2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿವೆ ಟಾಪ್ 5 ಕಾರು ಮಾದರಿಗಳು..

ಆಟೋ ಉದ್ಯಮವು ಲಾಕ್‌ಡೌನ್ ವಿನಾಯ್ತಿ ನಂತರ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ಲಾಕ್‌ಡೌನ್ ಸಂದರ್ಭದಲ್ಲಿ ಬಿಡುಗಡೆಯಾಗಬೇಕಿದ್ದ ಹಲವಾರು ಹೊಸ ವಾಹನ ಮಾದರಿಗಳು ಇದೀಗ ಬಿಡುಗಡೆಗೆ ಅಂತಿಮ ಹಂತದ ಸಿದ್ದತೆಯಲ್ಲಿವೆ.

2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿವೆ ಟಾಪ್ 5 ಕಾರುಗಳು

ಕರೋನಾ ವೈರಸ್‌ನಿಂದಾಗಿ ತೀವ್ರ ಹಿನ್ನಡೆ ಅನುಭವಿಸಿರುವ ಭಾರತೀಯ ಆಟೋ ಉದ್ಯಮವು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಚೇತರಿಸಿಕೊಳ್ಳುತ್ತಿದ್ದು, ಆರ್ಥಿಕ ಸಂಕಷ್ಟದ ನಡುವೆಯೂ ಸುರಕ್ಷಿತ ವ್ಯಾಪಾರ-ವಹಿವಾಟು ಹೊಸ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಬಹುತೇಕ ಆಟೋ ಕಂಪನಿಗಳು ಹೊಸ ವಾಹನಗಳ ಬಿಡುಗಡೆಯನ್ನು ಮುಂದೂಡಿಕೆ ಮಾಡಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ವಾಹನ ಮಾದರಿಗಳ ಮಾರಾಟದ ಮೇಲೆ ಗಮನಹರಿಸಿವೆ.

2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿವೆ ಟಾಪ್ 5 ಕಾರುಗಳು

ಇನ್ನು ಕೆಲವು ಆಟೋ ಕಂಪನಿಗಳು ಆಟೋ ಉದ್ಯಮವು ಮುಂದಿನ ಕೆಲವೇ ದಿನಗಳಲ್ಲಿ ಸಹಜ ಸ್ಥಿತಿಯತ್ತ ಮರಳುವ ವಿಶ್ವಾಸದೊಂದಿಗೆ ಹೊಸ ವಾಹನಗಳ ಬಿಡುಗಡೆಗೆ ನಿಧಾನವಾಗಿ ಮರುಚಾಲನೆ ನೀಡುತ್ತಿದ್ದು, ಸೆಪ್ಟೆಂಬರ್ ಅವಧಿಯಲ್ಲಿ ವಿವಿಧ ಮಾದರಿಯ ಹಲವು ಹೊಸ ಕಾರುಗಳು ಮಾರುಕಟ್ಟೆ ಪ್ರವೇಶಿಸುತ್ತಿವೆ.

2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿವೆ ಟಾಪ್ 5 ಕಾರುಗಳು

ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಕಳೆದ ತಿಂಗಳು ಅನಾವರಣಗೊಂಡಿದ್ದ ಕಿಯಾ ಸೊನೆಟ್ ಕಾರು ಇದೇ ತಿಂಗಳು 18ರಂದು ಬಿಡುಗಡೆಗೊಳ್ಳಲು ಭರ್ಜರಿ ಸಿದ್ದತೆಯಲ್ಲಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನವೇ ಈಗಾಗಲೇ ಸುಮಾರು 15 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಸಲ್ಲಿಕೆಯಾಗಿವೆ.

