ಚೀನಾ ವಸ್ತುಗಳ ಮೇಲಿನ ಆಮದು ಸುಂಕ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಹಾಗೂ ಭಾರತೀಯ ಸೈನಿಕರ ನಡುವೆ ಸಂಘರ್ಷ ಉಂಟಾದ ನಂತರ, ಕೇಂದ್ರ ಸರ್ಕಾರವು ಚೀನಾದ ಬಗ್ಗೆ ಕಠಿಣ ನಿಲುವನ್ನು ತೆಗೆದುಕೊಳ್ಳುತ್ತಿದೆ. ಕೇಂದ್ರ ಸರ್ಕಾರವು ಚೀನಾದಿಂದ ಆಮದಾಗುತ್ತಿರುವ 370ಕ್ಕೂ ಹೆಚ್ಚು ಸರಕುಗಳ ಮೇಲಿನ ಆಮದು ಸುಂಕವನ್ನು ಹೆಚ್ಚಿಸಲಿದೆ.

ಚೀನಾ ವಸ್ತುಗಳ ಮೇಲಿನ ಆಮದು ಸುಂಕ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಪ್ರಕಾರ, ಕೇಂದ್ರ ಸರ್ಕಾರವು ಚೀನಾದಿಂದ ಆಮದಾಗುವ 370ಕ್ಕೂ ಹೆಚ್ಚು ವಸ್ತುಗಳ ಮೇಲಿನ ಆಮದು ಸುಂಕವನ್ನು ಹೆಚ್ಚಿಸಲಿದೆ. ಇದರಿಂದ ಈ ಸರಕುಗಳು ಭಾರತದಲ್ಲಿಯೇ ಉತ್ಪಾದನೆಯಾಗಲಿದ್ದು, ಚೀನಾದ ಮೇಲಿನ ಅವಲಂಬನೆ ಕಡಿಮೆಯಾಗಲಿದೆ.

ಚೀನಾ ವಸ್ತುಗಳ ಮೇಲಿನ ಆಮದು ಸುಂಕ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಈ 370 ಉತ್ಪನ್ನಗಳಲ್ಲಿ ರಾಸಾಯನಿಕಗಳು, ಉಕ್ಕು, ಎಲೆಕ್ಟ್ರಾನಿಕ್ಸ್, ಭಾರೀ ಯಂತ್ರೋಪಕರಣಗಳು, ಪೀಠೋಪಕರಣಗಳು, ಕಾಗದ, ಕೈಗಾರಿಕಾ ಯಂತ್ರೋಪಕರಣಗಳು, ರಬ್ಬರ್ ಲೇಖನಗಳು, ಗಾಜು, ಲೋಹದ ಲೇಖನಗಳು, ಫಾರ್ಮಾ, ರಸಗೊಬ್ಬರಗಳು ಹಾಗೂ ಪ್ಲಾಸ್ಟಿಕ್ ಆಟಿಕೆಗಳು ಸೇರಿವೆ.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಚೀನಾ ವಸ್ತುಗಳ ಮೇಲಿನ ಆಮದು ಸುಂಕ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಬಿಐಎಸ್ ಮೂಲಗಳ ಪ್ರಕಾರ ಎಸಿ, ಆಟೋ ಮೊಬೈಲ್ ಯುನಿಟ್, ಫರ್ನಿಚರ್, ಕಂಪ್ರೆಷರ್‌ಗಳಂತಹ ಉತ್ಪನ್ನಗಳ ಮೇಲೂ ಆಮದು ಸುಂಕವನ್ನು ಹೆಚ್ಚಿಸುವ ಬಗ್ಗೆ ಚರ್ಚೆಗಳಾಗುತ್ತಿವೆ. ಈ ಎಲ್ಲಾ ಉತ್ಪನ್ನಗಳ ಆಮದು ಸುಂಕವನ್ನು ಹೆಚ್ಚಿಸಲು ಹಾಗೂ ಸ್ಥಳೀಯ ಉತ್ಪಾದನೆಯನ್ನು ಪ್ರೋತ್ಸಾಹಿಸಲು ಸರ್ಕಾರವು ಹಣಕಾಸು ಸಚಿವಾಲಯಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ.

ಚೀನಾ ವಸ್ತುಗಳ ಮೇಲಿನ ಆಮದು ಸುಂಕ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಚೀನಾದ ವಸ್ತುಗಳ ಮೇಲಿನ ಸುಂಕವನ್ನು ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ನಿಯಮಗಳಿಗೆ ಅನುಸಾರವಾಗಿ ಹೆಚ್ಚಿಸಲು ವಾಣಿಜ್ಯ ವ್ಯವಹಾರಗಳ ಇಲಾಖೆಯು ಮುಂದಾಗಿದೆ. ಇವುಗಳಲ್ಲಿ ತಪಾಸಣೆ, ಉತ್ಪನ್ನ ಪರೀಕ್ಷೆ ಹಾಗೂ ಗುಣಮಟ್ಟದ ಪ್ರಮಾಣಪತ್ರಗಳು ಸೇರಿರುತ್ತವೆ.

MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಚೀನಾ ವಸ್ತುಗಳ ಮೇಲಿನ ಆಮದು ಸುಂಕ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಕಳೆದ 40 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಚೀನಾದ ಆಮದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಕರೋನಾ ವೈರಸ್‌ನಿಂದ ಉಂಟಾದ ಲಾಕ್‌ಡೌನ್‌ನಿಂದಾಗಿ ಭಾರತದ ಆರ್ಥಿಕ ವ್ಯವಸ್ಥೆಯು ಸಹ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ.

ಚೀನಾ ವಸ್ತುಗಳ ಮೇಲಿನ ಆಮದು ಸುಂಕ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

2020-21ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ 4.5%ನಷ್ಟು ಕುಸಿಯುತ್ತದೆ ಎಂದು ಡಬ್ಲ್ಯುಟಿಒ ಮುನ್ಸೂಚನೆ ನೀಡಿದೆ. 2021ರ ಏಪ್ರಿಲ್‌ ನಂತರ 1.9%ನಷ್ಟು ಹೆಚ್ಚಾಗುತ್ತದೆ ಎಂದು ಡಬ್ಲ್ಯುಟಿಒ ಹೇಳಿದೆ.

Most Read Articles

Kannada
English summary
After India China military standoff central government to increase tariff on Chinese Auto components. Read in Kannada.
Story first published: Friday, June 26, 2020, 14:34 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X