ಮೇ 25ರಿಂದ ಹಾರಾಟ ನಡೆಸಲಿವೆ ವಿಮಾನಗಳು, ಷರತ್ತುಗಳು ಅನ್ವಯ
ಕರೋನಾ ವೈರಸ್ ಸೋಂಕಿನ ಕಾರಣಕ್ಕೆ ದೇಶಾದ್ಯಂತ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಆದರೆ ಈ ನಾಲ್ಕನೇ ಹಂತದ ಲಾಕ್‌ಡೌನ್‌ನಲ್ಲಿ ಸರ್ಕಾರವು ಜನರಿಗೆ ಅನೇಕ ರೀತಿಯ ವಿನಾಯಿತಿಗಳನ್ನು ನೀಡಿದೆ. ಬೇರೆ ಊರುಗಳಲ್ಲಿರುವ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ರೈಲುಗಳ ಸಂಚಾರವನ್ನು ಆರಂಭಿಸಿವೆ.

ಕೇಂದ್ರ ಸರ್ಕಾರವು ರೈಲುಗಳ ಜೊತೆಗೆ ದೇಶಿಯ ವಿಮಾನಯಾನ ಸಂಚಾರವನ್ನು ಆರಂಭಿಸಲು ಮುಂದಾಗಿದೆ. ಕೇಂದ್ರ ಸರ್ಕಾರದ ವರದಿಗಳ ಪ್ರಕಾರ, ದೇಶಿಯ ವಿಮಾನಯಾನ ಸಂಚಾರವು ಮೇ 25ರಿಂದ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಭಾರತ ವಿಮಾನ ನಿಲ್ದಾಣ ಪ್ರಾಧಿಕಾರವು (ಎಎಐ) ಹಲವು ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ.

ಈ ಎಲ್ಲಾ ಮಾರ್ಗಸೂಚಿಗಳನ್ನು ಪ್ರಯಾಣಿಕರು ಕಡ್ಡಾಯವಾಗಿ ಪಾಲಿಸಲೇಬೇಕು. ಈ ಮಾರ್ಗಸೂಚಿಗಳ ಪ್ರಕಾರ ಪ್ರಯಾಣಿಕರು ವಿಮಾನ ನಿಲ್ದಾಣದ ಟರ್ಮಿನಲ್‌ಗೆ ಹೋಗುವ ಮೊದಲು ಥರ್ಮಲ್ ಸ್ಕ್ಯಾನಿಂಗ್‌ಗೆ ಒಳಗಾಗಬೇಕಾಗುತ್ತದೆ. ಇದಲ್ಲದೆ, ಎಲ್ಲಾ ಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಆರೋಗ್ಯ ಸೇತು ಆ್ಯಪ್ ಅಳವಡಿಸಿಕೊಳ್ಳುವುದು ಸಹ ಕಡ್ಡಾಯವಾಗಲಿದೆ.
MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಸರ್ಕಾರವು ಹೊರಡಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸುವ ಪ್ರಯಾಣಿಕರಿಗೆ ಮಾತ್ರವೇ ಪ್ರಯಾಣಿಸಲು ಅವಕಾಶ ನೀಡಲಾಗುತ್ತದೆ. ಇದರ ಜೊತೆಗೆ ವಿಮಾನ ನಿಲ್ದಾಣದಲ್ಲಿರುವ ಆಪರೇಟರ್‌ಗಳು ಟರ್ಮಿನಲ್‌ಗೆ ಹೋಗುವ ಮೊದಲು ಪ್ರಯಾಣಿಕರ ಲಗೇಜ್‌ಗಳನ್ನು ಸ್ವಚ್ವಗೊಳಿಸಲಿದ್ದಾರೆ ಎಂದು ಎಎಐ ಹೇಳಿದೆ.

ವಿಮಾನದಲ್ಲಿ ಪ್ರಯಾಣಿಸಲು ಯಾವ ನಿಯಮಗಳನ್ನು ಅನುಸರಿಸಬೇಕು ಎಂಬುದನ್ನು ನೋಡುವುದಾದರೆ, ಪ್ರಯಾಣಿಕರು ವಿಮಾನ ಹೊರಡುವ ಎರಡು ಗಂಟೆಗಳ ಮೊದಲು ವಿಮಾನ ನಿಲ್ದಾಣಕ್ಕೆ ಬರಬೇಕು. ಪ್ರಯಾಣಿಕರ ಪ್ರಯಾಣ ಅವಧಿ ನಾಲ್ಕು ಗಂಟೆಗಳ ಒಳಗಿದ್ದರೆ ಮಾತ್ರ ಟರ್ಮಿನಲ್ ಕಟ್ಟಡಕ್ಕೆ ಹೋಗಲು ಅವಕಾಶ ನೀಡಲಾಗುತ್ತದೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ಇದರ ಜೊತೆಗೆ ಪ್ರಯಾಣಿಕರು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಗಾಗುವುದು ಕಡ್ಡಾಯವಾಗಿರುತ್ತದೆ. ಎಲ್ಲಾ ಪ್ರಯಾಣಿಕರು ಮಾಸ್ಕ್ ಹಾಗೂ ಹ್ಯಾಂಡ್ ಗ್ಲೌಸ್‌ಗಳನ್ನು ಕಡ್ಡಾಯವಾಗಿ ಧರಿಸಬೇಕು. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪ್ರವೇಶ ನೀಡುವುದಿಲ್ಲ.

ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರು, ವಿಶೇಷ ಸಂದರ್ಭಗಳನ್ನು ಹೊರತುಪಡಿಸಿ ಟ್ರಾಲಿಯನ್ನು ಬಳಸುವಂತಿಲ್ಲ. ಆಯ್ದ ಕ್ಯಾಬ್‌ಗಳಿಗೆ ಹಾಗೂ ಖಾಸಗಿ ವಾಹನಗಳಿಗೆ ಮಾತ್ರ ಪ್ರಯಾಣಿಕರನ್ನು ವಿಮಾನ ನಿಲ್ದಾಣಕ್ಕೆ ಕರೆದೊಯ್ಯಲು ಅವಕಾಶ ನೀಡಲಾಗುತ್ತದೆ.


Click it and Unblock the Notifications