ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಕಾರುಗಳು
ಚೀನಾದಿಂದ ಹರಡಲಾರಂಭಿಸಿದ ಕರೋನಾ ವೈರಸ್ ಜಗತ್ತಿನಾದ್ಯಂತ ಆತಂಕ ಹುಟ್ಟಿಸಿದೆ. ಜಗತ್ತನ್ನೇ ತಲ್ಲಣಗೊಳಿಸಿರುವ ಕರೋನಾ ವೈರಸ್‍ದಿಂದ ಆಟೋಮೊಬೈಲ್ ಕ್ಷೇತ್ರಕ್ಕೂ ಪಾರಿಣಾಮಬೀರಿದೆ. ಆಟೋಮೊಬೈಲ್ ಕ್ಷೇತ್ರಕ್ಕೆ ಕರೋನಾ ವೈರಸ್ ಪಾರಿಣಾಮದಿಂದ ಸಾವಿರಾರು ಕೋಟಿ ನಷ್ಟವಾಗಿದೆ.

ಹಲವಾರು ವಾಹನ ಉತ್ಪಾದನಾ ಕಂಪನಿಗಳು ತಮ್ಮ ಜನಪ್ರಿಯ ಮಾದರಿಗಳ ಬಿಡುಗಡೆಯನ್ನು ಕರೋನಾ ವೈರಸ್ ಬೀತಿಯಿಂದ ಮುಂದೂಡಲಾಗಿದೆ. ಕರೋನಾ ಭೀತಿಯಿಂದ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದೆ. ಈ ಲಾಕ್ ಡೌನ್ ಅವಧಿಯು ಮುಗಿದ ಬಳಿಕ ಹಲವಾರು ಜನಪ್ರಿಯ ಮಾದರಿಗಳು ಬಿಡುಗಡೆಯಾಗಲಿದೆ. ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿರುವ ಜನಪ್ರಿಯ ಮಾದರಿಗಳ ಬಗ್ಗೆ ಮಾಹಿತಿ ಇಲ್ಲಿದೆ.

2020ರ ಹೋಂಡಾ ಸಿಟಿ
ವಾಹನ ಉತ್ಪಾದನಾ ಕಂಪನಿಯಾದ ಹೋಂಡಾ ತನ್ನ 2020ರ ಸಿಟಿ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಬಹುನಿರೀಕ್ಷಿತ ಹೊಸ ಹೋಂಡಾ ಸಿಟಿ ಕಾರನಲ್ಲಿ ಹೊಸ ಎಂಜಿನ್ ಆಯ್ಕೆಯೊಂದಿಗೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.
MOST READ: ಬಿಡುಗಡೆಯಾಯ್ತು ಫೋಕ್ಸ್‌ವ್ಯಾಗನ್ ಪೊಲೊ, ವೆಂಟೊ ಟಿಎಸ್‌ಐ ಲಿಮಿಟೆಡ್ ಎಡಿಷನ್ ಮಾದರಿಗಳು

ಮಾರುಕಟ್ಟೆಯಲ್ಲಿರುವ 1.5-ಲೀಟರ್ ಎಸ್‌ಒಹೆಚ್‌ಸಿ ಎಂಜಿನ್‌ಗಿಂತಲೂ ಇದು ಹೆಚ್ಚು ಪವರ್ ಬ್ಯಾಂಡ್ ಹೊಂದಿರಲಿದೆ. ಹೊಸ ಸಿಟಿ ಕಾರಿನಲ್ಲಿ ಡ್ಯುಯಲ್ ಓವರ್‌ಹೆಡ್ ಕ್ಯಾಮ್ ಸೆಟಪ್‌ನೊಂದಿಗೆ ಹೊಸ 1.5-ಲೀಟರ್ ಪೆಟ್ರೋಲ್ ಎಂಜಿನ್(ಎಲ್ 15 ಬಿ) ನೀಡಲಾಗುತದೆ. ಈ ಹೊಸ ಎಂಜಿನ್ 119 ಬಿಎಚ್‌ಪಿ ಮತ್ತು ಸುಮಾರು 155 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ.

