ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರು ಖರೀದಿಸಿದ ಬಿಗ್ ಬಿ

ಬಾಲಿವುಡ್ ನಟ ಅಮಿತಾಭ್‌ ಬಚ್ಚನ್‌ ಅವರ ಕಾರುಗಳ ಕ್ರೇಜ್ ಎಷ್ಟಿದೆ ಎಂದು ಎಲ್ಲರಿಗೂ ಗೊತ್ತಿದೆ. ವಿಶ್ವದ ಬಹುತೇಕ ಐಷಾರಾಮಿ ಕಾರುಗಳನ್ನು ಬಿಗ್ ಬಿ ಅವರ ಗ್ಯಾರೇಜ್‌ನಲ್ಲಿ ನೋಡಬಹುದಾಗಿದೆ. ಕಾರುಗಳು ಎಂದರೆ ಬಿಗ್ ಬಿ ಅವರಿಗೆ ವಿಶೇಷ ಪ್ರೀತಿ.

ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರು ಖರೀದಿಸಿದ ಬಿಗ್ ಬಿ

ಅಮಿತಾಭ್‌ ಬಚ್ಚನ್‌ ಅವರ ಕಾರುಗಳ ಗ್ಯಾರೇಜ್‌ಗೆ ಹೊಸ ಅತಿಥಿಯ ಸೇರ್ಪಡೆಯಾಗಿದೆ. ಅಮಿತಾಭ್‌ ಬಚ್ಚನ್‌ ಅವರು ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಅನ್ನು ಖರೀದಿಸಿದ್ದಾರೆ. ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಭ್‌ ಬಚ್ಚನ್‌ ಅವರು ಖರೀದಿಸಿದ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.38 ಕೋಟಿಯಾಗಿದೆ. ಇನ್ನು ಈ ಸಂಕಷ್ಟದ ಸಮಯದಲ್ಲಿ ಐಷಾರಾಮಿ ಕಾರು ಖರೀದಿಸಿರುವುದಕ್ಕೆ ಬಿಗ್ ಬಿ ಅವರನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರು ಖರೀದಿಸಿದ ಬಿಗ್ ಬಿ

ಮರ್ಸಿಡಿಸ್ ಬೆಂಝ್ ಡೀಲರುಗಳು ಮುಂಬೈನಲ್ಲಿರುವ ಅಮಿತಾಭ್‌ ಬಚ್ಚನ್‌ ಅವರ ನಿವಾಸಕ್ಕೆ ತೆರಳಿ ಎಸ್-ಕ್ಲಾಸ್ ಕಾರನ್ನು ವಿತರಿಸಿದರು. ಇವರು ಖರೀದಿಸಿರುವುದು ಮರ್ಸಿಡಿಸ್ ಎಸ್-ಕ್ಲಾಸ್‌ನ 350 ಡಿ ರೂಪಾಂತರವಾಗಿದೆ.

MOST READ: ಮಿನಿ ಕ್ಲಬ್‍‍ಮ್ಯಾನ್ ಸ್ಪೆಷಲ್ ಎಡಿಷನ್ ಕಾರು ಖರೀದಿಸಿದ ಮಲಯಾಳಂ ಚಿತ್ರರಂಗದ ಖ್ಯಾತ ನಟ

ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರು ಖರೀದಿಸಿದ ಬಿಗ್ ಬಿ

ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್‌ ಕಾರು 3.0-ಲೀಟರ್, ಇನ್ ಲೈನ್-ಸಿಲಿಂಡರ್ ಮೋಟಾರ್ ಅನ್ನು ಹೊಂದಿದೆ. ಇದು 282 ಬಿಹೆಚ್‍ಪಿ ಪವರ್ ಮತ್ತು 600 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರು ಖರೀದಿಸಿದ ಬಿಗ್ ಬಿ

