Just In
- 22 min ago
ರೋಡ್ ಟೆಸ್ಟಿಂಗ್ನಲ್ಲಿ ಕಂಡುಬಂದ ಹ್ಯುಂಡೈ ಕ್ರೆಟಾ 7 ಸೀಟರ್ ವರ್ಷನ್
- 12 hrs ago
ಬಿಡುಗಡೆಗೆ ಸಜ್ಜಾದ ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ ಬೈಕುಗಳು
- 12 hrs ago
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಫೋರ್ಸ್ ನ್ಯೂ ಜನರೇಷನ್ ಗೂರ್ಖಾ
- 12 hrs ago
ಸೀಮನ್ಸ್ ಕಂಪನಿಯ ಜೊತೆಗೂಡಿ ಆಧುನಿಕ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕವನ್ನು ಅಭಿವೃದ್ದಿಪಡಿಸಲಿದೆ ಓಲಾ
Don't Miss!
- News
ಚಿನ್ನ ಕಳ್ಳಸಾಗಣೆ: 28 ಕೋಟಿ ರೂಪಾಯಿ ಮೌಲ್ಯದ 55.61 ಕೆಜಿ ಚಿನ್ನ ವಶಪಡಿಸಿಕೊಂಡ DRI
- Movies
ಸ್ಯಾಂಡಲ್ ವುಡ್ ಸುಂದರಿಯರು; ಅಪರೂಪದ ಫೋಟೋ ಹಂಚಿಕೊಂಡ ಮಾಲಾಶ್ರೀ, ಶ್ರುತಿ
- Lifestyle
ಶುಕ್ರವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್
- Sports
ಐಎಸ್ಎಲ್: ಈಸ್ಟ್ ಬೆಂಗಾಲ್ ಅಜೇಯ ನಡೆಗೆ ಬೆಸ್ಟ್ ಮುಂಬೈ ಸವಾಲು
- Finance
ಬಜೆಟ್ 2021: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಜನವರಿ 30ರಂದು ಸರ್ವ ಪಕ್ಷಗಳ ಸಭೆ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2020ರ ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿವೆ ಟಾಪ್ 5 ಕಾರು ಮಾದರಿಗಳು..
ಭಾರತೀಯ ಆಟೋ ಉದ್ಯಮವು ಲಾಕ್‌ಡೌನ್ ವಿನಾಯ್ತಿ ನಂತರ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ಲಾಕ್‌ಡೌನ್ ಸಂದರ್ಭದಲ್ಲಿ ಬಿಡುಗಡೆಯಾಗಬೇಕಿದ್ದ ಹಲವು ಹೊಸ ವಾಹನಗಳು ಇದೀಗ ಬಿಡುಗಡೆಗೆ ಸಿದ್ದವಾಗಿವೆ.

ಕರೋನಾ ವೈರಸ್‌ನಿಂದಾಗಿ ತೀವ್ರ ಹಿನ್ನಡೆ ಅನುಭವಿಸಿರುವ ಭಾರತೀಯ ಆಟೋ ಉದ್ಯಮವು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಚೇತರಿಸಿಕೊಳ್ಳುತ್ತಿದ್ದು, ಆರ್ಥಿಕ ಸಂಕಷ್ಟದ ನಡುವೆ ಸುರಕ್ಷಿತ ವ್ಯಾಪಾರ-ವಹಿವಾಟು ಹೊಸ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಬಹುತೇಕ ಆಟೋ ಕಂಪನಿಗಳು ಹೊಸ ವಾಹನಗಳ ಬಿಡುಗಡೆಯನ್ನು ಮುಂದೂಡಿಕೆ ಮಾಡಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ವಾಹನ ಮಾದರಿಗಳ ಮಾರಾಟದ ಮೇಲೆ ಗಮನಹರಿಸಿವೆ.

