Just In
Don't Miss!
- Movies
ಜನವರಿ 22ರಂದು ಐದು ಕನ್ನಡ ಸಿನಿಮಾ ಬಿಡುಗಡೆ
- News
ಲಿಂಗಾಂಬೂದಿಪಾಳ್ಯ ಕೆರೆಗೆ ಹರಿಯಲಿದೆ ಕೆಆರ್ಎಸ್ ನೀರು
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹತ್ತು ಲಕ್ಷ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಯೋಜನೆ ರೂಪಿಸಿದ ಆಂಧ್ರ ಸರ್ಕಾರ
ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕ್ಷೇತ್ರದಲ್ಲಿ ರೂ.30,000 ಕೋಟಿಗಳ ಹೂಡಿಕೆಯನ್ನು ಆಕರ್ಷಿಸಲು ಹಾಗೂ 60,000 ಉದ್ಯೋಗಗಳನ್ನು ಸೃಷ್ಟಿಸಲು ಆಂಧ್ರಪ್ರದೇಶ ಸರ್ಕಾರವು ಚಿಂತನೆ ನಡೆಸಿದೆ. 2024ರ ವೇಳೆಗೆ 10 ಲಕ್ಷ ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಗೆ ತರಲು ಆಂಧ್ರ ಪ್ರದೇಶ ಸರ್ಕಾರವು ಯೋಜಿಸಿದೆ.

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿಯನ್ನು ಉತ್ತೇಜಿಸಲು ಉತ್ಪಾದನಾ ಘಟಕಗಳ ಸಹಯೋಗದೊಂದಿಗೆ ಸಮಗ್ರ ಸಂಶೋಧನೆ ಹಾಗೂ ಅಭಿವೃದ್ಧಿ ವ್ಯವಸ್ಥೆಯನ್ನು ಸ್ಥಾಪಿಸುವ ಯೋಜನೆಯನ್ನು ಆಂಧ್ರಪ್ರದೇಶ ಸರ್ಕಾರವು ಪ್ರಕಟಿಸಿದೆ. ಹಣಕಾಸು ಆಯೋಗವು ಕರೆದಿದ್ದ ಉನ್ನತ ಮಟ್ಟದ ಸಭೆಯಲ್ಲಿ ಆಂಧ್ರಪ್ರದೇಶ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಗೆಗಿನ ಯೋಜನೆಗಳನ್ನು ಮಂಡಿಸಿತು.

2029ರ ವೇಳೆಗೆ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮದ 11,000 ಬಸ್‌ಗಳನ್ನು ಎಲೆಕ್ಟ್ರಿಕ್ ಬಸ್‌ಗಳಾಗಿ ಪರಿವರ್ತಿಸಲಾಗುವುದು ಎಂದು ಆಂಧ್ರಪ್ರದೇಶ ಸರ್ಕಾರವು ತಿಳಿಸಿದೆ. ಈ ಸಭೆಯಲ್ಲಿ ಆಂಧ್ರಪ್ರದೇಶ ಸರ್ಕಾರದ ಸಾರಿಗೆ ಹಾಗೂ ಕೈಗಾರಿಕಾ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

2024ರ ವೇಳೆಗೆ ವಿಶಾಖಪಟ್ಟಣ, ವಿಜಯವಾಡ, ತಿರುಪತಿ ಹಾಗೂ ಗುಂಟೂರು ಸೇರಿದಂತೆ ನಾಲ್ಕು ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಆಂಧ್ರಪ್ರದೇಶ ಸರ್ಕಾರ ಹೇಳಿದೆ.

ಇದೇ ವೇಳೆ 2030ರ ವೇಳೆಗೆ ಎಲ್ಲಾ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. 2024ರ ವೇಳೆಗೆ ಒಂದು ಲಕ್ಷ ಚಾರ್ಜಿಂಗ್ ಸ್ಟೇಷನ್'ಗಳನ್ನು ಸ್ಥಾಪಿಸುವ ಯೋಜನೆಯನ್ನು ಹೊಂದಲಾಗಿದೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಸದ್ಯಕ್ಕೆ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗನ್ನು ಚಾರ್ಜ್ ಮಾಡಲು ಚಾರ್ಜಿಂಗ್ ಸ್ಟೇಷನ್'ಗಳ ಕೊರತೆ ಎದುರಾಗಿದೆ. ಈ ಕಾರಣಕ್ಕೆ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಉತ್ತೇಜನ ನೀಡುವ ಸಲುವಾಗಿ ಆಂಧ್ರ ಪ್ರದೇಶ ಸರ್ಕಾರವು ಹೆಚ್ಚಿನ ಸಂಖ್ಯೆಯಲ್ಲಿ ಚಾರ್ಜಿಂಗ್ ಸ್ಟೇಷನ್'ಗಳನ್ನು ನಿರ್ಮಿಸಲು ಮುಂದಾಗಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಈ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಯೊಬ್ಬರು ಮಾತನಾಡಿ ಆಂಧ್ರಪ್ರದೇಶದ ಎಲ್ಲಾ ಸರ್ಕಾರಿ ವಾಹನಗಳನ್ನು 2024ರ ವೇಳೆಗೆ ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸಲಾಗುವುದು ಎಂದು ಹೇಳಿದರು.

ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳಿಂದ ಪರಿಸರಕ್ಕೆ ಹಾನಿಯಾಗುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸುವ ಅವಶ್ಯಕತೆ ಎದುರಾಗಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಎಲೆಕ್ಟ್ರಿಕ್ ವಾಹನಗಳ ಬಳಕೆಯಿಂದ ಕಚ್ಚಾ ತೈಲ ಆಮದು ಪ್ರಮಾಣವನ್ನು ಸಹ ಕಡಿಮೆ ಮಾಡಬಹುದು. ಈ ಕಾರಣಕ್ಕೆ ಕೇಂದ್ರ ಸರ್ಕಾರದ ಜೊತೆಗೆ ಕರ್ನಾಟಕ, ಕೇರಳ, ದೆಹಲಿಯಂತಹ ವಿವಿಧ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುತ್ತಿವೆ. ಇದರ ಅಂಗವಾಗಿ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ವಿವಿಧ ಕೊಡುಗೆಗಳನ್ನು ನೀಡಲಾಗುತ್ತಿದೆ.
ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.