ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಸ್ಕೋಡಾ ಕಂಪನಿಯು ಹೊಸ ತಲೆಮಾರಿನ ಆಕ್ಟೀವಿಯಾ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಆದರೆ ಕರೋನಾ ವೈರಸ್ ಭೀತಿಯಿಂದ ಹೂಸ ಸ್ಕೋಡಾ ಆಕ್ಟೀವಿಯಾ ಕಾರಿನ ಬಿಡುಗಡೆಯು ಮತ್ತಷ್ಟು ವಿಳಂಬವಾಗಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಹಿಂದಿನ ತಲೆಮಾರಿನ ಸ್ಕೋಡಾ ಆಕ್ಟೀವಿಯಾ ಕಾರನ್ನು 2013ರಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿದ್ದರು. ಈ ಎಸ್‍ಯುವಿಯು ಉತ್ತಮವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗಿದೆ. ಆದರೆ ಸ್ಕೋಡಾ ಕಂಪನಿಯು ಈ ಆಕ್ಟೀವಿಯಾ ಕಾರನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿಲ್ಲ. ಆದರೆ ಈ ವರ್ಷದ ಕೊನೆಯಲ್ಲಿ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಆಕ್ಟೀವಿಯಾ ಕಾರನ್ನು ಬಿಡುಗಡೆಗೊಳಿಸಬೇಕಿತ್ತು. ಆದರೆ ಕರೋನಾ ಬೀತಿಯಿಂದಾಗಿ ಈ ಕಾರಿನ ಬಿಡುಗಡೆಯನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಸ್ಕೋಡಾ ಆಕ್ಟೀವಿಯಾ ಕಾರು ಭಾರತದಲ್ಲಿ ಮೊದಲ ಬಾರಿಗೆ ಸ್ಪಾಟ್ ಟೆಸ್ಟ್ ಅನ್ನು ಇತ್ತೀಚೆಗೆ ನಡೆಸಿದೆ. ಈ ಹೊಸ ಸ್ಕೋಡಾ ಆಕ್ಟೀವಿಯಾ ಕಾರರು ಪುಣೆಯಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರವನ್ನು ಆಟೋಕಾರ್ ಇಂಡಿಯಾ ಬಹಿರಂಗಪಡಿಸಿದೆ.

MOST READ: ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಸ್ಪೈ ಚಿತ್ರದಲ್ಲಿ ಹೊಸ ಆಕ್ಟೀವಿಯಾ ಕಾರು ಹೊಸ ಎಲ್ಇಡಿ ಹೆಡ್ ಲೈಟ್ ಮತ್ತು ಎಲ್ಇಡಿ ಡಿಆರ್ಎಲ್ ಗಳನ್ನು ಹೊಂದಿದೆ. ಇದರೊಂದಿಗೆ ಎಲ್ಇಡಿ ಪಾಗ್ ಲ್ಯಾಂಪ್ ಅನ್ನು ಸಹ ಹೊಂದಿದೆ. ಇದರೊಂದಿಗೆ ಎಲ್‌ಇಡಿ ಟೈಲ್-ಲೈಟ್ ಮತ್ತು ಹೊಸ 17 ಇಂಚಿನ ‘ರೋಟಾರೆ ಏರೋ' ಅಲಾಯ್ ವ್ಹೀಲ್ ಗಳನ್ನು ಹೊಂದಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಹೊಸ ಸ್ಕೋಡಾ ಆಕ್ಟೀವಿಯಾ ಕಾರು ಎಂಕ್ಯೂವಿ ಪ್ಲಾಟ್‌ಫಾರ್ಮ್‌ನಡಿಯಲ್ಲಿ ಅಭಿವೃದ್ದಿಪಡಿಸಲಾಗುತ್ತದೆ. ಈ ಹೊಸ ಸ್ಕೋಡಾ ಆಕ್ಟೀವಿಯಾ 19 ಎಂಎಂ ಉದ್ದ ಮತ್ತು 15 ಎಂಎಂ ಅಗಲವನ್ನು ಹೊಂದಿದೆ.