2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿವೆ ಟಾಪ್ 5 ಕಾರುಗಳು

1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ, 1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಇಂಟೆಲಿಜೆಂಟ್ ಮ್ಯಾನುವಲ್ ಗೇರ್‌ಬಾಕ್ಸ್ ಜೊತೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪಡೆದುಕೊಂಡಿದೆ. ಟರ್ಬೋ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.50 ಲಕ್ಷ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿವೆ ಟಾಪ್ 5 ಕಾರುಗಳು

ಟೊಯೊಟಾ ಅರ್ಬನ್ ಕ್ರೂಸರ್

ಟೊಯೊಟಾ ಕಂಪನಿಯು ಇದೇ ತಿಂಗಳಾಂತ್ಯಕ್ಕೆ ಅರ್ಬನ್ ಕ್ರೂಸರ್ ರೀಬ್ಯಾಡ್ಜ್ ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದವಾಗಿದ್ದು, ಹೊಸ ಕಾರು ಪ್ರಮುಖ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಾಗುವ ಮಾಹಿತಿ ದೊರೆತಿದೆ.

2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿವೆ ಟಾಪ್ 5 ಕಾರುಗಳು

ಮಾಹಿತಿಗಳ ಪ್ರಕಾರ, ಹೊಸ ಅರ್ಬನ್ ಕ್ರೂಸರ್ ಕಾರು ವಿಎಕ್ಸ್ಐ, ಜೆಡ್ಎಕ್ಸ್ಐ ಮತ್ತು ಜೆಎಡ್ಎಕ್ಸ್ಐ ಪ್ಲಸ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, 1.5 ಪೆಟ್ರೋಲ್ ಹೈಬ್ರಿಡ್ ಮಾದರಿಯನ್ನು ಹೊಂದಿರುವ ಹೊಸ ಕಾರು ಮೂಲ ಕಾರಿನ ಬೆಲೆಗಿಂತಲೂ ತುಸು ದುಬಾರಿಯಾಗಲಿದೆ. ಮೂಲ ಕಾರು ಮಾದರಿಯಾದ ವಿಟಾರಾ ಬ್ರೆಝಾಗಿಂತಲೂ ಅತ್ಯುತ್ತಮ ಫೀಚರ್ಸ್ ಹೊಂದಿರುವ ಹೊಸ ಕಾರು ಕ್ರೆಟಾ ಮತ್ತು ಸೆಲ್ಟೊಸ್ ಕಾರಿಗೆ ಪೈಪೋಟಿ ನೀಡುವ ತವಕದಲ್ಲಿವೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿವೆ ಟಾಪ್ 5 ಕಾರುಗಳು

ಸ್ಕೋಡಾ ರ‍್ಯಾಪಿಡ್ ಆಟೋಮ್ಯಾಟಿಕ್

ಸ್ಕೋಡಾ ಕಂಪನಿಯು ಭಾರತದಲ್ಲಿ ತನ್ನ ಜನಪ್ರಿಯ ಸೆಡಾನ್ ಮಾದರಿಯಾದ ರ‍್ಯಾಪಿಡ್ ಬಿಎಸ್-6 ಮಾದರಿಯನ್ನು ಸದ್ಯ 1.0-ಲೀಟರ್ ಪೆಟ್ರೋಲ್ ಮ್ಯಾನುವಲ್ ಆವೃತ್ತಿಯಲ್ಲಿ ಮಾತ್ರ ಮಾರಾಟ ಮಾಡುತ್ತಿದ್ದು, ಇದೀಗ ಪೆಟ್ರೋಲ್ ಮಾದರಿಯಲ್ಲಿ ಆಟೋಮ್ಯಾಟಿಕ್ ಮಾದರಿಯ ಬಿಡುಗಡೆಗೆ ಸಿದ್ದಗೊಂಡಿದೆ.