2020ರ ಸ್ಕೋಡಾ ಕರೋಕ್
ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಬಹುನಿರೀಕ್ಷಿತ ಹೊಸ ಕರೋಕ್ ಎಸ್‍ಯುವಿಯನ್ನು ಇತ್ತೀಚಿಗೆ ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಈ ಹೊಸ ಕರೋಕ್ ಎಸ್‍ಯುವಿಯನ್ನು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ.
MOST READ: ಭಾರತದಲ್ಲಿ ಬಿಡುಗಡೆಯಾಗಲಿರುವ 4×4 ಆಫ್ ರೋಡ್ ಎಸ್‍ಯುವಿಗಳಿವು

ಈ ಎಸ್‍ಯುವಿಯು 1.5 ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 7 ಸ್ಪೀಡ್ ಡಿಎಸ್‍ಜಿ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಸ್ಕೋಡಾ ಕರೋಕ್ ಎಸ್‍ಯುವಿ ಕಂಪನಿಯ ಎಂಕ್ಯೂಬಿ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿದೆ.

2020ರ ಕಿಯಾ ಸೊನೆಟ್
ಸೆಲ್ಟೊಸ್ ಹಾಗೂ ಕಾರ್ನಿವಾಲ್ ನಂತರ ಮೂರನೇ ಕಾರು ಮಾದರಿಯಾಗಿ ಸೊನೆಟ್ ಕಾನ್ಸೆಪ್ಟ್ ಬಿಡುಗಡೆ ಮಾಡಲು ಅಂತಿಮ ಸಿದ್ದತೆ ನಡೆಸಿರುವ ಕಿಯಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಹೊಸ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.
MOST READ: ಹೊಸ ಮಹೀಂದ್ರಾ ಕಾರುಗಳ ಮೇಲೆ ಭರ್ಜರಿ ರಿಯಾಯಿತಿ

ಈ ಹೊಸ ಕಾರಿನಲ್ಲಿ ಒಟ್ಟು 4 ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ಇದರಲ್ಲಿ 1.2-ಲೀಟರ್ ಪೆಟ್ರೋಲ್ ನ್ಯಾಚುರಲಿ ಆಸ್ಪೆರೆಟೆಡ್ ಫೋರ್ ಸಿಲಿಂಡರ್ ಮತ್ತು 1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಫೋರ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ.ಇದರೊಂದಿಗೆ 1.5-ಲೀಟರ್ ಟರ್ಬೋಚಾರ್ಜ್ಡ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಮತ್ತು 1.0-ಲೀಟರ್ ಟರ್ಬೋ ಚಾರ್ಜ್ಡ್ ತ್ರೀ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿರಲಿದೆ.

2020ರ ಮಹೀಂದ್ರಾ ಥಾರ್
ಬಹುನಿರೀಕ್ಷಿತ ಐಕಾನಿಕ್ ಆಫ್-ರೋಡರ್ 2020ರ ಥಾರ್ ಅನ್ನು ಬಿಡುಗಡೆಗೊಳಿಸುವುದಕ್ಕೆ ಮಹೀಂದ್ರಾ ಕಂಪನಿಯು ಸಜ್ಜಾಗಿದೆ. ಲಾಕ್‌ಡೌನ್ ಮುಗಿದ ನಂತರ ಮಹೀಂದ್ರಾ ಕಂಪನಿಯು ಬಿಡುಗಡೆಗೊಳಿಸುವ ಮೊದಲ ವಾಹನ ಈ 2020ರ ಥಾರ್ ಆಗಲಿದೆ . ಹೊಸ ಥಾರ್ 120 ಬಿಹೆಚ್‌ಪಿ ಪವರ್ ಉತ್ಪಾದಿಸುವ 2.0 ಲೀಟರ್ ಡೀಸೆಲ್ ಬಿಎಸ್ 6 ಎಂಜಿನ್ ಹೊಂದಿರಲಿದೆ.

ಟೊಯೊಟಾ ಅರ್ಬನ್ ಕ್ರೂಸರ್
ಮಾರುತಿ ಸುಜುಕಿ ಮತ್ತು ಟೊಯೊಟಾ ಕಂಪನಿಗಳು ಇದೀಗ ಸಹಭಾಗಿತ್ವದ ಯೋಜನೆ ಅಡಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯೊಂದನ್ನು ಬಿಡುಗಡೆಗೊಳಿಸಲಿದೆ. ಈ ಎಸ್‍ಯುವಿಯು 1.5-ಲೀಟರ್ ಕೆ-ಸೀರಿಸ್ ಹೊಂದಿರಲಿದೆ.


Click it and Unblock the Notifications