MOST READ: ಬೆಂಗಳೂರಿನಲ್ಲಿ ಸ್ಪಾಟ್ ಟೆಸ್ಟ್ ನಡೆಸಿದ ನಿಸ್ಸಾನ್ ಮ್ಯಾಗ್ನೆಟ್ ಎಸ್‍ಯುವಿ

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಇಂಟಿರಿಯರ್‍‍ನಲ್ಲಿ ಎಲೆಕ್ಟ್ರಾನಿಕ್ ಆಗಿ ಅಡ್ಜಸ್ಟ್ ಮಾಡಬಹುದಾದ ಫ್ರಂಟ್ ಸೀಟ್ ಮುಂಭಾಗದ ಸೀಟ್‍ ಅಲ್ಕಾಂಟರ್ ಲೆದರ್, ಸ್ಟ್ಯಾಂಡರ್ಡ್ ಲ್ಯಾಪ್ ಟೈಮರ್ ಮತ್ತು ಇಂಟರ್‍‍ನೆಟ್ ಕನೆಕ್ಟಿವಿಟಿ ಫೀಚರ್ಸ್‍‍ಗಳೊಂದಿಗೆ 10 ಇಂಚಿನ ಟಚ್‍‍ಸ್ಕ್ರೀನ್ ಇನ್ಫೋಟೇನ್‍ಮೆಂಟ್‍ ಸಿಸ್ಟಂ ಅನ್ನು ಹೊಂದಿರಲಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಹೊಸ ಸ್ಕೋಡಾ ಅಕ್ಟೀವಾ ಕ್ರ್ಯಾಶ್ ಟೆಸ್ಟ್ ನಲ್ಲಿ ಉತ್ತಮ ರೇಟಿಂಗ್ ಪಡೆದುಕೊಂಡಿದೆ. 2020ರ ಸ್ಕೋಡಾ ಆಕ್ಟೀವಿಯಾ ಹೊಸ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಯುರೋ ಎನ್‍‍‍ಸಿ‍ಎಪಿ ನಡೆಸಿದ ಕ್ರ್ಯಾಶ್ ಟೆಸ್ಟ್ ನಲ್ಲಿ ಸ್ಕೋಡಾ ಆಕ್ಟೀವಾ ಸಂಪೂರ್ಣ 5 ಸ್ಟಾರ್ ರೇಟಿಂಗ್ ಪಡೆದಿದೆ.

MOST READ: ಸ್ಥಗಿತಗೊಂಡಿಲ್ಲ ಫೋಕ್ಸ್‌ವ್ಯಾಗನ್ ಕಾರಿನ ಈ ಮಾದರಿಗಳು

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಸೈಡ್ ಬ್ಯಾರಿಯರ್ ಟೆಸ್ಟ್ ನಲ್ಲಿ ಕಾರಿನ ಕ್ರಿಟಿಕಲ್ ಬಾಡಿಯು ಉತ್ತಮ ರಕ್ಷಣೆಯನ್ನು ಹೊಂದಿದೆ ಎಂದು ರೇಟಿಂಗ್ ನೀಡಲಾಗಿದೆ. ಹೊಸ ಸ್ಕೋಡಾ ಅಕ್ಟೀವಿಯಾ ಚಿಲ್ಡ್ ಒಕಿಪ್ಯಾಡ್ ಪ್ರೊಟಕ್ಷನ್ ಟೆಸ್ಟ್ ನಲ್ಲಿ 43.2 ಅಂಕಗಳನ್ನು ಗಳಿಸಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಸ್ಕೋಡಾ ಆಕ್ಟೀವಿಯಾ ಕಾರು

ಇನ್ನು ಹೊಸ ಸ್ಕೋಡಾ ಆಕ್ಟೀವಿಯಾ ಕಾರಿನಲ್ಲಿ 1.5-ಲೀಟರ್ ಟಿಎಸ್ಐ ಎಂಜಿನ್ ಮತ್ತು ಲೀಟರ್ ಟಿಎಸ್‌ಐ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಬಹುದು. ಇದು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ ಸೆಡಾನ್ ಆಗಿದೆ. ಅಲ್ಲದೇ ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ.

Article Published On: Friday, July 24, 2020, 16:58 [IST]
English summary
All New Skoda Octavia Spotted Testing In India. Read In Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+