ಇನ್ನು ಕೆಲವು ಆಟೋ ಕಂಪನಿಗಳು ಆಟೋ ಉದ್ಯಮವು ಮುಂದಿನ ಕೆಲವೇ ದಿನಗಳಲ್ಲಿ ಸಹಜ ಸ್ಥಿತಿಯತ್ತ ಮರಳುವ ವಿಶ್ವಾಸದೊಂದಿಗೆ ಹೊಸ ವಾಹನಗಳ ಬಿಡುಗಡೆಗೆ ನಿಧಾನವಾಗಿ ಮರುಚಾಲನೆ ನೀಡುತ್ತಿದ್ದು, ಅಗಸ್ಟ್ ಅವಧಿಯಲ್ಲಿ ವಿವಿಧ ಮಾದರಿಯ ಹಲವು ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸಲಿವೆ.

01. ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ವರ್ಷನ್
ಮಾರುತಿ ಸುಜುಕಿ ಕಂಪನಿಯು ತನ್ನ ಹೊಸ ಎಸ್-ಕ್ರಾಸ್ ಪೆಟ್ರೋಲ್ ಕಾರು ಮಾದರಿಯನ್ನು ಮುಂದಿನ ತಿಂಗಳು ಅಗಸ್ಟ್ 5ಕ್ಕೆ ಬಿಡುಗಡೆ ಮಾಡಲಿದ್ದು, ಹೊಸ ಕಾರು ಈ ಬಾರಿ ಪೆಟ್ರೋಲ್ ಎಂಜಿನ್ ಮಾತ್ರವಲ್ಲದೆ ಸಾಕಷ್ಟು ಹೊಸ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಹೊಸ ಎಸ್-ಕ್ರಾಸ್‌ನಲ್ಲಿ ಈ ಬಾರಿ ಪೆಟ್ರೋಲ್ ಮಾದರಿಯನ್ನು ಮಾತ್ರವೇ ಪರಿಚಯಿಸಲಾಗುತ್ತಿದ್ದು, ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿರುವ ಬಿಎಸ್-6 ಎಮಿಷನ್ ಜಾರಿಯಿಂದಾಗಿ ಈ ಹಿಂದಿ ನೀಡಲಾಗುತ್ತಿದ್ದ 1.3-ಲೀಟರ್ ಡೀಸೆಲ್ ಎಂಜಿನ್ ಅನ್ನು ಸ್ಥಗಿತಗೊಳಿಸಲಾಗಿದೆ. ಎಸ್-ಕ್ರಾಸ್ ಮಾತ್ರವಲ್ಲದೆ ಮಾರುತಿ ಸುಜುಕಿ ನಿರ್ಮಾಣದ ಎಲ್ಲಾ ಕಾರು ಮಾದರಿಗಳಲ್ಲೂ ಇದೀಗ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಲಾಗಿದ್ದು, ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಆಯ್ಕೆಗಳನ್ನು ನೀಡಲಾಗುತ್ತಿದೆ.

02. ಕಿಯಾ ಸೊನೆಟ್ ಕಾನ್ಸೆಪ್ಟ್
ಅಗಸ್ಟ್ 7ರಂದು ತನ್ನ ಹೊಸ ಕಾರು ಮಾದರಿಯಾದ ಸೊನೆಟ್ ಕಾನ್ಸೆಪ್ಟ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣಕ್ಕಾಗಿ ಕಿಯಾ ಮೋಟಾರ್ಸ್ ಕಂಪನಿಯು ಭರ್ಜರಿ ಸಿದ್ದತೆಯಲ್ಲಿದ್ದು, ಕಿಯಾ ಮೋಟಾರ್ಸ್ ಕಂಪನಿಯು ಹೊಸ ಕಾರನ್ನ ಅನಾವರಣಗೊಳಿಸಿದ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಿದೆ.

