Just In
- 19 min ago
ಐಷಾರಾಮಿ ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತ ಪೊಲೀಸ್ ಕಾನ್ಸ್ಟೆಬಲ್ಗಳು
- 1 hr ago
ಭಾರತದಲ್ಲಿ 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಬಿಡುಗಡೆ ಮಾಡಿದ ಬಿಎಂಡಬ್ಲ್ಯು
- 2 hrs ago
2020ರ ಡಿಸೆಂಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾದ ಟಾಟಾ ಹ್ಯಾರಿಯರ್
- 3 hrs ago
ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ
Don't Miss!
- News
ಗಡಿಯಲ್ಲಿ ಮತ್ತೆ ಶಿವಸೇನೆ ಪುಂಡಾಟ; ಕರ್ನಾಟಕ ಪ್ರವೇಶ ಯತ್ನ ವಿಫಲ
- Movies
ಫೆಬ್ರವರಿ ಟು ಮೇ: ಸ್ಟಾರ್ಸ್ ಚಿತ್ರಗಳ ರಿಲೀಸ್ ದಿನಾಂಕ ಫಿಕ್ಸ್, ಡೇಟ್ ಈಗಲೇ ಲಾಕ್ ಮಾಡ್ಕೊಳ್ಳಿ!
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈಯ್ನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಹುನಿರೀಕ್ಷಿತ 2021ರ ಟೊಯೊಟಾ ಫಾರ್ಚೂನರ್ ಎಸ್‍ಯುವಿ ಮಾಹಿತಿ ಬಹಿರಂಗ
ಟೊಯೊಟಾ ಕಂಪನಿಯು ತನ್ನ ಬಹುನಿರೀಕ್ಷಿತ 2021ರ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು 2021ರ ಜನವರಿ 6 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ.

ಬಿಡುಗಡೆಯಾಗುವ ಮುನ್ನ ಈ ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಕೆಲವು ಮಾಹಿತಿಗಳು ಬಹಿರಂಗವಾಗಿವೆ. 9 ಬಣ್ಣಗಳು, 10 ರೂಪಾಂತರಗಳು ಮತ್ತು ಎರಡು ಎಂಜಿನ್ ಮತ್ತು ಮೂರು ಗೇರ್ ಬಾಕ್ಸ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ ಎಸ್‍ಯುವಿಯಾಗಿದೆ. ಟೊಯೊಟಾ ಫಾರ್ಚೂನರ್ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ.

ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 2.8 ಎಲ್ ಟರ್ಬೊ ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 204 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಇದರೊಂದಿಗೆ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 2.7 ಎಲ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 164 ಬಿಹೆಚ್‌ಪಿ ಮತ್ತು 245 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಇನ್ನು ಈ ಎರಡು ಎಂಜಿನ್ ಗಳ ಜೊತೆಯಲ್ಲಿ 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿರುತ್ತದೆ. ಇನ್ನು ಇದರಲ್ಲಿ 2 ಡಬ್ಲ್ಯುಡಿ ಮತ್ತು 4ಡಬ್ಲ್ಯುಡಿ(ಫ್ಗೋರ್ ವ್ಹೀಲ್ ಡ್ರೈವ್) ಒಳಗೊಂಡಿರುತ್ತದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು ಪರ್ಲ್ ವೈಟ್, ಸೂಪರ್ ವೈಟ್, ಸ್ಪಾರ್ಕ್ಲಿಂಗ್ ಬ್ಲ್ಯಾಕ್, ಗ್ರೇ ಮೆಟಾಲಿಕ್, ಆಟಿಟ್ಯೂಡ್ ಬ್ಲ್ಯಾಕ್, ಸಿಲ್ವರ್ ಮೆಟಾಲಿಕ್, ಫ್ಯಾಂಟಮ್ ಬ್ರೌನ್ ಮತ್ತು ಬ್ರೌನ್ಜ್ ಎಂಬ ಬಣ್ಣಗಳ ಆಯ್ಕೆಯಲ್ಲಿರುತ್ತದೆ. ಇದರೊಂದಿಗೆ ಮ್ಯಾಟ್ ಬ್ಲ್ಯಾಕ್‌ನೊಂದಿಗೆ ಪರ್ಲ್ ವೈಟ್ ಎಂಬ ಡ್ಯೂಯಲ್ ಟ್ಯೂನ್ ಬಣ್ಣದ ಆಯ್ಕೆಯನ್ನು ಹೊಂದಿರಲಿದೆ.

