ಯುರೋಪ್ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಮೈಲಿಗಲ್ಲು
ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ನಿರ್ಣಯದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟವದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ. 2020ರಲ್ಲೇ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಬರೋಬ್ಬರಿ 5 ಲಕ್ಷ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಡೀಸೆಲ್ ಕಾರುಗಳ ಮಾರಾಟದಲ್ಲಿ ಸಾಕಷ್ಟು ಇಳಿಕೆಯಾಗಿದೆ.

ಡೀಸೆಲ್ ಕಾರುಗಳ ಬಳಕೆಗೆ ಹಲವಾರು ನಿರ್ಬಂಧ ವಿಧಿಸುತ್ತಿರುವ ಯುರೋಪ್ ಒಕ್ಕೂಟವು ಎಲೆಕ್ಟ್ಕಿಕ್ ವಾಹನಗಳ ಮಾರಾಟ ಮತ್ತು ಬಳಕೆಗೆ ಸಾಕಷ್ಟು ವಿನಾಯ್ತಿಗಳನ್ನು ನೀಡುತ್ತಿರುವುದೇ ಇವಿ ವಾಹನಗಳ ಬಳಕೆ ಹೆಚ್ಚಳವಾಗಲು ಪ್ರಮುಖ ಕಾರಣವಾಗಿದೆ.

ಮುಂಬರುವ ದಿನಗಳಲ್ಲಿ ಡೀಸೆಲ್ ಜೊತೆಗೆ ಪೆಟ್ರೋಲ್ ವಾಹನಗಳ ಬಳಕೆಯನ್ನು ನಿರ್ಬಂಧಿಸುವತ್ತ ಹಲವಾರು ಹೊಸ ನೀತಿಗಳನ್ನು ಜಾರಿಗೆ ತರಲಾಗುತ್ತಿದ್ದು, ಗ್ರೇಟ್ ಬ್ರಿಟನ್, ಐರ್ಲೆಂಡ್, ಜರ್ಮನ್ ಸೇರಿದಂತೆ ಪ್ರಮುಖ ರಾಷ್ಟ್ರಗಳು 2030ರ ವೇಳೆ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ನಿರ್ಣಯ ಪ್ರಕಟಿಸಿವೆ.

ಮಾಲಿನ್ಯ ತಡೆ ಮತ್ತು ಭವಿಷ್ಯದ ದೃಷ್ಠಿಯಿಂದ ಇಂಧನದ ಮೇಲೆ ಅವಂಲನೆಯನ್ನು ತಪ್ಪಿಸಲು ಎಲೆಕ್ಟ್ರಿಕ್ ಬ್ಯಾಟರಿ ಚಾಲಿತ ವಾಹನಗಳ ಬಳಕೆಯತ್ತ ಗಮನಹರಿಸಲಾಗುತ್ತಿದ್ದು, ಸರ್ಕಾರದ ನಿರ್ಣಯಗಳಿಗೆ ಪೂರಕವಾಗಿ ಆಟೋ ಉತ್ಪಾದನಾ ಕಂಪನಿಗಳು ಸಹ ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಮಾದರಿಗಳ ಮಾರಾಟದೊಂದಿಗೆ ಗ್ರಾಹಕರನ್ನು ಸೆಳೆಯಲು ವ್ಯವಸ್ಥಿತ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯುತ್ತಿರುವುದು ಪ್ರಮುಖ ಬದಲಾವಣೆಗೆ ಕಾರಣವಾಗಿದೆ.

ಹಾಗೆಯೇ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಕಂಪನಿಗಳಿಗೆ ಪ್ರೋತ್ಸಾಹ ಧನ ಮತ್ತು ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಗರಿಷ್ಠ ಪ್ರಮಾಣದ ಸಬ್ಸಡಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಇದು ಸಹಜವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬದಲಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಪ್ರೋತ್ಸಾಹಿಸುತ್ತಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಭಾರತದಲ್ಲೂ ಈಗಾಗಲೇ ಎಲೆಕ್ಟ್ರಿಕ್ ವಾಹನಗಳನ್ನು ಪ್ರೋತ್ಸಾಹಿಸಲು ಫೇಮ್ 2 ಯೋಜನೆಯನ್ನು ಜಾರಿಗೆ ತರಲಾಗಿದ್ದು, ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದೆ.

ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯನ್ನು ಹೊರತುಪಡಿಸಿ ದೆಹಲಿ ಸರ್ಕಾರವು ತನ್ನದೇ ಆದ ಎಲೆಕ್ಟ್ರಿಕ್ ವಾಹನ ನೀತಿ ಮೂಲಕ ಮಹತ್ವದ ಬದಲಾವಣೆಯತ್ತ ಹೆಜ್ಜೆಯಿರಿಸಿದ್ದು, ಫೇಮ್ 2 ಯೋಜನೆಗಿಂತಲೂ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ದೆಹಲಿ ಸರ್ಕಾರವು ಹೊಸ ಇವಿ ಪಾಲಿಸಿ ಅಡಿ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ನೋಂದಣಿ ಶುಲ್ಕ ವಿನಾಯ್ತಿ, ರಸ್ತೆ ತೆರಿಗೆ ವಿನಾಯ್ತಿ ಸೇರಿದಂತೆ ಹಲವಾರು ಆಫರ್‌ಗಳನ್ನು ನೀಡುತ್ತಿದ್ದು, ಕೇಂದ್ರ ಸರ್ಕಾರ ಫೇಮ್ 2 ಯೋಜನೆ ಅಡಿಯಲ್ಲಿ ಜಿಎಸ್‌ಟಿ ವಿನಾಯ್ತಿ ಕೂಡಾ ಲಭ್ಯವಿದೆ.


Click it and Unblock the Notifications