ಹೊಸ ಎಸ್-ಕ್ಲಾಸ್ ವಿ6 ಪೆಟ್ರೋಲ್ ಎಂಜಿನ್‌ ಅನ್ನು ಕೂಡ ಹೊಂದಿದೆ. ಈ ಎಂಜಿನ್ 362 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಕಾರು ಕೇವಲ 6 ಸೆಕೆಂಡುಗಳಲ್ಲಿ 0-100 ಕಿ.ಮೀ ಅನ್ನು ಕ್ರಮಿಸುತ್ತದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರು ಖರೀದಿಸಿದ ಬಿಗ್ ಬಿ

ಅಮಿತಾಭ್‌ ಬಚ್ಚನ್‌ ಅವರು ಮಸೆರೆಟಿ ಕ್ಯಾಲಿಬಾರ್, ಲೆಕ್ಸಸ್ ಎಲ್ಎಕ್ಸ್750, ಮರ್ಸಿಡಿಸ್ ಬೆಂಝ್ ಮೇಬ್ಯಾಚ್ ಎಸ್500, ಬೆಂಟ್ಲಿ ಕಾಂಟಿನೆಂಟಲ್ ಜಿಟಿ, ಪೋರ್ಷೆ ಕೆಮ್ಯಾನ್, ಕೂಪೆ ಎಸ್-ಕ್ಲಾಸ್, ಮರ್ಸಿಡಿಸ್ ಬೆಂಝ್ ವಿ-ಕ್ಲಾಸ್ ಎಂಪಿವಿ, ಲ್ಯಾಂಡ್ ಕ್ರೂಸರ್, ಆಡಿ ಕ್ಯೂ5 ಮತ್ತು ಬಿಎಂಡಬ್ಲ್ಯು 6 ಸೀರಿಸ್ ಕಾರುಗಳನ್ನು ಕೂಡ ಹೊಂದಿದ್ದಾರೆ.

ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರು ಖರೀದಿಸಿದ ಬಿಗ್ ಬಿ

ಇನ್ನು ಜರ್ಮನಿಯ ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಹೊಸ ತಲೆಮಾರಿನ ಎಸ್-ಕ್ಲಾಸ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದ. ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರಿನಲ್ಲಿ ಅತ್ಯಾಕರ್ಷಕ ಹೈಟಕ್ ಫೀಚರ್‌ಗಳನ್ನು ಹೊಂದಿರಲಿದೆ.

MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರು ಖರೀದಿಸಿದ ಬಿಗ್ ಬಿ

ಈ ಎಸ್-ಕ್ಲಾಸ್ ಕಾರಿನ ಇ-ಆಕ್ಟಿವ್ ಬಾಡಿ ಕಂಟ್ರೋಲ್ ಸಿಸ್ಟಂ ಅನ್ನು ಹೊಂದಿದೆ. ಈ ಸಿಸ್ಟಂ ಈಗಾಗಲೇ ಜಿಎಲ್ಇ ಮತ್ತು ಜಿಎಲ್ಎಸ್ ನಂತಹ ಎಸ್‍ಯುವಿಗಳಲ್ಲಿ ಈ ಫೀಚರ್ ಲಭ್ಯವಿದೆ. ಇದು ಅಪಘಾತದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆಯನ್ನು ನೀಡುತ್ತದೆ.

ಐಷಾರಾಮಿ ಮರ್ಸಿಡಿಸ್ ಬೆಂಝ್ ಕಾರು ಖರೀದಿಸಿದ ಬಿಗ್ ಬಿ

ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಮಾದರಿಯು ಬಿಎಂಡಬ್ಲ್ಯು 7 ಸೀರಿಸ್, ಜಾಗ್ವಾರ್ ಎಕ್ಸ್‌ಜೆ, ಆಡಿ ಎ8, ಪೋರ್ಷೆ ಪನಾಮೆರಾ ಮತ್ತು ಮೆಸಾರಟಿ ಕಾರು ಕ್ವಾಟ್ರೊಪೋರ್ಟ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Amitabh Bachchan Gifts Himself A New Mercedes-Benz S-Class. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X