ಹೋಂಡಾ ಸಿಟಿ, ಮಾರುತಿ ಸಿಯಾಜ್ ಕಾರುಗಳಿಗೆ ಪೈಪೋಟಿಯಾಗಿ ಟಾಟಾದಿಂದ ಹೊಸ ಸೆಡಾನ್

ಮಧ್ಯಮ ಕ್ರಮಾಂಕದ ಸೆಡಾನ್ ಕಾರು ಆವೃತ್ತಿಗಳಿಗೆ ಭಾರತದಲ್ಲಿ ಉತ್ತಮ ಬೇಡಿಕೆಯಿದ್ದು, ಈ ನಿಟ್ಟಿನಲ್ಲಿ ಹೊಸ ಯೋಜನೆ ರೂಪಿಸಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಹೊಸ ಮಾದರಿಯ ಸೆಡಾನ್ ಆವೃತ್ತಿಯೊಂದನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದೆ.

ಹೋಂಡಾ ಸಿಟಿ, ಮಾರುತಿ ಸಿಯಾಜ್ ಕಾರುಗಳಿಗೆ ಪೈಪೋಟಿಯಾಗಿ ಟಾಟಾದಿಂದ ಹೊಸ ಸೆಡಾನ್

ಪ್ರಸ್ತುತ ಮಾರುಕಟ್ಟೆಯಲ್ಲಿನ ಹೊಸ ಕಾರು ಮಾರಾಟಾದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಟಾಟಾ ಮೋಟಾರ್ಸ್ ಕಂಪನಿಯು ಮುಂದಿನ 2 ವರ್ಷಗಳ ಅವಧಿಯಲ್ಲಿ ಆರಕ್ಕೂ ಹೆಚ್ಚು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ಆಲ್ಫಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಹೊಸ ಮಾದರಿಯ ಸಿ ಸೆಗ್ಮೆಂಟ್ ಸೆಡಾನ್ ಮಾದರಿಯೊಂದನ್ನು ಅಭಿವೃದ್ದಿಗೊಳಿಸುತ್ತಿದೆ.

ಹೋಂಡಾ ಸಿಟಿ, ಮಾರುತಿ ಸಿಯಾಜ್ ಕಾರುಗಳಿಗೆ ಪೈಪೋಟಿಯಾಗಿ ಟಾಟಾದಿಂದ ಹೊಸ ಸೆಡಾನ್

ಹೊಸ ಸೆಡಾನ್ ಆವೃತ್ತಿಯು ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಮಾರುತಿ ಸುಜುಕಿ ಸಿಯಾಜ್, ಹೋಂಡಾ ಸಿಟಿ, ಹ್ಯುಂಡೈ ವೆರ್ನಾ ಮತ್ತು ಸ್ಕೋಡಾ ರ‍್ಯಾಪಿಡ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಇತ್ತೀಚೆಗೆ ಬಿಡುಗಡೆಯಾಗಿರುವ ಆಲ್‌ಟ್ರೊಜ್ ಡಿಸೈನ್ ಆಧರಿಸಿ ಹೊಸ ಕಾರನ್ನು ಸಿದ್ದಪಡಿಸಲಾಗುತ್ತಿದೆ.

ಹೋಂಡಾ ಸಿಟಿ, ಮಾರುತಿ ಸಿಯಾಜ್ ಕಾರುಗಳಿಗೆ ಪೈಪೋಟಿಯಾಗಿ ಟಾಟಾದಿಂದ ಹೊಸ ಸೆಡಾನ್

ಹೊಸ ಕಾರನ್ನು ಸದ್ಯ ಎಕ್ಸ್ 452 ಹೆಸರಿನೊಂದಿಗೆ ಅಧಿಕೃತವಾಗಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಹೊಸ ಕಾರು ಬಹುತೇಕ ಆಲ್‌ಟ್ರೊಜ್ ಮತ್ತು ಇ-ವಿಷನ್ ಕಾರಿನ ಹೋಲಿಕೆಯನ್ನೇ ಪಡೆದುಕೊಂಡಿದೆ.

ಹೋಂಡಾ ಸಿಟಿ, ಮಾರುತಿ ಸಿಯಾಜ್ ಕಾರುಗಳಿಗೆ ಪೈಪೋಟಿಯಾಗಿ ಟಾಟಾದಿಂದ ಹೊಸ ಸೆಡಾನ್

ಮಾಹಿತಿಗಳ ಪ್ರಕಾರ, ಹೊಸ ಕಾರು ಅಧಿಕೃತವಾಗಿ ಪೆರೆಗ್ರಿನ್ ಹೆಸರು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಜೋಡಣೆ ಮಾಡಲಾಗಿದೆ. ಜೊತೆಗೆ ಹೊಸ ಕಾರಿನಲ್ಲಿ ಆಲ್‌ಟ್ರೊಜ್ ಮತ್ತು ಇ-ವಿಷನ್ ಕಾರುಗಳ ವಿನ್ಯಾಸವನ್ನು ಎರವಲು ಪಡೆಯಲಾಗಿದ್ದರೂ ಸಹ ಸೆಡಾನ್ ಕಾರುಗಳಲ್ಲೇ ವಿಶೇಷ ಎನ್ನಿಸುವ ಹಲವು ಹೊಸ ಫೀಚರ್ಸ್‌ಗಳು ಹೊಸ ಪೆರೆಗ್ರಿನ್ ಕಾರಿನಲ್ಲಿರಲಿದ್ದು, ಎಂಜಿನ್ ಆಯ್ಕೆ ಗಮನಸೆಳೆಯಲಿದೆ.

