ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 900 ವಾಹನಗಳಿಂದ ರೂ.1.48 ಲಕ್ಷ ದಂಡ ವಸೂಲಿ

ಕರೋನಾ ಸೋಂಕಿತರ ಪ್ರಮಾಣವು ದೇಶಾದ್ಯಂತ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸೋಂಕು ತಡೆಗಾಗಿ ವಿವಿಧ ರಾಜ್ಯಗಳಲ್ಲಿ ಈಗಾಗಲೇ ಕೆಲವು ಕಠಿಣ ನಿಯಮಗಳನ್ನು ಜಾರಿಗೊಳಿಸುವ ಮೂಲಕ ಅಂತರ್‌ರಾಜ್ಯ ಸಾರಿಗೆ ಸಂಪರ್ಕವನ್ನು ಮಿತಗೊಳಿಸಲಾಗಿದೆ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 900 ವಾಹನಗಳಿಗೆ ರೂ.1.48 ಲಕ್ಷ ದಂಡ

ವೈರಸ್ ಹೆಚ್ಚಳದಿಂದಾಗಿ ದೇಶದ ಪ್ರಮುಖ ನಗರಗಳಲ್ಲಿ ಇದೀಗ ಎರಡನೇ ಬಾರಿಗೆ ಕೆಲವು ಷರತ್ತುಗಳೊಂದಿಗೆ ಲಾಕ್‌ಡೌನ್ ವಿಧಿಸಲಾಗಿದ್ದು, ವೈರಸ್ ಹರಡದಂತೆ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಪರಿಸ್ಥಿತಿ ಹೀಗಿದ್ದರೂ ಜನರು ಮಾತ್ರ ಸೋಂಕು ಹತ್ತಿಕ್ಕಲು ಲಾಕ್‌ಡೌನ್ ನಿಯಮಗಳನ್ನು ಪಾಲನೆ ಮಾಡದಿರುವುದು ವೈರಸ್ ಪ್ರಮಾಣದಲ್ಲಿ ಗಣನೀಯ ಹೆಚ್ಚಳಕ್ಕೆ ಕಾರಣವಾಗಿದ್ದು, ಕೆಲವು ಕಡೆಗಳಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸಿದವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತಿದೆ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 900 ವಾಹನಗಳಿಗೆ ರೂ.1.48 ಲಕ್ಷ ದಂಡ

ಸಾರ್ವಜನಿಕರ ಆರೋಗ್ಯ ದೃಷ್ಠಿಯಿಂದ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೆ ತಂದರೂ ವಾಹನ ಸವಾರರು ಮಾತ್ರ ನಿಯಮಗಳನ್ನು ಪಾಲನೆ ಮಾಡದೆ ಸಾಂಕ್ರಾಮಿಕ ರೋಗಕ್ಕೆ ತುತ್ತಾಗುತ್ತಿದ್ದು, ಇತರರಿಗೂ ಸೋಂಕು ಹರಡಿಸುವ ಮೂಲಕ ಮತ್ತಷ್ಟು ಸಂಕಷ್ಟ ಎದುರಾಗುವಂತೆ ಮಾಡುತ್ತಿದ್ದಾರೆ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 900 ವಾಹನಗಳಿಗೆ ರೂ.1.48 ಲಕ್ಷ ದಂಡ

ಹೀಗಾಗಿ ವಿವಿಧ ರಾಜ್ಯಗಳಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ಹಲವು ಕಠಿಣ ನಿಯಮಗಳನ್ನು ಜಾರಿಗೆ ತರಲಾಗುತ್ತಿದ್ದು, ನೋಯ್ಡ ಪೊಲೀಸರು ಅನಾವಶ್ಯಕವಾಗಿ ಓಡಾಡುವ ವಾಹನ ಸವಾರರ ವಿರುದ್ಧ ಒಂದೇ ದಿನದಲ್ಲಿ ಸಾವಿರಾರು ಪ್ರಕರಣಗಳನ್ನು ದಾಖಲಿಸಿದ್ದಾರೆ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 900 ವಾಹನಗಳಿಗೆ ರೂ.1.48 ಲಕ್ಷ ದಂಡ

ತುರ್ತು ಪರಿಸ್ಥಿತಿ ವಾಹನಗಳು ಮತ್ತು ಅಗತ್ಯ ಸೇವೆಯ ಕೆಲವು ಕೆಲವು ವಾಹನಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಮಾದರಿಗಳ ವಾಹನ ಓಡಾಟವನ್ನು ನಿಯಂತ್ರಿಸಲಾಗುತ್ತಿದ್ದು, ನಿಯಮ ಪಾಲನೆ ಮಾಡದ ಸಾವಿರಾರು ವಾಹನಗಳನ್ನು ಸೀಜ್ ಮಾಡಲಾಗಿದೆ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 900 ವಾಹನಗಳಿಗೆ ರೂ.1.48 ಲಕ್ಷ ದಂಡ

