ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2021ರ ಟಾಟಾ ನೆಕ್ಸಾನ್

ಟಾಟಾ ಮೋಟಾರ್ಸ್ ಕಂಪನಿಯ ಕಾರುಗಳ ಸರಣಿಯಲ್ಲಿ ನೆಕ್ಸಾನ್ ಜನಪ್ರಿಯವಾದ ಸಬ್-ಕಾಂಪ್ಯಾಕ್ಟ್ ಯುವಿಗಳಲ್ಲಿ ಒಂದಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಸಬ್=ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಜನಪ್ರಿಯ ಮಾದರಿಗಳ ನಡುವೆ ಪೈಪೋಟಿ ಹೆಚ್ಚಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2021ರ ಟಾಟಾ ನೆಕ್ಸಾನ್

ಅದರಲ್ಲಿಯು ಕಿಯಾ ಸೊನೆಟ್ ಸಬ್ ಕಾಂಪ್ಯಾಕ್ಟ್ ಎಸ್‍ಯುವಿಯು ನೆಕ್ಸಾನ್ ಮಾದರಿಗೆ ಪ್ರಬಲ ಪೈಪೋಟಿಯನ್ನು ನೀಡುತ್ತದೆ. ಇನ್ನು ನಿಸ್ಸಾನ್ ಮ್ಯಾಗ್ನೈಟ್ ಮಾದರಿಯು ಕೂಡ ಭರ್ಜರಿ ಪೈಪೋಟಿ ನೀಡುತ್ತದೆ, ನಿಸ್ಸಾನ್ ಮ್ಯಾಗ್ನೈಟ್ ಮಾದರಿಯು ಬಿಡುಗಡೆಯಾದ ಕೇವಲ 15 ದಿನಗಳಲ್ಲಿ 10 ಸಾವಿರ ಬುಕ್ಕಿಂಗ್ ಅನ್ನು ಪಡೆದುಕೊಂಡಿದೆ. ಇದರಿಂದಾಗಿ ಟಾಟಾ ತನ್ನ ನೆಕ್ಸಾನ್ ಮಾದರಿಯ ಮಾರಾಟವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2021ರ ಟಾಟಾ ನೆಕ್ಸಾನ್

ಹೊಸ ಟಾಟಾ ನೆಕ್ಸಾನ್ ಕಾರು ಪುಣೆ ಬಳಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಹೊಸ ಟಾಟಾ ನೆಕ್ಸಾನ್ ಕಾರು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಇದು ಟಾಟಾ ನೆಕ್ಸಾನ್ ಡಿಸಿಟಿ ರೂಪಾಂತರವಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2021ರ ಟಾಟಾ ನೆಕ್ಸಾನ್

ಟಾಟಾ ಮೋಟಾರ್ಸ್ ತನ್ನ ನೆಕ್ಸಾನ್ ಡಿಸಿಟಿ ರೂಪಾಂತರ ಮುಂದಿನ ವರ್ಷ ಬಿಡುಗಡೆ ಮಾಡಲು ಯೋಜಿಸುತ್ತಿದೆ. ಈಗಾಗಲೇ ಟಾಟಾ ತನ್ನ ಆಲ್ಟ್ರೊಜ್ ಮಾದರಿಯನ್ನು ಡಿಸಿಟಿ ಗೇರ್‌ಬಾಕ್ಸ್ ಆಯ್ಕೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ, ಇದು ಟರ್ಬೊ ರೂಪಾಂತರದಲ್ಲಿ ಲಭ್ಯವಾಗಲಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2021ರ ಟಾಟಾ ನೆಕ್ಸಾನ್

ಇದೇ ಸೆಟಪ್ ಅನ್ನು ನೆಕ್ಸಾನ್‌ಗೂ ಬಳಸಿಕೊಳ್ಳುವ ಸಾಧ್ಯತೆಯಿದೆ. ಟಾಟಾ ನೆಕ್ಸಾನ್ ಕಾರಿನಲ್ಲಿ ಈಗಗಾಲೇ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2021ರ ಟಾಟಾ ನೆಕ್ಸಾನ್

ಇನ್ನು 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 260 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಅಥವಾಆ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2021ರ ಟಾಟಾ ನೆಕ್ಸಾನ್

ಇನ್ನು ಹೊಸ ಟಾಟಾ ನೆಕ್ಸಾನ್ ಮಾದರಿಯಲ್ಲಿ ಡಿಸಿಟಿ ರೂಪಾಂತರವಾಗಿರಲಿದೆ. ಉತ್ಸಾಹಭರಿತ ಚಾಲನೆ, ಕಾರ್ಯಕ್ಷಮತೆ ಮತ್ತು ಆಟೋಮ್ಯಾಟಿಕ್ ಅನುಕೂಲಕ್ಕಾಗಿ ಬಯಸುವವರು ಡಿಸಿಟಿ ರೂಪಾಂತರಗಳನ್ನು ಆರಿಸಿಕೊಳ್ಳಬಹುದು.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2021ರ ಟಾಟಾ ನೆಕ್ಸಾನ್