ಹೊಸ ಸೊನೆಟ್ ಕಾನ್ಸೆಪ್ಟ್ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಜನಪ್ರಿಯ ಹ್ಯುಂಡೈ ವೆನ್ಯೂ, ಮಾರುತಿ ಬ್ರೆಝಾ, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಟಾಟಾ ನೆಕ್ಸಾನ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಕಾರಿನ ಬೆಲೆ ಕೂಡಾ ಆಕರ್ಷಕವಾಗಿರಲಿದೆ ಎನ್ನಲಾಗಿದೆ.
MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

03. ಹೋಂಡಾ ಜಾಝ್
ಹೋಂಡಾ ಕಂಪನಿಯು ಕೂಡಾ ತನ್ನ ಬಿಎಸ್-6 ಕಾರು ಮಾದರಿಯನ್ನು ತಡವಾಗಿ ಅಪ್‌ಡೇಟ್ ಮಾಡುತ್ತಿದ್ದು, ಜಾಝ್ ಫೇಸ್‌ಲಿಫ್ಟ್ ಕಾರು ಮಾದರಿಯು ಕೂಡಾ ಈ ಬಾರಿ ಹಲವು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ಗಮನಸೆಳೆಯುವ ವಿಶ್ವಾಸದಲ್ಲಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

04. ರೆನಾಲ್ಟ್ ಡಸ್ಟರ್ ಟರ್ಬೋ
ರೆನಾಲ್ಟ್ ಕಂಪನಿಯು ಕಂಪನಿಯು ಈಗಾಗಲೇ ಬಿಎಸ್-6 ಡಸ್ಟರ್ ಮಾದರಿಯಲ್ಲಿ 1.5-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಮಾರಾಟ ಮಾಡುತ್ತಿದ್ದು, ಅಗಸ್ಟ್ ಮಧ್ಯಂತರದಲ್ಲಿ ಹೊಸದಾಗಿ ಅಭಿವೃದ್ದಿಗೊಳಿಸಲಾದ 1.3-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯನ್ನು ಕೂಡಾ ಪಡೆದುಕೊಳ್ಳಲಿದೆ.

ಹೊಸ 1.3-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯು 7-ಸ್ಟೇಪ್ ಎಂ-ಮೋಡ್ ಟ್ರಾನ್ಸ್‌ಮಿಷನ್‌ನೊಂದಿಗೆ 156-ಬಿಎಚ್‌ಪಿ ಮತ್ತು 254-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಹೊಸ ಎಂಜಿನ್ ಅನ್ನು ರೆನಾಲ್ಟ್ ಮತ್ತು ನಿಸ್ಸಾನ್ ಕಂಪನಿಗಳು ಸಹಭಾಗೀತ್ವದ ಯೋಜನೆ ಅಡಿ ಅಭಿವೃದ್ದಿಗೊಳಿಸಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

05. ಮರ್ಸಿಡಿಸ್ ಬೆಂಝ್ ಇಕ್ಯೂಸಿ
ಮರ್ಸಿಡಿಸ್ ಬೆಂಝ್ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯಾದ ಇಕ್ಯೂಸಿ ಕಳೆದ ಜೂನ್ ತಿಂಗಳಿನಲ್ಲಿಯೇ ಬಿಡುಗಡೆಯಾಗಬೇಕಿತ್ತು. ಆದರೆ ಕರೋನಾ ವೈರಸ್ ಪರಿಣಾಮ ಇದೀಗ ಬಿಡುಗಡೆಯಾಗುತ್ತಿದ್ದು, ಹೊಸ ಕಾರು ಪ್ರತಿ ಚಾರ್ಜ್ 450 ಕಿ.ಮೀ ಮೈಲೇಜ್ ಸಾಮಾರ್ಥ್ಯದೊಂದಿಗೆ ಡ್ಯುಯಲ್ ಮೋಟಾರ್ ಸೌಲಭ್ಯವನ್ನು ಪೆಡೆದುಕೊಂಡಿದೆ.