ಹೋಂಡಾ ಸಿಟಿ, ಮಾರುತಿ ಸಿಯಾಜ್ ಕಾರುಗಳಿಗೆ ಪೈಪೋಟಿಯಾಗಿ ಟಾಟಾದಿಂದ ಹೊಸ ಸೆಡಾನ್

ಎಂಜಿನ್ ಸಾಮರ್ಥ್ಯ

ಹೊಸ ಸೆಡಾನ್ ಕಾರಿನಲ್ಲಿ ನೆಕ್ಸಾನ್ ಎಸ್‌ಯುವಿಯಲ್ಲಿ ಬಳಸಲಾಗಿರುವ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಮತ್ತು 1.5-ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಜೋಡಣೆ ಮಾಡುವ ಸಾಧ್ಯತೆಗಳಿದ್ದು, ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಇಂಧನ ದಕ್ಷತೆಯಲ್ಲೂ ಗಮನಸೆಳೆಯಲಿದೆ.

ಹೋಂಡಾ ಸಿಟಿ, ಮಾರುತಿ ಸಿಯಾಜ್ ಕಾರುಗಳಿಗೆ ಪೈಪೋಟಿಯಾಗಿ ಟಾಟಾದಿಂದ ಹೊಸ ಸೆಡಾನ್

ಈ ಮೂಲಕ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿಯಾಗಿರುವ ಪೆರೆಗ್ರಿನ್ ಕಾರು ಮಾದರಿಯು 4,400 ಎಂಎಂ ಉದ್ದಳತೆಯೊಂದಿಗೆ ಬೆಲೆ ವಿಚಾರದಲ್ಲೂ ಸೆಡಾನ್ ಪ್ರಿಯರ ಆಕರ್ಷಣೆ ಮಾಡಲಿದೆ.

ಹೋಂಡಾ ಸಿಟಿ, ಮಾರುತಿ ಸಿಯಾಜ್ ಕಾರುಗಳಿಗೆ ಪೈಪೋಟಿಯಾಗಿ ಟಾಟಾದಿಂದ ಹೊಸ ಸೆಡಾನ್

ಹೊಸ ಕಾರಿನ ಕುರಿತಾಗಿ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಇಲ್ಲವಾದರೂ ಸೆಡಾನ್ ಕಾರು ಮಾದರಿಗಳಲ್ಲೇ ಪ್ರೀಮಿಯಂ ಫೀಚರ್ಸ್ ಹೊಂದಲಿರುವ ಪೆರೆಗ್ರಿನ್ ಕಾರು ಸುರಕ್ಷತಾ ವಿಚಾರದಲ್ಲಿ 5 ಸ್ಟಾರ್ ಗಿಟ್ಟಿಸಿಕೊಂಡಿರುವುದರಲ್ಲಿ ಯಾವುದೇ ಅನುಮಾನವಿಲ್ಲ.

ಹೋಂಡಾ ಸಿಟಿ, ಮಾರುತಿ ಸಿಯಾಜ್ ಕಾರುಗಳಿಗೆ ಪೈಪೋಟಿಯಾಗಿ ಟಾಟಾದಿಂದ ಹೊಸ ಸೆಡಾನ್

ಪೆರೆಗ್ರಿನ್ ಕಾರು ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು)

ಸದ್ಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿರುವ ಹೊಸ ಪೆರೆಗ್ರಿನ್ ಕಾರು ಮಾದರಿಯು ಇದೇ ವರ್ಷಾಂತ್ಯಕ್ಕೆ ಇಲ್ಲವೇ 2021ರ ಆರಂಭದಲ್ಲಿ ಬಿಡುಗಡೆಯಾಗಲಿದ್ದು, ಕಾರಿನ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.8.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.13 ಲಕ್ಷ ಬೆಲೆ ಹೊಂದಿರುವ ಸಾಧ್ಯತೆಗಳಿವೆ.

ಹೋಂಡಾ ಸಿಟಿ, ಮಾರುತಿ ಸಿಯಾಜ್ ಕಾರುಗಳಿಗೆ ಪೈಪೋಟಿಯಾಗಿ ಟಾಟಾದಿಂದ ಹೊಸ ಸೆಡಾನ್

ಇನ್ನು ಟಾಟಾ ಮೋಟಾರ್ಸ್ ಸಂಸ್ಥೆಯು ಮುಂಬರುವ ಕೆಲವೇ ದಿನಗಳಲ್ಲಿ ಗ್ರಾವಿಟಾಸ್ ಎಸ್‌ಯುವಿ, ಹಾರ್ನ್‌ಬಿಲ್ ಹ್ಯಾಚ್‌ಬ್ಯಾಕ್ ಮತ್ತು ಆಲ್‌ಟ್ರೊಜ್ ಎಲೆಕ್ಟ್ರಿಕ್ ಕಾರು ಆವೃತ್ತಿಗಳನ್ನು ಬಿಡುಗಡೆಗೊಳಿಸುತ್ತಿದ್ದು, ತದನಂತರವಷ್ಟೇ ಹೊಸ ಸೆಡಾನ್ ಆವೃತ್ತಿಯು ಮಾರುಕಟ್ಟೆ ಪ್ರವೇಶಿಸಲಿದೆ.

Source: Indianautosblog

Most Read Articles

Kannada
English summary
According to report, All new Tata premium sedan is internally called Tata Peregrin and also used ‘Tata X452’ code name for suppliers. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X