜಿಸಲಾದ ಹೆಡ್‌ಲ್ಯಾಂಪ್‌ಗಳ ವಿನ್ಯಾಸ ಮತ್ತು ಮುಂಭಾಗದ ಬಂಪರ್ ಇತ್ಯಾದಿಗಳು ಮೊದಲಿನಂತೆಯೇ ಇರುತ್ತವೆ

ಹೊಸ 17 ಇಂಚಿನ ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ಅನ್ನು ಕೂಡ ಹೊಂದಿದೆ. ಅದನ್ನು ಹೊರತುಪಡಿಸಿ ಎಸ್‍ಯುವಿಯ ಸೈಡ್ ಪ್ರೊಫೈಲ್ ಸಂಪೂರ್ಣವಾಗಿ ಬದಲಾಗುವುದಿಲ್ಲ. ಹಿಂಭಾಗದ ವಿಭಾಗ, ಟೈಲ್‌ಲ್ಯಾಂಪ್‌ಗಳ ನಡುವಿನ ಪಟ್ಟಿಯಲ್ಲಿ ಒಂದೇ ವ್ಯತ್ಯಾಸವಿದೆ. ಪ್ರಸ್ತುತ ಮಾದರಿಯು ಟೈಲ್‌ಲೈಟ್‌ಗಳ ನಡುವೆ ಅಡ್ಡಲಾಗಿ ರೆಡ್ ಸ್ಟ್ರಿಪ್ ಅನ್ನು ಹೊಂದಿದೆ.

ದಪ್ಪ ಕ್ರೋಮ್ ಅಂಡರ್ಲೈನ್ ಹೊಂದಿರುವ ಬ್ಲ್ಯಾಕ್ ಸ್ಟ್ರೀಪ್ ಅನ್ನು ಹೊಂದಿದೆ. ಹಿಂಭಾಗದ ಬಂಪರ್, ರಿಫ್ಲೆಕ್ಟರ್‌ಗಳು ಇತ್ಯಾದಿಗಳು ಬದಲಾಗುವುದಿಲ್ಲ. ಎಂಜಿ ಹೆಕ್ಟರ್ ಫೇಸ್‌ಲಿಫ್ಟ್ ಕೆಲವು ಸಣ್ಣ ಬದಲಾವಣೆಗಳನ್ನು ಮಾತ್ರ ಪಡೆಯುತ್ತದೆ, ಉಳಿದಂತೆ ಯಾವುದೇ ಪ್ರಮುಖ ಬದಲಾವಣೆಗಳನ್ನು ಹೊಂದಿರುವುದಿಲ್ಲ.

ಎಂಜಿ ಹೆಕ್ಟರ್ ಎಸ್‍ಯುವಿಯಲ್ಲಿ 1.5 ಲೀಟರ್ ಟಬೋಜಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 143 ಬಿಹೆಚ್‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ. ಇನ್ನು ಈ ಎಸ್‍ಯುವಿಯ 2.0 ಲೀಟರ್ 143 ಬಿಹೆಚ್‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.

ಸದ್ಯ ಮಾರುಕಟ್ಟೆಯಲ್ಲಿರುವ ಎಸ್‍ಯುವಿನಲ್ಲಿ ಲೈವ್ ಟ್ರಾಫಿಕ್ ಅಲರ್ಟ್‍ಗಳು, ಟಯರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ(ಟಿಪಿಎಂಎಸ್), ಜಿಯೋ-ಫೆನ್ಸಿಂಗ್, ತುರ್ತು ಕರೆ, ಸಾಮಾನ್ಯ ಸಹಾಯಕ್ಕಾಗಿ ಸಂಪರ್ಕಿಸಲು ಒಂದು ಬಟನ್ ಮತ್ತು ಪ್ರೀಮಿಯಂ ಗಾನಾ ಆ್ಯಪ್‍ನ ವೈವಿಧ್ಯಮಯ ಮ್ಯೂಸಿಕ್ ಸಂಗ್ರಹ, ಆನ್-ಬೋರ್ಡ್ ನ್ಯಾವಿಗೇಷನ್ ಫೀಚರ್ ಅನ್ನು ಹೊಂದಿದೆ.

ಸ್ಮಾರ್ಟ್‍ಪೋನ್ ಅಪ್ಲಿಕೇಶನ್ ಮತ್ತು ವಾಯ್ಸ್ ಕಾಮೆಂಡ್‍ಗಳ ಮೂಲಕ ಎಸ್‍ಯುವಿ ವಿವಿಧ ಫಿಚರ್ ಗಳನ್ನು ನಿಯಂತ್ರಿಸಬಹುದು. ಇದರಲ್ಲಿ ಎಸಿ, ಸನ್‍ರೂಫ್, ಟೈಲ್‍ಗೇಟ್ ಮತ್ತು ಡೋರ್‍ಗಳು ಸೇರಿವೆ. ಇದರಲ್ಲಿ ಬ್ಲ್ಯಾಕ್ ಕಲರ್ ಥೀಮ್ ಹೊಂದಿರುವ ಇಂಟರಿಯರ್‍ನೊಂದಿಗೆ ಆಡಿಯೋ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಇನ್ಫೋಟೇನ್‌ಮೆಂಟ್ ಕಂಟ್ರೋಲ್, ಆಟೋ ಎಸಿ, 10.4 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೇನ್‌ಮೆಂಟ್ ಡಿಸ್‍ಪ್ಲೇ ಸೌಲಭ್ಯವಿದೆ.

ಹೆಕ್ಟರ್ ಎಸ್‍ಯುವಿಯಲ್ಲಿ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದ್ದು, ಏರ್‍ಬ್ಯಾಗುಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಫ್ರಂಟ್ ಆಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರೇರ್ ಪಾರ್ಕಿಂಗ್ ಕ್ಯಾಮೆರಾ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಸೌಲಭ್ಯವನ್ನು ಒದಗಿಸಲಾಗಿದೆ.

ಜನಪ್ರಿಯ ಎಂಜಿ ಹೆಕ್ಟರ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ಜೀಪ್ ಕಂಪಾಸ್, ಮಹೀಂದ್ರಾ ಎಕ್ಸ್‌ಯುವಿ 500 ಮತ್ತು ಟಾಟಾ ಹ್ಯಾರಿಯರ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.
Image Courtesy: Barodian boy Jatin