2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿವೆ ಟಾಪ್ 5 ಕಾರುಗಳು

ಹೊಸ ಕಾರು ಬಿಡುಗಡೆಗೂ ಮುನ್ನ ಅಧಿಕೃತವಾಗಿ ಬುಕ್ಕಿಂಗ್ ಪ್ರಕ್ರಿಯೆ ಚಾಲನೆ ನೀಡಲಾಗಿದ್ದು, ರ‍್ಯಾಪಿಡ್ ಆಟೋಮ್ಯಾಟಿಕ್ ಆವೃತ್ತಿಯು ಈ ತಿಂಗಳ ಕೊನೆಯ ವಾರದಲ್ಲಿ ಬಿಡುಗಡೆಗೊಳ್ಳುವ ಸಾಧ್ಯತೆಗಳಿವೆ. ಸದ್ಯ ಮಾರುಕಟ್ಟೆಯಲ್ಲಿ ಹೊಸ ರ‍್ಯಾಪಿಡ್ ಕಾರು ಮಾದರಿಯು ಬಿಎಸ್-6 ಎಂಜಿನ್‌ನೊಂದಿಗೆ ಭಾರೀ ಬದಲಾವಣೆ ಪಡೆದುಕೊಂಡಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 7.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.11.79 ಲಕ್ಷ ಬೆಲೆಯೊಂದಿಗೆ ಮಾರಾಟಾಗುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿವೆ ಟಾಪ್ 5 ಕಾರುಗಳು

ಆಡಿ ಕ್ಯೂ2 ಎಸ್‌ಯುವಿ

ಆಡಿ ಕಂಪನಿಯು ತನ್ನ ಎಂಟ್ರಿ ಲೆವಲ್ ಎಸ್‌ಯುವಿ ಕಾರು ಮಾದರಿಯಾದ ಕ್ಯೂ2 ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಾರನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತಿರುವ ಆಡಿ ಕಂಪನಿಯು ಹೊಸ ಕಾರಿನ ಟೀಸರ್ ಬಿಡುಗಡೆ ಮಾಡಿದೆ.

2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿವೆ ಟಾಪ್ 5 ಕಾರುಗಳು

ಕ್ಯೂ2 ಎಸ್‌ಯುವಿ ಕಾರು ಮಾದರಿಯು ಸದ್ಯ ಯುರೋಪಿನ ಹಲವು ರಾಷ್ಟ್ರಗಳಲ್ಲಿ ಖರೀದಿಗೆ ಲಭ್ಯವಿದ್ದು, ಈ ಹೊಸ ಕಾರು ಭಾರತದಲ್ಲೂ ಇದೇ ತಿಂಗಳಾಂತ್ಯಕ್ಕೆ ಬಿಡುಗೆಯಾಗುವ ನೀರಿಕ್ಷೆಯಲ್ಲಿದೆ. ಹೊಸ ಕ್ಯೂ2 ಬಿಡುಗಡೆ ಕುರಿತಂತೆ ಈಗಾಗಲೇ ಅಧಿಕೃತ ಮಾಹಿತಿ ಹಂಚಿಕೊಂಡಿರುವ ಆಡಿ ಇಂಡಿಯಾ ಕಂಪನಿಯು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದು, ಹೊಸ ಕಾರು 2.0-ಲೀಟರ್ ಟರ್ಬೋ ಪೆಟ್ರೋಲ್ ಮತ್ತು 2.0-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.32 ಲಕ್ಷದಿಂದ ರೂ.38 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿವೆ ಟಾಪ್ 5 ಕಾರುಗಳು

ಮರ್ಸಿಡಿಸ್ ಬೆಂಝ್ ಇಕ್ಯೂಸಿ

ಮರ್ಸಿಡಿಸ್ ಬೆಂಝ್ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯಾದ ಇಕ್ಯೂಸಿ ಕಳೆದ ಜೂನ್ ತಿಂಗಳಿನಲ್ಲಿಯೇ ಬಿಡುಗಡೆಯಾಗಬೇಕಿತ್ತು. ಆದರೆ ಕರೋನಾ ವೈರಸ್ ಪರಿಣಾಮ ಇದೀಗ ಬಿಡುಗಡೆಯಾಗುತ್ತಿದ್ದು, ಹೊಸ ಕಾರು ಪ್ರತಿ ಚಾರ್ಜ್ 450 ಕಿ.ಮೀ ಮೈಲೇಜ್ ಸಾಮಾರ್ಥ್ಯದೊಂದಿಗೆ ಡ್ಯುಯಲ್ ಮೋಟಾರ್ ಸೌಲಭ್ಯವನ್ನು ಪೆಡೆದುಕೊಂಡಿದೆ.

Most Read Articles

Kannada
English summary
5 Upcoming Car Launches In September 2020. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X