ನೋಯ್ಡಾದಲ್ಲಿ ಇದುವರೆಗೆ ಸುಮಾರು 2 ಲಕ್ಷ ವಾಹನ ಸವಾರರಿಂದ ಕೋಟ್ಯಾಂತರ ರೂಪಾಯಿ ದಂಡ ವಸೂಲಿ ಮಾಡಲಾಗಿದ್ದು, ನಿನ್ನೆಯಷ್ಟೇ 900 ವಾಹನಗಳನ್ನು ಸೀಜ್ ಮಾಡುವ ಮೂಲಕ ರೂ.1,48,300 ದಂಡ ವಸೂಲಿ ಮಾಡಲಾಗಿದೆ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 900 ವಾಹನಗಳಿಗೆ ರೂ.1.48 ಲಕ್ಷ ದಂಡ

ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ವಾಹನಗಳು ಓಡಾಡದಂತೆ ನಿಯಂತ್ರಿಸಲು ಬರೋಬ್ಬರಿ 200 ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಅಂತರ್‌ರಾಜ್ಯ ಪ್ರಯಾಣಿಕರ ಮೇಲೆ ತೀವ್ರ ನಿಗಾಯಿಡಲಾಗಿದೆ.

MOST READ: ಇನ್ನು ಕೆಲ ದಿನಗಳಲ್ಲಿ ಕಣ್ಮರೆಯಾಗಲಿವೆ ಕಪ್ಪು-ಹಳದಿ ಟ್ಯಾಕ್ಸಿಗಳು

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 900 ವಾಹನಗಳಿಗೆ ರೂ.1.48 ಲಕ್ಷ ದಂಡ

ಹಾಗೆಯೇ ಮುಂಬೈನಲ್ಲೂ ವೈರಸ್ ತಡೆಯುವುದಕ್ಕಾಗಿ ವಾಹನ ಸವಾರರು ತಮ್ಮ ವಾಸದ ಸ್ಥಳದಿಂದ 2 ಕಿ.ಮೀ ವ್ಯಾಪ್ತಿ ಮೀರಿ ಹೊರಹೋಗದಂತೆ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಅನಾಶ್ಯಕವಾಗಿ ಹೊರಹೋಗುವ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 900 ವಾಹನಗಳಿಗೆ ರೂ.1.48 ಲಕ್ಷ ದಂಡ

ಮುಂಬೈ ಪೊಲೀಸರು ಕಳೆದ ಭಾನುವಾರದಿಂದಲೇ ಕೆಲವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಹೊಸ ಮಾರ್ಗಸೂಚಿಗಳ ಅನ್ವಯ ಯಾವುದೇ ವಾಹನ ಸವಾರರು ಕಾರಣವಿಲ್ಲದೆ ಮನೆಯಿಂದ ಹೊರ ಬಂದರೆ ಕಠಿಣ ಕ್ರಮ ಎದುರಿಸುವಂತಹ ನಿಯಮ ಜಾರಿಗೆ ತರಲಾಗಿದೆ.

MOST READ: ಕರೋನಾ ವೈರಸ್ ಎಫೆಕ್ಟ್ : ಹಣ್ಣು ವ್ಯಾಪಾರಿಗಳಾದ ಕ್ಯಾಬ್ ಚಾಲಕರು

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 900 ವಾಹನಗಳಿಗೆ ರೂ.1.48 ಲಕ್ಷ ದಂಡ

ಸದ್ಯ ದೇಶದ ಪ್ರಮುಖ ನಗರಗಳಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು, ಸೋಂಕು ಹರಡುವಿಕೆಯನ್ನು ತಡೆಯಲು ಮತ್ತೆ ಲಾಕ್‌ಡೌನ್ ವಿಧಿಸುವ ಪರಿಸ್ಥಿತಿ ಎದುರಾಗಿದೆ. ಇದರಿಂದ ಸಾರ್ವಜನಿಕರು ಕೂಡಾ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದ್ದು, ಅವಶ್ಯಕ ಸಂದರ್ಭಗಳನ್ನು ಹೊರತುಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅನಾವಶ್ಯಕವಾಗಿ ಸುತ್ತಾಡುವುದನ್ನು ಕಡಿಮೆ ಮಾಡುವ ಮೂಲಕ ಸೋಂಕು ಹರಡುವುದನ್ನು ತಪ್ಪಿಸಬೇಕಿದೆ.

Article Published On: Wednesday, July 8, 2020, 21:56 [IST]
English summary
Vehicles Fined For Breaking COVID-19 Curbs. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+