Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರು ಖರೀದಿಸಿದ ಬಿಗ್ ಬಿ
ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರ ಕಾರುಗಳ ಕ್ರೇಜ್ ಎಷ್ಟಿದೆ ಎಂದು ಎಲ್ಲರಿಗೂ ಗೊತ್ತಿದೆ. ವಿಶ್ವದ ಬಹುತೇಕ ಐಷಾರಾಮಿ ಕಾರುಗಳನ್ನು ಬಿಗ್ ಬಿ ಅವರ ಗ್ಯಾರೇಜ್‌ನಲ್ಲಿ ನೋಡಬಹುದಾಗಿದೆ. ಕಾರುಗಳು ಎಂದರೆ ಬಿಗ್ ಬಿ ಅವರಿಗೆ ವಿಶೇಷ ಪ್ರೀತಿ.

ಅಮಿತಾಭ್ ಬಚ್ಚನ್ ಅವರ ಕಾರುಗಳ ಗ್ಯಾರೇಜ್‌ಗೆ ಹೊಸ ಅತಿಥಿಯ ಸೇರ್ಪಡೆಯಾಗಿದೆ. ಅಮಿತಾಭ್ ಬಚ್ಚನ್ ಅವರು ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಅನ್ನು ಖರೀದಿಸಿದ್ದಾರೆ. ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್ ಅವರು ಖರೀದಿಸಿದ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.38 ಕೋಟಿಯಾಗಿದೆ. ಇನ್ನು ಈ ಸಂಕಷ್ಟದ ಸಮಯದಲ್ಲಿ ಐಷಾರಾಮಿ ಕಾರು ಖರೀದಿಸಿರುವುದಕ್ಕೆ ಬಿಗ್ ಬಿ ಅವರನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ಮರ್ಸಿಡಿಸ್ ಬೆಂಝ್ ಡೀಲರುಗಳು ಮುಂಬೈನಲ್ಲಿರುವ ಅಮಿತಾಭ್ ಬಚ್ಚನ್ ಅವರ ನಿವಾಸಕ್ಕೆ ತೆರಳಿ ಎಸ್-ಕ್ಲಾಸ್ ಕಾರನ್ನು ವಿತರಿಸಿದರು. ಇವರು ಖರೀದಿಸಿರುವುದು ಮರ್ಸಿಡಿಸ್ ಎಸ್-ಕ್ಲಾಸ್‌ನ 350 ಡಿ ರೂಪಾಂತರವಾಗಿದೆ.
MOST READ: ಮಿನಿ ಕ್ಲಬ್‍ಮ್ಯಾನ್ ಸ್ಪೆಷಲ್ ಎಡಿಷನ್ ಕಾರು ಖರೀದಿಸಿದ ಮಲಯಾಳಂ ಚಿತ್ರರಂಗದ ಖ್ಯಾತ ನಟ

ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರು 3.0-ಲೀಟರ್, ಇನ್ ಲೈನ್-ಸಿಲಿಂಡರ್ ಮೋಟಾರ್ ಅನ್ನು ಹೊಂದಿದೆ. ಇದು 282 ಬಿಹೆಚ್‍ಪಿ ಪವರ್ ಮತ್ತು 600 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೊಸ ಎಸ್-ಕ್ಲಾಸ್ ವಿ6 ಪೆಟ್ರೋಲ್ ಎಂಜಿನ್ ಅನ್ನು ಕೂಡ ಹೊಂದಿದೆ. ಈ ಎಂಜಿನ್ 362 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಕಾರು ಕೇವಲ 6 ಸೆಕೆಂಡುಗಳಲ್ಲಿ 0-100 ಕಿ.ಮೀ ಅನ್ನು ಕ್ರಮಿಸುತ್ತದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಅಮಿತಾಭ್ ಬಚ್ಚನ್ ಅವರು ಮಸೆರೆಟಿ ಕ್ಯಾಲಿಬಾರ್, ಲೆಕ್ಸಸ್ ಎಲ್ಎಕ್ಸ್750, ಮರ್ಸಿಡಿಸ್ ಬೆಂಝ್ ಮೇಬ್ಯಾಚ್ ಎಸ್500, ಬೆಂಟ್ಲಿ ಕಾಂಟಿನೆಂಟಲ್ ಜಿಟಿ, ಪೋರ್ಷೆ ಕೆಮ್ಯಾನ್, ಕೂಪೆ ಎಸ್-ಕ್ಲಾಸ್, ಮರ್ಸಿಡಿಸ್ ಬೆಂಝ್ ವಿ-ಕ್ಲಾಸ್ ಎಂಪಿವಿ, ಲ್ಯಾಂಡ್ ಕ್ರೂಸರ್, ಆಡಿ ಕ್ಯೂ5 ಮತ್ತು ಬಿಎಂಡಬ್ಲ್ಯು 6 ಸೀರಿಸ್ ಕಾರುಗಳನ್ನು ಕೂಡ ಹೊಂದಿದ್ದಾರೆ.

ಇನ್ನು ಜರ್ಮನಿಯ ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಹೊಸ ತಲೆಮಾರಿನ ಎಸ್-ಕ್ಲಾಸ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದ. ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರಿನಲ್ಲಿ ಅತ್ಯಾಕರ್ಷಕ ಹೈಟಕ್ ಫೀಚರ್‌ಗಳನ್ನು ಹೊಂದಿರಲಿದೆ.
MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಈ ಎಸ್-ಕ್ಲಾಸ್ ಕಾರಿನ ಇ-ಆಕ್ಟಿವ್ ಬಾಡಿ ಕಂಟ್ರೋಲ್ ಸಿಸ್ಟಂ ಅನ್ನು ಹೊಂದಿದೆ. ಈ ಸಿಸ್ಟಂ ಈಗಾಗಲೇ ಜಿಎಲ್ಇ ಮತ್ತು ಜಿಎಲ್ಎಸ್ ನಂತಹ ಎಸ್‍ಯುವಿಗಳಲ್ಲಿ ಈ ಫೀಚರ್ ಲಭ್ಯವಿದೆ. ಇದು ಅಪಘಾತದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆಯನ್ನು ನೀಡುತ್ತದೆ.

ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಮಾದರಿಯು ಬಿಎಂಡಬ್ಲ್ಯು 7 ಸೀರಿಸ್, ಜಾಗ್ವಾರ್ ಎಕ್ಸ್‌ಜೆ, ಆಡಿ ಎ8, ಪೋರ್ಷೆ ಪನಾಮೆರಾ ಮತ್ತು ಮೆಸಾರಟಿ ಕಾರು ಕ್ವಾಟ್ರೊಪೋರ್ಟ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.