ಹೀಗೆ ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು ಒಟ್ಟು 9 ಬಣ್ಣಗಳ ಆಯ್ಕೆಯನ್ನು ಹೊಂದಿರಲಿದೆ. ಇನ್ನು ಈ ಎಸ್‍ಯುವಿಯಲ್ಲಿ ಹೊಸ ಆಲ್-ಬ್ಲ್ಯಾಕ್ ಥೀಮ್, ಚಮೋಯಿಸ್ ಮತ್ತು ಬ್ಲ್ಯಾಕ್ & ಮರೂನ್ ಬಣ್ಣಗಳ ಥೀಮ್ ನಿಂದ ಇಂಟಿರಿಯರ್ ಕೂಡಿರಲಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಇನ್ನು ಈ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿ ಹೊರಭಾಗದಲ್ಲಿಯು ಗಮನಾರ್ಹ ಬದಲಾವಣೆಗಳನ್ನು ಮಾಡಲಾಗುತ್ತದೆ. ಈ ಎಸ್‍ಯುವಿಯಲ್ಲಿ ಬೀಫಿಯರ್ ಗ್ರಿಲ್, ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ಹೊಸ ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ದೊಡ್ಡ ಫಾಗ್ ಲ್ಯಾಂಪ್ ಹೌಸಿಂಗ್‌ನೊಂದಿಗೆ ಪರಿಷ್ಕೃತ ಫ್ರಂಟ್ ಬಂಪರ್ ಮತ್ತು ಹೊಸ ಸಿಲ್ವರ್ ಸ್ಕಿಡ್ ಪ್ಲೇಟ್ ಅನ್ನು ಹೊಂದಿರುತ್ತದೆ

ಇನ್ನು ಈ ಎಸ್‍ಯುವಿಯ ಪ್ರಮುಖ ಬದಲಾವಣೆಗಳಲ್ಲಿ ಹೊಸದಾಗಿ ವಿನ್ಯಾಸಗೊಳಿಸಲಾದ ಮಲ್ಟಿ-ಸ್ಪೋಕ್ ಅಲಾಯ್ ವ್ಹೀಲ್ ಗಳು, ಅಪ್ಡೇಟ್ಡ್ ವ್ಹೀಂಗ್ ಮೀರರ್ ಮತ್ತು ಹೊಸ ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಸೇರಿವೆ. ಇನ್ನು ಡೈಮ್ನೆಷನ್ ಅಥವಾ ಆಯಾಮದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗುವುದಿಲ್ಲ.

ಹೊಸ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಹೊಂದಿರುವ ಹೊಸ 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಪಡೆಯಬಹುದು.

ಇನ್ನು ಈ ಹೊಸ ಎಸ್‍ಯುವಿಯಲ್ಲಿ 360 ಡಿಗ್ರಿ ವ್ಯೂ ಕ್ಯಾಮೆರಾ ವ್ಯೂ, ವೈರ್‌ಲೆಸ್ ಫೋನ್ ಚಾರ್ಜರ್, 9-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ, ಎಲೆಕ್ಟ್ರಿಕ್ ಆಗಿ ಹೊಂದಾಣಿಕೆ ಮಾಡಬಹುದಾದ ಮುಂಭಾಗದ ಪ್ರಯಾಣಿಕರ ಸೀಟ್, 7 ಏರ್‌ಬ್ಯಾಗ್‌ಗಳು, ಲೇನ್ ದಿಪೆರ್ಚರ್ ವರ್ನಿಂಗ್, ರೇಡಾರ್-ಗೈಡೆಡ್ ಡೈನಾಮಿಕ್ ಕ್ರೂಸ್ ಕಂಟ್ರೋಲ್ ಮತ್ತು ಇತರ ಫೀಚರ್ ಗಳನ್ನು ಹೊಂದಿರಲಿದೆ.