ಆದರೆ ಕೈಗೆಟುಕುವ ವೆಚ್ಚದಲ್ಲಿ ಆಟೋಮ್ಯಾಟಿಕ್ ಅನುಕೂಲವನ್ನು ಬಯಸುವವರು ಎಎಂಟಿ ರೂಪಾಂತರದ ಮೊರೆಹೋಗಬಹುದು. ಟಾಟಾ ನೆಕ್ಸಾನ್ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯನ್ನು 2017ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿತ್ತು.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2021ರ ಟಾಟಾ ನೆಕ್ಸಾನ್

ಅಂದಿನಿಂದ ಇದು ಅಪಾರ ಜನಪ್ರಿಯತೆಯನ್ನು ಗಳಿಸಿದೆ. 2018ರಲ್ಲಿ ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ 5-ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ ಕಾರಣ ನೆಕ್ಸಾನ್ ದೇಶದ ಸುರಕ್ಷಿತ ಕಾರುಗಳಲ್ಲಿ ಒಂದಾಗಿದೆ. 5-ಸ್ಟಾರ್ ಸುರಕ್ಷತಾ ರೇಟಿಂಗ್ ಪಡೆದ ರೇಟಿಂಗ್‌ ಅನ್ನು ಪಡೆದ ಭಾರತದ ಮೊದಲ ಕಾರು ಎಂಬ ಹೆಗ್ಗಳಿಕೆ ನೆಕ್ಸಾನ್ ಮಾದರಿಗೆ ಸಲ್ಲುತ್ತದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2021ರ ಟಾಟಾ ನೆಕ್ಸಾನ್

ಟಾಟಾ ಮೋಟಾರ್ಸ್ ಕಾರುಗಳ ಸರಣಿಯಲ್ಲಿ ಜನಪ್ರಿಯ ಮಾದರಿಗಳ ಪಟ್ಟಿಯಲ್ಲಿ ನೆಕ್ಸಾನ್ ಕಾಂಪ್ಯಾಕ್ಟ್-ಎಸ್‍ಯುವಿಯು ಅಗ್ರಸ್ಥಾನದಲ್ಲಿದೆ. ಟಾಟಾ ತನ್ನ ನೆಕ್ಸಾನ್ ಮಾದರಿಯ ಎಕ್ಸ್‌ಎಂ(ಎಸ್) ಎಂಬ ಹೊಸ ವೆರಿಯೆಂಟ್ ಅನ್ನು ಕೂಡ ಇತ್ತೀಚೆಗೆ ಪರಿಚಯಿಸಿತು.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2021ರ ಟಾಟಾ ನೆಕ್ಸಾನ್

ಎಲೆಕ್ಟ್ರಿಕ್ ಸನ್‌ರೂಫ್ ಸೇರ್ಪಡೆಯ ಹೊರತಾಗಿ, ಹೊಸ ನೆಕ್ಸನ್ ಎಕ್ಸ್‌ಎಂ(ಎಸ್) ವರಿಯೆಂಟ್‌ನಲ್ಲಿ ಹಲವು ಪ್ರೀಮಿಯಂ ಫೀಚರ್ ಗಳನ್ನು ಹೊಂದಿದೆ. ಈ ಎಕ್ಸ್‌ಎಂ(ಎಸ್) ವೆರಿಯೆಂಟ್‌ನಲ್ಲಿ ಹೆಡ್‌ಲ್ಯಾಂಪ್, ರೈನ್-ಸೆನ್ಸಿಂಗ್ ವೈಪರ್‌ಗಳು ಮತ್ತು ಸ್ಟೀಯರಿಂಗ್-ಮೌಂಟಡ್ ಕಂಟ್ರೋಲ್ ಗಳನ್ನು ಒಳಗೊಂಡಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2021ರ ಟಾಟಾ ನೆಕ್ಸಾನ್

ಹೊಸ ಟಾಟಾ ನೆಕ್ಸನ್ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ. ಟಾಟಾ ನೆಕ್ಸಾನ್ ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೊನೆಟ್ ಕಾಂಪ್ಯಾಕ್ಟ್ ಎಸ್‍ಯುವಿಗೆ ಉತ್ತಮ ಪೈಪೋಟಿಯನ್ನು ನೀಡುತ್ತಿದೆ.

Image Courtesy: Sidharth Bandewar

Most Read Articles

Kannada
English summary
2021 Tata Nexon Spied Testing In Pune. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X